
ಗಾಜಿಯಾಬಾದ್ನ ದೆಹಲಿ-ಮೀರತ್ ಎಕ್ಸ್ಪ್ರೆಸ್ವೇಯಲ್ಲಿ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. ವಿವರಗಳ ಪ್ರಕಾರ, ಬಸ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ಎಂಟು ವರ್ಷದ ಬಾಲಕಿ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಸೋಮವಾರ, ಉತ್ತರ ಪ್ರದೇಶದ ಪ್ರತಾಪ್ಗಢ್ನ ಲೀಲಾಪುರ ಪ್ರದೇಶದಲ್ಲಿ ಟೆಂಪೋ ಮೇಲೆ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದರೆ, ಏಳು ಜನರು ಗಾಯಗೊಂಡಿದ್ದರು.
ಮತ್ತಷ್ಟು ಓದಿ: ಚಿಕ್ಕಬಳ್ಳಾಪುರ: ಬೈಕ್-ಸ್ಕೂಟಿಗೆ ಟೆಂಪೊ ಡಿಕ್ಕಿ, ದಂಪತಿ ಸ್ಥಳದಲ್ಲೇ ಸಾವು, ಮಕ್ಕಳಿಗೆ ಗಾಯ
ಜಿಲ್ಲಾ ಕೇಂದ್ರದಿಂದ ಸುಮಾರು 15 ಕಿ.ಮೀ ದೂರದಲ್ಲಿರುವ ಲಕ್ನೋ-ವಾರಾಣಸಿ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:26 am, Tue, 11 July 23