ವ್ಯಕ್ತಿಯೊಬ್ಬನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ 16 ವರ್ಷದ ಬಾಲಕಿಯೊಬ್ಬಳು ಮಂಗಳವಾರ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣವನ್ನು ಹಿಂಪಡೆಯುವಂತೆ ಆರೋಪಿಗಳು ಒತ್ತಡ ಹೇರುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಜಿಂಜಾನಾ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದೆ.
ತಾಲಿಬ್ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಬಾಲಕಿಯ ತಂದೆ ಪೊಲೀಸ್ ದೂರು ದಾಖಲಿಸಿದ್ದರು. ಕಳೆದ ವರ್ಷ ತಾಲಿಬ್‌ನನ್ನು ಪೊಲೀಸರು ಬಂಧಿಸಿದ್ದರು ಆದರೆ ನಂತರ ನ್ಯಾಯಾಲಯದಿಂದ ಜಾಮೀನು ನೀಡಲಾಯಿತು.
ಮಂಗಳವಾರ ಬಾಲಕಿಯ ತಂದೆ ನೀಡಿದ ದೂರಿನ ಪ್ರಕಾರ, ನ್ಯಾಯಾಲಯದಲ್ಲಿ ಬಾಕಿ ಇರುವ ತನ್ನ ವಿರುದ್ಧದ ಪ್ರಕರಣವನ್ನು ಹಿಂಪಡೆಯುವಂತೆ ತಾಲಿಬ್ ಮಗಳ ಮೇಲೆ ಒತ್ತಡ ಹೇರುತ್ತಿದ್ದ.
ಮತ್ತಷ್ಟು ಓದಿ: ಇಂಟರ್ ವ್ಯೂ ಇದೆ ಎಂದು ಹೊಟೇಲ್ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ, ಉಪನ್ಯಾಸಕ ಅರೆಸ್ಟ್
ತಾಜಾ ದೂರಿನ ಆಧಾರದ ಮೇಲೆ ತಾಲಿಬ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆಯ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಒಪಿ ಸಿಂಗ್ ತಿಳಿಸಿದ್ದಾರೆ. ಪರಾರಿಯಾಗಿರುವ ಆರೋಪಿಯನ್ನು ಬಂಧಿಸಲು ಪ್ರಯತ್ನ ನಡೆಸಲಾಗುತ್ತಿದೆ ಎಂದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ