AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘಜಿಯಾಬಾದ್​ನಲ್ಲಿ ಭಾರೀ ಅಗ್ನಿ ಅವಘಡ; ಗೋಶಾಲೆಗೆ ಬೆಂಕಿ ತಗುಲಿ 50 ಹಸುಗಳು ಸಜೀವ ದಹನ

ಯಾವುದೇ ಮನುಷ್ಯರಿಗೆ ಅಪಾಯವಾಗಿಲ್ಲವಾದರೂ 50ಕ್ಕೂ ಹೆಚ್ಚು ದನಗಳು ಸಜೀವ ದಹನವಾಗಿವೆ. ಬೆಂಕಿಯ ನಿಖರವಾದ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ.

ಘಜಿಯಾಬಾದ್​ನಲ್ಲಿ ಭಾರೀ ಅಗ್ನಿ ಅವಘಡ; ಗೋಶಾಲೆಗೆ ಬೆಂಕಿ ತಗುಲಿ 50 ಹಸುಗಳು ಸಜೀವ ದಹನ
ಬೆಂಕಿ ಅವಘಡ
TV9 Web
| Edited By: |

Updated on: Apr 11, 2022 | 9:34 PM

Share

ಘಜಿಯಾಬಾದ್: ಘಜಿಯಾಬಾದ್‌ನ ಇಂದಿರಾಪುರಂ ಪ್ರದೇಶದ ಕೊಳೆಗೇರಿಯಲ್ಲಿ ಇಂದು ಮಧ್ಯಾಹ್ನ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಸಮೀಪದ ದನದ ಕೊಟ್ಟಿಗೆಗೆ ಬೆಂಕಿ ಹೊತ್ತಿಕೊಂಡಿದ್ದರಿಂದ 50 ಹಸು ಹಾಗೂ ಕರುಗಳು ಬೆಂಕಿಗೆ ಆಹುತಿಯಾಗಿವೆ. ವರದಿಗಳ ಪ್ರಕಾರ, ಬೆಂಕಿ ಹೊತ್ತಿಕೊಂಡ ಸ್ಥಳದ ಸಮೀಪದಲ್ಲಿಯೇ ಇಂಡಿಯನ್ ಆಯಿಲ್ ಗೋಡೌನ್ ಇದೆ. ಹೀಗಾಗಿ, ಕೆಲವು ಎಲ್‌ಪಿಜಿ ಸಿಲಿಂಡರ್ (LPG Cylinder) ಸ್ಫೋಟಗೊಂಡಿದ್ದು, ಆ ಶಬ್ದಕ್ಕೆ ಸ್ಥಳೀಯರು ಓಡಿಬಂದು ನೋಡಿದಾಗ ಕೊಟ್ಟಿಗೆಗೆ ಬೆಂಕಿ ಹೊತ್ತಿಕೊಂಡಿರುವ ವಿಷಯ ಗೊತ್ತಾಗಿದೆ.

ವಿಷಯ ತಿಳಿದ ಕೂಡಲೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಸ್ಥಳದಲ್ಲಿ ಪಶುವೈದ್ಯರನ್ನೂ ನಿಯೋಜಿಸಲಾಗಿತ್ತು. ಯಾವುದೇ ಮನುಷ್ಯರಿಗೆ ಅಪಾಯವಾಗಿಲ್ಲವಾದರೂ 50ಕ್ಕೂ ಹೆಚ್ಚು ದನಗಳು ಸಜೀವ ದಹನವಾಗಿವೆ. ಬೆಂಕಿಯ ನಿಖರವಾದ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ. ಶ್ರೀ ಕೃಷ್ಣ ಗೋಶಾಲಾ ಟ್ರಸ್ಟ್‌ನ ಅಧ್ಯಕ್ಷ ಸೂರಜ್ ಪಂಡಿತ್ ಎಂಬ ವ್ಯಕ್ತಿಯೊಬ್ಬರು 100ಕ್ಕೂ ಹೆಚ್ಚು ಹಸುಗಳು ವಾಸಿಸುವ ಗೋಶಾಲೆಯನ್ನು ನಡೆಸುತ್ತಿದ್ದರು. ಅವರ ಗೋಶಾಲೆಗೆ ಬೆಂಕಿ ಹೊತ್ತಿಕೊಂಡಿದೆ.

ಸ್ಲಂಗಳಲ್ಲಿ ಭೀಕರ ಬೆಂಕಿಯಿಂದಾಗಿ, ಕಾಲ್ತುಳಿತ ಕೂಡ ಸಂಭವಿಸಿದೆ. ಅಷ್ಟೇ ಅಲ್ಲ, ಪಕ್ಕದ ಗೋಡೌನ್ ಮತ್ತು ಮನೆಗಳಲ್ಲಿ ಇಟ್ಟಿದ್ದ ಸಣ್ಣ ಸಿಲಿಂಡರ್‌ಗಳೂ ಬೆಂಕಿಗೆ ತಗುಲಿ ಸ್ಫೋಟಗೊಂಡಿವೆ. ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಬೆಂಕಿ ಹೆಚ್ಚು ಭೀಕರ ಸ್ವರೂಪ ಪಡೆದುಕೊಂಡಿದೆ. ಗೋಶಾಲೆಯಲ್ಲಿ ನೂರಾರು ಹಸುಗಳು ಇದ್ದವು. ಆ ಎಲ್ಲ ಹಸುಗಳು ಸ್ಥಳದಲ್ಲೇ ಸುಟ್ಟು ಕರಕಲಾಗಿವೆ. ಹಲವಾರು ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸಂತ್ರಸ್ತರಿಗೆ 24 ಗಂಟೆಗಳಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಸೂಚನೆಗಳನ್ನು ನೀಡಿದ್ದಾರೆ. ಇದರೊಂದಿಗೆ ಘಟನಾ ಸ್ಥಳಕ್ಕೆ ತೆರಳಿ ಪರಿಸ್ಥಿತಿ ಅವಲೋಕಿಸಿ ಸಂತ್ರಸ್ತರಿಗೆ ಎಲ್ಲ ರೀತಿಯ ನೆರವು ನೀಡುವಂತೆ ಸಿಎಂ ಯೋಗಿ ಆಡಳಿತಕ್ಕೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಗುಜರಾತ್​ನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ, ಬೆಂಕಿ; ಆರು ಮಂದಿ ಕಾರ್ಮಿಕರ ದುರ್ಮರಣ

ಬೈಕ್​​ಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಮಂಗಳೂರಿನ ಹಂಪನಕಟ್ಟೆ ವೃತ್ತದ ಬಳಿ ಬಸ್ ಬೆಂಕಿಗಾಹುತಿ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್