ಉತ್ತರ ಪ್ರದೇಶ: 15 ವರ್ಷದ ಬಾಲಕಿಯನ್ನು ಅಪಹರಿಸಿ ಒಂದು ತಿಂಗಳ ಕಾಲ ಅತ್ಯಾಚಾರವೆಸಗಿದ 17ರ ಬಾಲಕ

ಈ ಸಂಬಂಧ ಡಿಸೆಂಬರ್ 25 ರಂದು ಬಾಲಕಿಯ ತಂದೆ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ರಾಸ್ದಾದ ಉಪ ಪೊಲೀಸ್ ವರಿಷ್ಠಾಧಿಕಾರಿ ಶಿವನಾರಾಯಣ್ ವೈಸ್ ತಿಳಿಸಿದ್ದಾರೆ.

ಉತ್ತರ ಪ್ರದೇಶ: 15 ವರ್ಷದ ಬಾಲಕಿಯನ್ನು ಅಪಹರಿಸಿ ಒಂದು ತಿಂಗಳ ಕಾಲ ಅತ್ಯಾಚಾರವೆಸಗಿದ 17ರ ಬಾಲಕ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jan 13, 2023 | 8:29 PM

ಬಲ್ಲಿಯಾ: ಉತ್ತರ ಪ್ರದೇಶದ (Uttar Pradesh) ಬಲ್ಲಿಯಾ ಗ್ರಾಮದ 15 ವರ್ಷದ ಬಾಲಕಿಯನ್ನು ಅಪ್ರಾಪ್ತ ಬಾಲಕನೊಬ್ಬ ಅಪಹರಿಸಿ (Kidnap) ಸುಮಾರು ಒಂದು ತಿಂಗಳ ಕಾಲ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಒಂದು ತಿಂಗಳ ಹಿಂದೆ ಅದೇ ಗ್ರಾಮದ 17 ವರ್ಷದ ಹುಡುಗ ಬಾಲಕಿಯನ್ನು ಅಪಹರಿಸಿದ್ದಾನೆ ಎಂದು ಅವರು ಹೇಳಿದ್ದಾರೆ. ಈ ಸಂಬಂಧ ಡಿಸೆಂಬರ್ 25 ರಂದು ಬಾಲಕಿಯ ತಂದೆ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ರಾಸ್ದಾದ ಉಪ ಪೊಲೀಸ್ ವರಿಷ್ಠಾಧಿಕಾರಿ ಶಿವನಾರಾಯಣ್ ವೈಸ್ ತಿಳಿಸಿದ್ದಾರೆ.ಹುಡುಗ ಹುಡುಗಿಯನ್ನು ಗುಜರಾತ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಅವರು ಹೇಳಿದರು.

ಗುರುವಾರ ಗುಜರಾತ್‌ನಿಂದ ತಮ್ಮ ಗ್ರಾಮಕ್ಕೆ ಮರಳುತ್ತಿದ್ದಾಗ ನಾಗ್ರಾ ಪಟ್ಟಣದ ಗದ್ವಾರ್‌ ಮೋರ್ ಬಳಿ ಅವರನ್ನು ಬಂಧಿಸಲಾಯಿತು. ಆರೋಪಿಯನ್ನು ಮೌದಲ್ಲಿರುವ ಮಕ್ಕಳ ಸುಧಾರಣಾ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ವೈಸ್ ತಿಳಿಸಿದ್ದಾರೆ.

ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಪೋಕ್ಸೋ ಕಾಯ್ದೆ ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳನ್ನು ಎಫ್‌ಐಆರ್‌ಗೆ ಸೇರಿಸಲಾಗಿದೆ ಎಂದು ಅವರು ಹೇಳಿದರು. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ವೈಸ್ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:25 pm, Fri, 13 January 23