AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಂಕ್​ಫುಡ್​ ತಿನ್ಬೇಡ ಎಂದು ತಂದೆ ಬೈದಿದ್ದಕ್ಕೆ ನೇಣುಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಬೇಕರಿ ಪದಾರ್ಥಗಳನ್ನು ತಿನ್ನಬೇಡ ಎಂದು ತಂದೆ ಬೈದಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಸಾವಿಗೆ ಶರಣಾಗಿದ್ದಾಳೆ, ಆಕೆಗೆ ಥೈರಾಯ್ಡ್​ ಇದ್ದ ಕಾರಣ ಕರಿದ ಆಹಾರ ಪದಾರ್ಥಗಳನ್ನು ತಿನ್ನದಂತೆ ನೋಡಿಕೊಳ್ಳುತ್ತಿದ್ದರು.

ಜಂಕ್​ಫುಡ್​ ತಿನ್ಬೇಡ ಎಂದು ತಂದೆ ಬೈದಿದ್ದಕ್ಕೆ ನೇಣುಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ
ಪ್ರಾತಿನಿಧೀಕ ಚಿತ್ರ
ನಯನಾ ರಾಜೀವ್
|

Updated on: Mar 20, 2024 | 12:09 PM

Share

ಜಂಕ್​ಫುಡ್​ ತಿನ್ನಬೇಡ ಎಂದು ತಂದೆ ಗದರಿದ್ದಕ್ಕೆ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಆಕೆ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು, ಮೃತ ಭೂಮಿಕಾ ವಿನೋದ್ ಧನ್ವಾನಿ ನಗರದ ಸಿಂಧಿ ಕಾಲೋನಿ ಪ್ರದೇಶದಲ್ಲಿ ವಾಸವಾಗಿದ್ದರು.

ಭೂಮಿಕಾ ಬಿಬಿಎ ವಿದ್ಯಾರ್ಥಿನಿಯಾಗಿದ್ದು, ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿದ್ದರು. ಜಂಕ್ ಫುಡ್ ತಿಂದಿದ್ದಕ್ಕೆ ತಂದೆ ಬೈದಿದ್ದಕ್ಕೆ ಮನನೊಂದ ಆಕೆ ಉದ್ದನೆಯ ಬಟ್ಟೆಯಿಂದ ಅಡುಗೆ ಕೋಣೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆಕೆಯ ಪೋಷಕರು ಬೆಳಗ್ಗೆ ಆಕೆಯನ್ನು ನೇಣುಬಿಗಿದ ಸ್ಥಿತಿಯಲ್ಲಿ ಕಂಡ ತಕ್ಷಣವೇ, ನಂತರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಆಕೆ ಬದುಕುಳಿಯಲಿಲ್ಲ.

ಬಾಲ್ಯವಿವಾಹವಾಗಿದ್ದ ಬಾಲಕಿ ನೇಣುಬಿಗಿದುಕೊಂಡು ಆತ್ಮಹತ್ಯೆ: ಗಂಡ ಅರೆಸ್ಟ್​​ ಬಾಲ್ಯವಿವಾಹವಾಗಿದ್ದ (child married) ಬಾಲಕಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ನಡೆದಿದೆ. ಬಾಲಕಿ ವಿವಾಹವಾಗಿದ್ದ ಬಿಹಾರ ಮೂಲದ ವಿಶಾಲ್ ಕುಮಾರ್ ಸಹಾನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಓದಿ: ಹೊಳೆನರಸೀಪುರದಲ್ಲಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ; ಯುವಕ ಸಾವು

ಮಾರ್ಚ್​ 13ರಂದು ನಡೆದಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನೀಲಂ ಕುಮಾರಿಯನ್ನು 2023ರ ಫೆಬ್ರವರಿ ತಿಂಗಳಲ್ಲಿ ಬಿಹಾರದಲ್ಲಿ ವಿಶಾಲ್ ಕುಮಾರ್ ಸಹಾನಿ ಬಾಲ್ಯವಿವಾಹವಾಗಿದ್ದ. 1 ವರ್ಷದ ಹಿಂದೆ ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದು, ಯಶವಂತಪುರದಲ್ಲಿ ಪೇಟಿಂಗ್ ಕೆಲಸ ಮಾಡುತ್ತಿದ್ದ.

20 ದಿನಗಳ ಹಿಂದೆ ಬಿಹಾರದಿಂದ ಬಾಲಕಿಯನ್ನು ಕರೆತಂದಿದ್ದ. ಹೆಬ್ಬಗೋಡಿ ಸಮೀಪದ ತಿರುಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಬಾಲ್ಯವಿವಾಹವಾಗಿ ಲೈಂಗಿಕವಾಗಿ ಬಳಸಿಕೊಂಡು ಮಾನಸಿಕ ಹಿಂಸೆ ಹಿನ್ನೆಲೆ ಮಾ.13ರಂದು ಮನೆಯಲ್ಲಿ ನೇಣುಬಿಗಿದುಕೊಂಡು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಂದ ಮಾಹಿತಿ ನೀಡಲಾಗಿದ್ದು, ಶ್ರೀದೇವಿ ಎಂಬುವರಿಂದ ಹೆಬ್ಬಗೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ