AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮ ಜನ್ಮಭೂಮಿಗಾಗಿ ಕಾಬೂಲ್​ ನದಿ ನೀರು ಕಳಿಸಿದ ಅಫ್ಘಾನ್​ ಹುಡುಗಿ; ಸಿಎಂ ಯೋಗಿಯಿಂದ ಜಲಾಭಿಷೇಕ

ಅಯೋಧ್ಯೆಯಲ್ಲಿ ನವೆಂಬರ್​ 1ರಿಂದ 5ರವರೆಗೆ ದೀಪೋತ್ಸವ ನಡೆಯಲಿದೆ. ಈ ಅವಧಿಯಲ್ಲಿ ಸುಮಾರು 9 ಲಕ್ಷ ಹಣತೆಗಳು ಬೆಳಗಲಿವೆ ಎಂದು ಯೋಗಿ ಆದಿತ್ಯನಾಥ್​ ಈಗಾಗಲೇ ಘೋಷಣೆ ಮಾಡಿದ್ದಾರೆ.

ಶ್ರೀರಾಮ ಜನ್ಮಭೂಮಿಗಾಗಿ ಕಾಬೂಲ್​ ನದಿ ನೀರು ಕಳಿಸಿದ ಅಫ್ಘಾನ್​ ಹುಡುಗಿ; ಸಿಎಂ ಯೋಗಿಯಿಂದ ಜಲಾಭಿಷೇಕ
ಶ್ರೀರಾಮಜನ್ಮಭೂಮಿಗೆ ಕಾಬೂಲ್​ ನದಿ ನೀರು ಸಮರ್ಪಣೆ (ಚಿತ್ರಕೃಪೆ-ಎಎನ್​ಐ)
TV9 Web
| Edited By: |

Updated on: Oct 31, 2021 | 5:48 PM

Share

ಅಫ್ಘಾನಿಸ್ತಾನದಿಂದ ಹುಡುಗಿಯೊಬ್ಬಳು ಕಳಿಸಿದ್ದ ಕಾಬೂಲ್​ ನದಿಯ ನೀರಿನಿಂದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಶ್ರೀ ರಾಮಜನ್ಮಭೂಮಿಯಲ್ಲಿ ಜಲಾಭಿಷೇಕ ಮತ್ತು ಪೂಜೆ ನೆರವೇರಿಸಿದ್ದಾರೆ. ಇಂಥದ್ದೊಂದು ವಿಶೇಷ ಘಟನೆ ಇಂದು ಅಯೋಧ್ಯೆಯ ಶ್ರೀರಾಮಮಂದಿರ ನಿರ್ಮಾಣ ಸ್ಥಳದಲ್ಲಿ ನಡೆದಿದೆ. ಬಾಲಕಿ ಕಳಿಸಿದ್ದ ಕಾಬೂಲ್​ ನದಿ ನೀರನ್ನು ಗಂಗಾಜಲದೊಂದಿಗೆ ಮಿಶ್ರಣ ಮಾಡಿ, ಮಂದಿರ ನಿರ್ಮಾಣದ ಜಾಗಕ್ಕೆ ಜಲಾಭಿಷೇಕ ಮಾಡಲಾಗಿದೆ ಎಂದು ಹೇಳಿದ್ದಾರೆ.  

ಅಫ್ಘಾನಿಸ್ತಾನದ ಹುಡುಗಿಯೊಬ್ಬಳು ಕಾಬೂಲ್​ ನದಿಯ ನೀರನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಕಳಿಸಿದ್ದಳು. ಅದನ್ನು ಅಯೋಧ್ಯೆ ಶ್ರೀರಾಮ ಜನ್ಮಭೂಮಿಗೆ ಸಮರ್ಪಿಸಬೇಕು ಎಂಬುದು ಆಕೆಯ ಮನವಿಯಾಗಿತ್ತು. ಅದರಂತೆ ನಡೆದುಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಹೇಳಿದ್ದಾರೆ. ಹಾಗೇ ಅಯೋಧ್ಯೆಯಲ್ಲಿ ನವೆಂಬರ್​ 1ರಂದು ನಡೆಯಲಿರುವ ಅದ್ದೂರಿ ದೀಪೋತ್ಸವದ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಆಡಳಿತ ಶುರುವಾಗಿದೆ. ಆದರೂ ಈ ಮಧ್ಯೆ ಅಲ್ಲಿನ ಕೆಲವರು ಭಾರತ ಮತ್ತು ಇಲ್ಲಿನ ದೇವಸ್ಥಾನದ ಬಗ್ಗೆ ಪವಿತ್ರ ಭಾವನೆ ಹೊಂದಿದ್ದಾರೆ. ಅವರ ಭಾವನೆಗೆ ಬೆಲೆ ಕೊಡುವುದು ತುಂಬ ಮುಖ್ಯ. ಇಂದು ದೀಪೋತ್ಸವ ಸಿದ್ಧತೆ ಪರಿಶೀಲನೆ ಇದ್ದರೂ ಕೂಡ, ನನ್ನ ಮೊದಲ ಆದ್ಯತೆ, ಬಾಲಕಿ ಕಳಿಸಿದ ಕಾಬೂಲ್​ ನದಿ ನೀರನ್ನು ಶ್ರೀರಾಮಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವ ಸ್ಥಳಕ್ಕೆ ಸಮರ್ಪಿಸುವುದೇ ಆಗಿತ್ತು ಎಂದು ತಿಳಿಸಿದರು.

ಅಯೋಧ್ಯೆಯಲ್ಲಿ ನವೆಂಬರ್​ 1ರಿಂದ 5ರವರೆಗೆ ದೀಪೋತ್ಸವ ನಡೆಯಲಿದೆ. ಈ ಅವಧಿಯಲ್ಲಿ ಸುಮಾರು 9 ಲಕ್ಷ ಹಣತೆಗಳು ಬೆಳಗಲಿವೆ ಎಂದು ಯೋಗಿ ಆದಿತ್ಯನಾಥ್​ ಈಗಾಗಲೇ ಘೋಷಣೆ ಮಾಡಿದ್ದಾರೆ. ಅಂದರೆ ಕೇಂದ್ರ ಮತ್ತು ರಾಜ್ಯ ವಸತಿ ಯೋಜನೆಗಳ ಅನುಕೂಲವನ್ನು ಸುಮಾರು 9 ಲಕ್ಷ ಫಲಾನುಭವಿಗಳು ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ 9 ಲಕ್ಷ ಮಣ್ಣಿನ ದೀಪಗಳು ಬೆಳಗಲಿವೆ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ನೀಡಿಕೆಯಲ್ಲಿ ಹಿಂದುಳಿದ ಜಿಲ್ಲೆಗಳ ಮೇಲೆ ಪ್ರಧಾನಿ ಮೋದಿ ಕಣ್ಣು; ನವೆಂಬರ್​ 3ರಂದು ಪರಿಶೀಲನಾ ಸಭೆ

ಅಡೆನ್​ನಲ್ಲಿ ಮತ್ತೆ ಸ್ಫೋಟ, 6 ಮಂದಿ ಸಾವು; ಈ ಬಾರಿ ಏರ್​​ಪೋರ್ಟ್​​ನಲ್ಲಿ ನಡೆದ ದುರಂತ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ