ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಗುಲಾಂ ನಬಿ ಆಜಾದ್

Ghulam Nabi Azad: ಮಾಜಿ ಕೇಂದ್ರ ಸಚಿವ ಗುಲಾಂ ನಬಿ ಆಜಾದ್ ಅನಂತನಾಗ್-ರಾಜೌರಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಗುಲಾಂ ನಬಿ ಆಜಾದ್
ಗುಲಾಂ ನಬಿ ಆಜಾದ್
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Apr 02, 2024 | 6:21 PM

ದೆಹಲಿ, ಎ.02: ಮಾಜಿ ಕೇಂದ್ರ ಸಚಿವ ಗುಲಾಂ ನಬಿ ಆಜಾದ್ ಅನಂತನಾಗ್-ರಾಜೌರಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ ತೊರೆದ ನಂತರ 2022 ರಲ್ಲಿ ಸ್ಥಾಪಿಸಿದ ತಮ್ಮ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಡಿಪಿಎಪಿ ಅಧ್ಯಕ್ಷ ಗುಲಾಂ ನಬಿ ಆಜಾದ್ ಸಾಹಿಬ್ ಅವರು ಅನಂತನಾಗ್-ರಾಜೌರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಇಂದಿನ ಡಿಪಿಎಪಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪಕ್ಷದ ಮುಖ್ಯ ವಕ್ತಾರ ಸಲ್ಮಾನ್ ನಿಜಾಮಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

2014ರ ಲೋಕಸಭೆ ಚುನಾವಣೆಯಲ್ಲಿ ಆಜಾದ್ ಅವರು ಉಧಂಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿಜೆಪಿ ನಾಯಕ ಜಿತೇಂದ್ರ ಸಿಂಗ್ ಎದುರು ಸೋತಿದ್ದರು. ಬಿಜೆಪಿ ಈ ವರ್ಷ ಮಾಜಿ ರಾಜ್ಯ ಸಚಿವ ಜಿಎಂ ಸರೂರಿಯನ್ನು ಉಧಂಪುರದಿಂದ ಕಣಕ್ಕಿಳಿಸಿದೆ.

ಇದನ್ನೂ ಓದಿ: ಉತ್ತರಾಖಂಡದ ರುದ್ರಪುರದಲ್ಲಿ ಪಿಎಂ ರೋಡ್ ಶೋ; 3ನೇ ಅವಧಿಯಲ್ಲಿ ಭ್ರಷ್ಟರ ವಿರುದ್ಧ ತೀವ್ರ ಕ್ರಮ: ಮೋದಿ

ವಿರೋಧ ಪಕ್ಷದ ಮೈತ್ರಿ ಇಂಡಿಯಾ ಒಕ್ಕೂಟದ ಭಾಗವಾಗಿರುವ ನ್ಯಾಷನಲ್ ಕಾನ್ಫರೆನ್ಸ್, ಅನಂತನಾಗ್-ರಜೌರಿ ಕ್ಷೇತ್ರದಲ್ಲಿ ಹಿರಿಯ ನಾಯಕ ಮಿಯಾನ್ ಅಲ್ತಾಫ್ ಅಹ್ಮದ್ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ನಿಲ್ಲಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:57 pm, Tue, 2 April 24

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!