
ಮುಂಬೈನ ಗೋರೆಗಾಂವ್ನಲ್ಲಿರುವ ಇಂಟರ್ನ್ಯಾಷನಲ್ ಶಾಲೆಯ ಶೌಚಾಲಯದಲ್ಲಿ 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿ ತನ್ನ ಶೂಗಳ ಲೇಸ್‌ಗಳನ್ನು ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿನಿ ಬೆಳಗ್ಗೆ ಎಂದಿನಂತೆ ತನ್ನ ತರಗತಿಗಳಿಗೆ ಹಾಜರಾಗಿದ್ದಳು. ಬಿಡುವಿನ ವೇಳೆ ಶಾಲೆಯ ಬಾತ್ ರೂಂಗೆ ಹೋದವಳು ವಾಪಸ್ ಬರಲಿಲ್ಲ. ಆಕೆ ಎಷ್ಟೊತ್ತಾದರೂ ಬಾರದಿರುವುದನ್ನು ಗಮನಿಸಿದ ಶಿಕ್ಷಕರು ಅಟೆಂಡರ್ಗೆ ವಿಚಾರ ತಿಳಿಸಿದ್ದರು.
ಅಟೆಂಡೆಂಟ್ ಪರಿಶೀಲಿಸಿದಾಗ ಬಾತ್ರೂಮ್ ಬಾಗಿಲು ಒಳಗಿನಿಂದ ಲಾಕ್ ಆಗಿರುವುದನ್ನು ಕಂಡುಕೊಂಡರು.
ಬಾಗಿಲು ಒಡೆದು ಒಳ ನುಗ್ಗಿದ ಸಿಬ್ಬಂದಿ ಒಳಗೆ ವಿದ್ಯಾರ್ಥಿ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವಳು ತಲುಪುವಷ್ಟರಲ್ಲಿ ಸಾವನ್ನಪ್ಪಿದ್ದಾಳೆ ಎಂದು ಘೋಷಿಸಲಾಯಿತು.
ಘಟನಾ ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪೋಷಕರು ಯಾವುದೇ ಅನುಮಾನಗಳನ್ನು ವ್ಯಕ್ತಪಡಿಸಿಲ್ಲ ಎಂದು ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ತನ್ನ ವರದಿಯಲ್ಲಿ ಹೇಳಿದೆ.
ಮತ್ತಷ್ಟು ಓದಿ: ಹಾಡಹಗಲೇ ಮಚ್ಚಿನಿಂದ ಯುವತಿಯನ್ನು ಕೊಂದ ಕಾಲ್ಸೆಂಟರ್ ಉದ್ಯೋಗಿ
ಅಧಿಕಾರಿಗಳು ಆಕಸ್ಮಿಕ ಸಾವಿನ ವರದಿಯನ್ನು ದಾಖಲಿಸಿಕೊಂಡಿದ್ದಾರೆ ಮತ್ತು ಘಟನೆಯ ಸುತ್ತಲಿನ ಸಂದರ್ಭಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇದಕ್ಕೆ ಕಾರಣವೇನು ಎಂಬುದನ್ನು ಅರ್ಥಮಾಡಿಕೊಳ್ಳಲು ನಾವು ಸಹಪಾಠಿಗಳು, ಶಿಕ್ಷಕರು ಮತ್ತು ಕುಟುಂಬ ಸದಸ್ಯರೊಂದಿಗೆ ಮಾತನಾಡುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:46 am, Fri, 10 January 25