Gurugram: ಸ್ಮಶಾನದ ಗೋಡೆ ಕುಸಿದು 4 ಮಂದಿ ಸಾವು, ಇಬ್ಬರಿಗೆ ಗಾಯ
ಸ್ಮಶಾನದ ಗೋಡೆ ಕುಸಿದು ನಾಲ್ವರು ಮೃತಪಟ್ಟಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಇದರಲ್ಲಿ ಬಾಲಕಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ಜಿಲ್ಲಾಡಳಿತ ತಂಡ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅವಶೇಷಗಳನ್ನು ತೆಗೆಯುವ ಕಾರ್ಯದಲ್ಲಿ ನಿರತರಾಗಿದ್ದರು.
ಗುರುಗ್ರಾಮದ ಸೈಬರ್ ಸಿಟಿಯ ಮದನ್‌ಪುರಿಯಲ್ಲಿರುವ ಸ್ಮಶಾನದ ಗೇಟ್‌ನ ಹಿಂದಿನ ಗೋಡೆ ಕುಸಿದು ನಾಲ್ಕು ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ. ಇದರಲ್ಲಿ ಬಾಲಕಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ಜಿಲ್ಲಾಡಳಿತ ತಂಡ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅವಶೇಷಗಳನ್ನು ತೆಗೆಯುವ ಕಾರ್ಯದಲ್ಲಿ ನಿರತರಾಗಿದ್ದರು.
ಪೊಲೀಸರ ಪ್ರಕಾರ, ಅರ್ಜುನ್ ನಗರ ರಸ್ತೆ ಸಂಖ್ಯೆ 8 ರಲ್ಲಿ ಸಂಜೆ 5.30 ರಿಂದ 6 ರ ನಡುವೆ ಈ ಘಟನೆ ನಡೆದಿದೆ. ಇಲ್ಲಿ ಸ್ಮಶಾನದ 18 ಅಡಿ ಎತ್ತರದ ಗೋಡೆ ಇದ್ದಕ್ಕಿದ್ದಂತೆ ಕುಸಿದಿದೆ. ಗೋಡೆಯ ಪಕ್ಕದಲ್ಲಿ ಕುಳಿತಿದ್ದ ಜನರು ಅವಶೇಷಗಳ ಅಡಿಯಲ್ಲಿ ಹೂತುಹೋದರು. ಅಕ್ಕಪಕ್ಕದ ಜನರು ಅವಶೇಷಗಳನ್ನು ತೆಗೆಯುವ ಪ್ರಯತ್ನ ನಡೆಸಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಜನರನ್ನು ಕೂಡಲೇ ರಕ್ಷಿಸಿ ಗುರುಗ್ರಾಮದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ದೇವಿ ದಯಾಳ್ (72), ಕೃಷ್ಣ ಕುಮಾರ್ (52), ಮನೋಜ್ (35) ಮತ್ತು ಬಾಲಕಿ ಖುಷ್ಬೂ (10) ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ. ಅಕ್ಕಪಕ್ಕದ ಜನರ ಪ್ರಕಾರ, ಇಲ್ಲಿ ಗೋಡೆಯ ಉದ್ದಕ್ಕೂ ಗಿಡಗಳನ್ನು ನೆಡಲಾಗಿತ್ತು.
ಮತ್ತಷ್ಟು ಓದಿ: ರಾಜಸ್ಥಾನ: ಮದುವೆ ಮುಗಿಸಿ ಬರುವಾಗ ಕಾರು, ಟ್ರಕ್ ಮಧ್ಯೆ ಭೀಕರ ಅಪಘಾತ, 9 ಮಂದಿ ಸಾವು
ಇದರಿಂದಾಗಿ ಗೋಡೆ ಬಾಗಿತ್ತು. ರಸ್ತೆಯ ಗೋಡೆಯ ಪಕ್ಕದಲ್ಲಿ ಕೆಲವರು ಕುಳಿತಿದ್ದರು. ಮಕ್ಕಳು ಆಟವಾಡುತ್ತಿದ್ದ ವೇಳೆ ಏಕಾಏಕಿ ಗೋಡೆ ಕುಸಿದಿದೆ. ಅಲ್ಲಿ ನಿಲ್ಲಿಸಿದ್ದ ಕೆಲವು ಬೈಕ್‌ಗಳು ಸಹ ಅವಶೇಷಗಳಡಿ ಹೂತು ಹೋಗಿವೆ. ಈ ದುರಂತಕ್ಕೆ ಕಾರಣ ತಿಳಿಯಲು ಸೂಕ್ತ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಗತ್ಯವಿರುವ ಕಾನೂನಾತ್ಮಕ ವಿಧಿ ವಿಧಾನಗಳನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ.