AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಲೋಕಸಭಾ ಚುನಾವಣೆಗೂ ಮುನ್ನ ವಿಪಕ್ಷಗಳ ಒಗ್ಗಟ್ಟಿನಿಂದ ಯಾವುದೇ ಪ್ರಯೋಜನವಿಲ್ಲ: ಗುಲಾಂ ನಬಿ ಆಜಾದ್

2024ರ ಲೋಕಸಭಾ ಚುನಾವಣೆಗೆ ಮುನ್ನ ವಿಪಕ್ಷಗಳ ಒಗ್ಗಟ್ಟು ಯಾವುದೇ ಫಲಿತಾಂಶ ನೀಡುವುದಿಲ್ಲ ಎಂದು ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್(Ghulam Nabi Azad)  ಬುಧವಾರ ಹೇಳಿದ್ದಾರೆ.

2024ರ ಲೋಕಸಭಾ ಚುನಾವಣೆಗೂ ಮುನ್ನ ವಿಪಕ್ಷಗಳ ಒಗ್ಗಟ್ಟಿನಿಂದ ಯಾವುದೇ ಪ್ರಯೋಜನವಿಲ್ಲ: ಗುಲಾಂ ನಬಿ ಆಜಾದ್
ಗುಲಾಂ ನಬಿ ಆಜಾದ್
ನಯನಾ ರಾಜೀವ್
|

Updated on: Jun 15, 2023 | 8:03 AM

Share

2024ರ ಲೋಕಸಭಾ ಚುನಾವಣೆಗೆ ಮುನ್ನ ವಿಪಕ್ಷಗಳ ಒಗ್ಗಟ್ಟು ಯಾವುದೇ ಫಲಿತಾಂಶ ನೀಡುವುದಿಲ್ಲ ಎಂದು ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್(Ghulam Nabi Azad)  ಬುಧವಾರ ಹೇಳಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕರೆದ ವಿರೋಧ ಪಕ್ಷಗಳ ಸಭೆಗೆ ತಮ್ಮದೇ ಆದ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ)ಯನ್ನು ಆಹ್ವಾನಿಸಿಲ್ಲ. ಎರಡೂ ಪಕ್ಷಗಳಿಗೆ ಲಾಭ ಇದ್ದಾಗ ಮಾತ್ರ ವಿರೋಧ ಪಕ್ಷಗಳ ಒಗ್ಗಟ್ಟಿನಿಂದ ಪ್ರಯೋಜನವಾಗುತ್ತದೆ. ಇಬ್ಬರಿಗೂ ಲಾಭದ ಹಂಚಿಕೆಯಲ್ಲಿ ವ್ಯತ್ಯಾಸವಿರಬಹುದು – ಅದು 50-50 ಅಥವಾ 60-40 ಆಗಿರಬಹುದು – ಆದರೆ ಈ ಸಂದರ್ಭದಲ್ಲಿ, ಬೇರೆಯವರಿಗೆ ನೀಡುವುದು ಹಾಗಿರಲಿ ಇಬ್ಬರಿಗೂ ಲಾಭವಿಲ್ಲ ಎಂದಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮತ್ತು ಸಿಪಿಎಂಗೆ ಒಬ್ಬನೇ ಒಬ್ಬ ಶಾಸಕ ಇಲ್ಲ. ಹೀಗಿರುವಾಗ ಸಿಎಂ ಮಮತಾ ಬ್ಯಾನರ್ಜಿ ಅವರ ಪಕ್ಷ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಈ ಎರಡು ಪಕ್ಷಗಳೊಂದಿಗೆ ಏಕೆ ಮೈತ್ರಿ ಮಾಡಿಕೊಳ್ಳುತ್ತದೆ? ಇದರಿಂದ ಟಿಎಂಸಿಗೆ ಏನು ಸಿಗಲಿದೆ. ಅದೇ ರೀತಿ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಟಿಎಂಸಿ ಯಾವುದೇ ಶಾಸಕರನ್ನು ಹೊಂದಿಲ್ಲ. ಈ ರಾಜ್ಯಗಳಲ್ಲಿ ಕಾಂಗ್ರೆಸ್ ಟಿಎಂಸಿಗೆ ಏನು ನೀಡುತ್ತದೆ?.

ಆಂಧ್ರಪ್ರದೇಶದಲ್ಲಿ ಒಬ್ಬನೇ ಒಬ್ಬ ಕಾಂಗ್ರೆಸ್ ಶಾಸಕನೂ ಇಲ್ಲ ಎಂದು ಹೇಳಿದರು. ಅದೇ ರೀತಿ ಇಲ್ಲಿ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿಗೆ ಯಾವ ರಾಜ್ಯದಲ್ಲೂ ಶಾಸಕರಿಲ್ಲ, ಅವರಿಗೆ ಕಾಂಗ್ರೆಸ್ ಏನು ಕೊಡುತ್ತದೆ ಇದನ್ನು ಆಲೋಚಿಸಬೇಕು ಎಂದರು.

ಮತ್ತಷ್ಟು ಓದಿ: Ghulam Nabi Azad: ಪ್ರಧಾನಿ ಮೋದಿ ‘ರಾಜ್ಯಾಧಿಕಾರಿ’, ಎಂದಿಗೂ ಸೇಡು ತೀರಿಸಿಕೊಳ್ಳದ ರಾಜಕಾರಣಿ: ಗುಲಾಂ ನಬಿ ಆಜಾದ್

ವಿಪಕ್ಷಗಳು ಬಿಜೆಪಿಯನ್ನು ಸೋಲಿಸಬೇಕೆಂದು ಬಯಸುತ್ತಿವೆ, ಆದರೆ ಯಾವುದೇ ವಿರೋಧ ಪಕ್ಷಗಳು ತಮ್ಮ ಸ್ವಂತ ರಾಜ್ಯವನ್ನು ಹೊರತುಪಡಿಸಿ ಬೇರೆ ಯಾವುದೇ ಸ್ಥಳದಲ್ಲಿ ಅಸ್ತಿತ್ವವನ್ನು ಹೊಂದಿಲ್ಲ ಎಂದು ಹೇಳಿದರು. ಚುನಾವಣೆಯ ನಂತರ ಮೈತ್ರಿ ಉತ್ತಮ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಯುಪಿ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸೇರಿದಂತೆ ಹಲವು ನಾಯಕರು ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ