ಹೊಲದಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯನ್ನು ಎಳೆದೊಯ್ದು ಕೊಂದ ಚಿರತೆ

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯನ್ನು ಚಿರತೆ ಎಳೆದೊಯ್ದು ಕೊಂದಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ. ತಾನ್ಯಾ ತನ್ನ ಹೆತ್ತವರೊಂದಿಗೆ ಭತ್ತ ಕೊಯ್ಲಿನಲ್ಲಿ ಸಹಾಯ ಮಾಡಲೆಂದು ಹೊಲಕ್ಕೆ ಹೋಗಿದ್ದಳು, ಹೊಂಚು ಹಾಕಿ ಕೂತಿದ್ದ ಚಿರತೆ ಆಕೆಯನ್ನು ಎಳೆದೊಯ್ದಿತ್ತು.

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯನ್ನು ಎಳೆದೊಯ್ದು ಕೊಂದ ಚಿರತೆ
ಚಿರತೆ(ಸಾಂದರ್ಭಿಕ ಚಿತ್ರ)Image Credit source: Adopt an Animal Kits
Follow us
ನಯನಾ ರಾಜೀವ್
|

Updated on: Oct 13, 2024 | 10:47 AM

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯನ್ನು ಚಿರತೆ ಎಳೆದೊಯ್ದು ಕೊಂದಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ. ತಾನ್ಯಾ ತನ್ನ ಹೆತ್ತವರೊಂದಿಗೆ ಭತ್ತ ಕೊಯ್ಲಿನಲ್ಲಿ ಸಹಾಯ ಮಾಡಲೆಂದು ಹೊಲಕ್ಕೆ ಹೋಗಿದ್ದಳು, ಹೊಂಚು ಹಾಕಿ ಕೂತಿದ್ದ ಚಿರತೆ ಆಕೆಯನ್ನು ಎಳೆದೊಯ್ದಿತ್ತು.

ಆಕೆ ಪೋಷಕರೊಂದಿಗೆ ಹೊಲದಲ್ಲಿ ನಡೆದುಕೊಂಡು ಹೋಗುತ್ತಿರುವ ಸಮಯದಲ್ಲಿ ಈ ಘಟನೆ ನಡೆದಿದೆ. ಏಕಾಏಕಿ ದಾಳಿ ನಡೆಸಿದ ಚಿರತೆ ಸಮೀಪದ ಪ್ರದೇಶದಿಂದ ಹೊರಬಂದು ತಾನ್ಯಾಳ ಕುತ್ತಿಗೆಯನ್ನು ಹಿಡಿದುಕೊಂಡು ಪರಾರಿಯಾಗಿದೆ. ಕೂಡಲೇ ಮನೆಯವರು ಚಿರತೆಯನ್ನು ಅಟ್ಟಿಸಿಕೊಂಡು ಹೋಗಿ ಸಹಾಯಕ್ಕಾಗಿ ಕೂಗಿಕೊಂಡಿದ್ದಾರೆ. ಅವರು ಹತ್ತಿರದ ಕಬ್ಬಿನ ಗದ್ದೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದವು ಕೂಡ ಓಡಿಬಂದಿದ್ದರು.

ಚಿರತೆಯ ಗಮನವನ್ನು ಬೇರೆಡೆಗೆ ಸೆಳೆದು ತಾನ್ಯಾಳನ್ನು ಹೇಗೋ ಎಳೆದುಕೊಂಡಿದ್ದಾರೆ. ಕೂಡಲೇ ಆಕೆಯನ್ನು ಸಮುದಾಯ ಕೇಂದ್ರಕ್ಕೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಆಕೆ ಗ್ರಾಮದ ಕೌನ್ಸಿಲ್ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ, 21 ತಿಂಗಳಲ್ಲಿ ಚಿರತೆ 26 ಬಾರಿ ದಾಳಿ ನಡೆದಿದೆ. ಈ ವರ್ಷ 7 ಮಂದಿ ಗದ್ದೆಯಲ್ಲಿ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಉತ್ತರಾಖಂಡ: ಮನೆಯ ಹೊರಗೆ ಆಟವಾಡುತ್ತಿದ್ದ 3 ವರ್ಷದ ಮಗುವನ್ನು ಎಳೆದೊಯ್ದ ಚಿರತೆ

ಚಿರತೆ ಸೆರೆ ಹಿಡಿಯಲು ಗದ್ದೆಯಲ್ಲಿ ಬೋನು ಹಾಕಿದ್ದರೂ ಇನ್ನೂ ಯಶಸ್ವಿಯಾಗಿಲ್ಲ. ಸ್ಥಳೀಯ ಶಾಸಕ ಓಂ ಕುಮಾರ್ ಸಿಎಚ್‌ಸಿಗೆ ಭೇಟಿ ನೀಡಿ ದುಃಖಿತ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ವರ್ಷ ಚಿರತೆ ದಾಳಿಯಿಂದ ಹಲವಾರು ದುರಂತ ಸಾವುಗಳು ಸಂಭವಿಸಿವೆ. ಜನವರಿ 20 ರಂದು ಜಲಾಲ್‌ಪುರ ಹಸ್ನಾ ಗ್ರಾಮದಲ್ಲಿ ಚಂದ್ರಪ್ರಕಾಶ್ ಸಿಂಗ್ ಅವರನ್ನು ಹತ್ಯೆ ಮಾಡಿತ್ತು. ನಂತರ ಜುಲೈ 13 ರಂದು ಮಂಡೋರಿ ಗ್ರಾಮದಲ್ಲಿ ದಿವ್ಯಾಂಶಿ ಪ್ರಾಣ ಕಳೆದುಕೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ