AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಇಂಟರ್​ನ್ಯಾಷನಲ್​ ಸ್ಕೂಲ್​ನ ಶೌಚಾಲಯದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಇಂಟರ್​ನ್ಯಾಷನಲ್​ ಸ್ಕೂಲ್​ನ ವಿದ್ಯಾರ್ಥಿನಿಯೊಬ್ಬಳು ಶಾಲೆಯ ಶೌಚಾಲಯದಲ್ಲಿ ನೇಣಿಗೆ ಶರಣಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಅಟೆಂಡೆಂಟ್ ಪರಿಶೀಲಿಸಿದಾಗ ಬಾತ್ರೂಮ್ ಬಾಗಿಲು ಒಳಗಿನಿಂದ ಲಾಕ್ ಆಗಿರುವುದನ್ನು ಕಂಡುಕೊಂಡರು. ಬಾಗಿಲು ಒಡೆದು ಒಳ ನುಗ್ಗಿದ ಸಿಬ್ಬಂದಿ ಒಳಗೆ ವಿದ್ಯಾರ್ಥಿ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ಅಧಿಕಾರಿಗಳು ಆಕಸ್ಮಿಕ ಸಾವಿನ ವರದಿಯನ್ನು ದಾಖಲಿಸಿಕೊಂಡಿದ್ದಾರೆ ಮತ್ತು ಘಟನೆಯ ಸುತ್ತಲಿನ ಸಂದರ್ಭಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಮುಂಬೈನ ಇಂಟರ್​ನ್ಯಾಷನಲ್​ ಸ್ಕೂಲ್​ನ ಶೌಚಾಲಯದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
ಸಾವು
ನಯನಾ ರಾಜೀವ್
|

Updated on:Jan 10, 2025 | 8:47 AM

Share

ಮುಂಬೈನ ಗೋರೆಗಾಂವ್​ನಲ್ಲಿರುವ ಇಂಟರ್​ನ್ಯಾಷನಲ್ ಶಾಲೆಯ ಶೌಚಾಲಯದಲ್ಲಿ 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿ ತನ್ನ ಶೂಗಳ ಲೇಸ್‌ಗಳನ್ನು ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿನಿ ಬೆಳಗ್ಗೆ ಎಂದಿನಂತೆ ತನ್ನ ತರಗತಿಗಳಿಗೆ ಹಾಜರಾಗಿದ್ದಳು. ಬಿಡುವಿನ ವೇಳೆ ಶಾಲೆಯ ಬಾತ್ ರೂಂಗೆ ಹೋದವಳು ವಾಪಸ್ ಬರಲಿಲ್ಲ. ಆಕೆ ಎಷ್ಟೊತ್ತಾದರೂ ಬಾರದಿರುವುದನ್ನು ಗಮನಿಸಿದ ಶಿಕ್ಷಕರು ಅಟೆಂಡರ್​ಗೆ ವಿಚಾರ ತಿಳಿಸಿದ್ದರು. ಅಟೆಂಡೆಂಟ್ ಪರಿಶೀಲಿಸಿದಾಗ ಬಾತ್ರೂಮ್ ಬಾಗಿಲು ಒಳಗಿನಿಂದ ಲಾಕ್ ಆಗಿರುವುದನ್ನು ಕಂಡುಕೊಂಡರು.

ಬಾಗಿಲು ಒಡೆದು ಒಳ ನುಗ್ಗಿದ ಸಿಬ್ಬಂದಿ ಒಳಗೆ ವಿದ್ಯಾರ್ಥಿ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವಳು ತಲುಪುವಷ್ಟರಲ್ಲಿ ಸಾವನ್ನಪ್ಪಿದ್ದಾಳೆ ಎಂದು ಘೋಷಿಸಲಾಯಿತು.

ಘಟನಾ ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪೋಷಕರು ಯಾವುದೇ ಅನುಮಾನಗಳನ್ನು ವ್ಯಕ್ತಪಡಿಸಿಲ್ಲ ಎಂದು ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ತನ್ನ ವರದಿಯಲ್ಲಿ ಹೇಳಿದೆ.

ಮತ್ತಷ್ಟು ಓದಿ: ಹಾಡಹಗಲೇ ಮಚ್ಚಿನಿಂದ ಯುವತಿಯನ್ನು ಕೊಂದ ಕಾಲ್​ಸೆಂಟರ್ ಉದ್ಯೋಗಿ

ಅಧಿಕಾರಿಗಳು ಆಕಸ್ಮಿಕ ಸಾವಿನ ವರದಿಯನ್ನು ದಾಖಲಿಸಿಕೊಂಡಿದ್ದಾರೆ ಮತ್ತು ಘಟನೆಯ ಸುತ್ತಲಿನ ಸಂದರ್ಭಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇದಕ್ಕೆ ಕಾರಣವೇನು ಎಂಬುದನ್ನು ಅರ್ಥಮಾಡಿಕೊಳ್ಳಲು ನಾವು ಸಹಪಾಠಿಗಳು, ಶಿಕ್ಷಕರು ಮತ್ತು ಕುಟುಂಬ ಸದಸ್ಯರೊಂದಿಗೆ ಮಾತನಾಡುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:46 am, Fri, 10 January 25

ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ
Daily Devotional: ನೀರು ಹೇಗೆ ಉಪಯೋಗಿಸಿದ್ರೆ ದುಡ್ಡು ಹಾಗೆ ಖರ್ಚಾಗುತ್ತಾ?
Daily Devotional: ನೀರು ಹೇಗೆ ಉಪಯೋಗಿಸಿದ್ರೆ ದುಡ್ಡು ಹಾಗೆ ಖರ್ಚಾಗುತ್ತಾ?