ರಿಷಿಕೇಶದಲ್ಲಿ ಹಣೆ ಮೇಲಿನ ತಿಲಕ ಅಳಿಸದ ವಿದ್ಯಾರ್ಥಿನಿಗೆ ಪ್ರವೇಶ ನಿರಾಕರಿಸಿದ ಶಾಲೆ

ಈ ಹಿಂದೆ ಹಿಜಾಬ್ ಬ್ಯಾನ್ ಬಗ್ಗೆ ದೇಶಾದ್ಯಂತ ಭಾರೀ ಚರ್ಚೆಯೆದ್ದಿತ್ತು. ತರಗತಿಯೊಳಗೆ ಹಿಜಾಬ್ ಧರಿಸಿ ಮುಸ್ಲಿಂ ವಿದ್ಯಾರ್ಥಿನಿ ಬರುವಂತಿಲ್ಲ ಎಂದು ನಿಯಮ ತರಲಾಗಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಇದೀಗ ಉತ್ತರಾಖಂಡದಲ್ಲಿ ಹಿಂದೂ ವಿದ್ಯಾರ್ಥಿನಿಯೊಬ್ಬಳು ತಿಲಕವಿಟ್ಟು ಬಂದಿದ್ದಕ್ಕೆ ತರಗತಿಗೆ ಪ್ರವೇಶ ನಿರಾಕರಿಸಿದ ಘಟನೆ ಮತ್ತೊಂದು ವಿವಾದದ ಕಿಡಿ ಹೊತ್ತಿಸಿದೆ.

ರಿಷಿಕೇಶದಲ್ಲಿ ಹಣೆ ಮೇಲಿನ ತಿಲಕ ಅಳಿಸದ ವಿದ್ಯಾರ್ಥಿನಿಗೆ ಪ್ರವೇಶ ನಿರಾಕರಿಸಿದ ಶಾಲೆ
ತಿಲಕ
Follow us
ಸುಷ್ಮಾ ಚಕ್ರೆ
|

Updated on: Dec 14, 2024 | 10:09 PM

ನವದೆಹಲಿ: ಉತ್ತರಾಖಂಡದಲ್ಲಿ ಬಾಲಕಿಯೊಬ್ಬಳು ತಿಲಕ ಇಟ್ಟುಕೊಂಡು ಬಂದಿದ್ದಕ್ಕೆ ಆಕೆಗೆ ತರಗತಿಯೊಳಗೆ ಬರಲು ಅವಕಾಶ ನಿರಾಕರಿಸಲಾಯಿತು. ಇದರಿಂದ ಆಕೆ ತನ್ನ ಶಿಕ್ಷಕರ ಮಾತಿಗೆ ಒಪ್ಪಿ ತಿಲಕ ಅಳಿಸಿಕೊಂಡು ತರಗತಿಗೆ ಹಾಜರಾಗಿದ್ದಾಳೆ. ಆದರೆ ನಂತರ ಈ ವಿಷಯವನ್ನು ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಆಕೆಯ ಪೋಷಕರು, ಹಿಂದೂ ಸಂಘಟನೆಗಳೊಂದಿಗೆ ಗುರುವಾರ ಶಾಲೆಗೆ ಆಗಮಿಸಿ ಪ್ರತಿಭಟನೆ ನಡೆಸಿದ್ದಾರೆ.

ಉತ್ತರಾಖಂಡದ ರಿಷಿಕೇಶದ ಶಾಲೆಯೊಂದರಲ್ಲಿ ಹಣೆಯ ಮೇಲಿದ್ದ ತಿಲಕ ತೆಗೆಯದೆ ವಿದ್ಯಾರ್ಥಿನಿಯೊಬ್ಬಳು ತನ್ನ ತರಗತಿಗೆ ಪ್ರವೇಶಿಸಲು ಬಿಡಲಿಲ್ಲ. ಆಕೆಯ ಪೋಷಕರು ಮತ್ತು ಹಿಂದೂ ಸಂಘಟನೆಗಳು ಪ್ರತಿಭಟನೆಗೆ ಪ್ರೇರೇಪಿಸಿತು. ಈ ಹಿನ್ನೆಲೆಯಲ್ಲಿ ಪ್ರಾಂಶುಪಾಲರು ಕ್ಷಮೆ ಯಾಚಿಸಿದ್ದಾರೆ.

ಇದನ್ನೂ ಓದಿ: ನಾಳೆ ಕೊಡಗು ಜಿಲ್ಲಾ ಬಂದ್​ಗೆ ಕರೆ: ಖಾಸಗಿ ಶಾಲೆಗಳಿಗೆ ರಜೆ, ಕಾರಣವೇನು?

ಶಾಲಾ ಶಿಕ್ಷಣ ಮಹಾನಿರ್ದೇಶಕ ಜರ್ನಾ ಕಮ್ತಾನ್ ಅವರು ಉತ್ತರಾಖಂಡ್‌ನ ತೆಹ್ರಿ ಗರ್ವಾಲ್ ಜಿಲ್ಲೆಯ ಮುಖ್ಯ ಶಿಕ್ಷಣ ಅಧಿಕಾರಿಗೆ ಈ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. 8ನೇ ತರಗತಿ ವಿದ್ಯಾರ್ಥಿನಿಯನ್ನು ಬುಧವಾರ (ಡಿಸೆಂಬರ್ 11) ತನ್ನ ಶಿಕ್ಷಕರು ತನ್ನ ಹಣೆಯ ಮೇಲಿನ ತಿಲಕವನ್ನು ತೆಗೆಯುವಂತೆ ಸೂಚಿಸಿದರು. ಇಲ್ಲದಿದ್ದರೆ ಶಾಲೆಯೊಳಗೆ ಬರಲು ಒಪ್ಪುವುದಿಲ್ಲ ಎಂದು ಹೇಳಿದರು.

“ಶಿಕ್ಷಕರು ತಿಲಕವನ್ನು ತೆಗೆಯುವಂತೆ ಬಾಲಕಿಗೆ ಬಲವಂತ ಮಾಡಬಾರದಿತ್ತು. ತಿಲಕವನ್ನು ಧರಿಸುವುದು ಹಿಂದೂ ಸಂಪ್ರದಾಯವಾಗಿದೆ. ಹಿಂದೂ ಅದನ್ನು ಧರಿಸುವುದನ್ನು ತಡೆಯುವುದು ಹೇಗೆ?” ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ