AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಕಳ್ಳರಿಗೆ ಎರಡೇ ಗಂಟೆಯಲ್ಲಿ ಶಾಕ್ ನೀಡಿದ ಪೊಲೀಸರು!

Temple Lift: ದೇವಸ್ಥಾನದ ಅರ್ಚಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಂತ್ರಜ್ಞಾನ ಬಳಸಿ ತಕ್ಷಣ ಬಂಧಿಸಿದ್ದಾರೆ. ಆರೋಪಿಯು ತಿರುಗಿದ ಸ್ಥಳಗಳ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಕಳ್ಳ ಹೋದ ದಿಕ್ಕನ್ನು ಗುರುತಿಸಿದ್ದಾರೆ.

ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಕಳ್ಳರಿಗೆ ಎರಡೇ ಗಂಟೆಯಲ್ಲಿ ಶಾಕ್ ನೀಡಿದ ಪೊಲೀಸರು!
ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಕಳ್ಳರಿಗೆ ಎರಡೇ ಗಂಟೆಯಲ್ಲಿ ಶಾಕ್ ನೀಡಿದ ಪೊಲೀಸರು!
TV9 Web
| Updated By: ಸಾಧು ಶ್ರೀನಾಥ್​|

Updated on: Jul 20, 2022 | 8:27 PM

Share

ಪ್ರಕಾಶಂ ಜಿಲ್ಲೆಯ ಗಿಡ್ಡಲೂರಿನಲ್ಲಿ ಕೇವಲ ಎರಡು ಗಂಟೆಯಲ್ಲಿ ಕಳ್ಳತನ ಪ್ರಕರಣವನ್ನು ಭೇದಿಸುವ ಮೂಲಕ ಪ್ರಕಾಶಂ ಜಿಲ್ಲೆಯ ಪೊಲೀಸರು (Prakasam district police) ದಾಖಲೆ ಮಾಡಿದ್ದಾರೆ. ಗಿಡ್ಡಲೂರು ಮಂಡಲದ ಮಕಿಟ್ಟಮೀದಪಲ್ಲಿ ಗ್ರಾಮದ ಬಳಿ ಇರುವ ಕಾಸಿನಾಯನ ದೇವಸ್ಥಾನಕ್ಕೆ ಕಳ್ಳರು ನುಗ್ಗಿದ್ದರು (temple lift). ದೇವಸ್ಥಾನದ ಒಳಗಿದ್ದ ಕಾಶಿನಾಯನ ಪಂಚಲೋಹ ಮೂರ್ತಿ ಹಾಗೂ ದೇವಸ್ಥಾನದ ಹೊರಗಿದ್ದ ಕಮಾಂಡರ್ ಜೀಪನ್ನು ಕಳ್ಳರು ಕದ್ದೊಯ್ದಿದ್ದಾರೆ.

ದೇವಸ್ಥಾನದ ಅರ್ಚಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಂತ್ರಜ್ಞಾನ ಬಳಸಿ ತಕ್ಷಣ ಕಳ್ಳರನ್ನು ಬಂಧಿಸಿದ್ದಾರೆ. ಆರೋಪಿಯು ತಿರುಗಿದ ಸ್ಥಳಗಳ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಕಳ್ಳರ ಜಾಡು ಗುರುತಿಸಿದ್ದಾರೆ. ಆದರೆ, ಪೊಲೀಸರು ತಮ್ಮನ್ನು ಗುರುತಿಸುತ್ತಾರೆ ಎಂಬ ಭಯದಿಂದ ಆರೋಪಿಗಳು ಪೆದ್ದರವೀಡು ಗ್ರಾಮದ ಬಳಿ ಜೀಪನ್ನು ಬಿಟ್ಟು ಓಡಿ ಹೋಗಿದ್ದಾರೆ.

ಸ್ಥಳಕ್ಕಾಗಮಿಸಿದ ಇನ್ಸ್​ಪೆಕ್ಟರ್​​ ಫಿರೋಜ್ ಹಾಗೂ ಎಸ್‌ಐ ಬ್ರಹ್ಮಾನಾಯ್ಡು ಕಳ್ಳತನವಾಗಿದ್ದ ದೇಗುಲದ ಮಾಲನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಳಿಕ ವಸ್ತುಗಳನ್ನು ದೇಗುಲದ ಆಡಳಿತದವರಿಗೆ ಹಸ್ತಾಂತರಿಸಲಾಗಿದೆ. ಕಳ್ಳತನ ಪ್ರಕರಣವನ್ನು ತ್ವರಿತವಾಗಿ ಭೇದಿಸಿ ಕದ್ದ ವಸ್ತುಗಳನ್ನು ಹಿಂದಿರುಗಿಸಿದ ಪೊಲೀಸರಿಗೆ ದೇಗುಲದವರು ಕೃತಜ್ಞತೆ ಸಲ್ಲಿಸಿದರು.

ಕಳ್ಳರು ಎಲ್ಲಿಂದ ಬಂದರು.. ಯಾವ ಏರಿಯಾದವರು..? ಹೊರಗಿನಿಂದ ಬಂದಿದ್ದರಾ? ಈ ಕುರಿತು ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕಳ್ಳರಿಗಾಗಿ ಸಿಬ್ಬಂದಿ ತೀವ್ರ ಶೋಧ ನಡೆದಿದೆ. ಆರೋಪಿಗಳನ್ನು ಶೀಘ್ರವೇ ಹಿಡಿಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

To read in Telugu click here

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ