ಸೆಲ್ಫಿ ತೆಗೆದುಕೊಳ್ಳಲು ಹೋಗಿ 60 ಅಡಿ ಆಳದ ಕಂದಕಕ್ಕೆ ಬಿದ್ದ ಯುವತಿಯ ರಕ್ಷಣೆ

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವತಿಯೊಬ್ಬಳು 60 ಅಡಿ ಆಳದ ಕಂದಕಕ್ಕೆ ಬಿದ್ದಿರುವ ಘಟನೆ ಮಹಾರಾಷ್ಟ್ರದ ಬೋರನೆ ಘಾಟ್‌ನಲ್ಲಿ ನಡೆದಿದೆ. ಗೃಹರಕ್ಷಕ ದಳ ಹಾಗೂ ಸ್ಥಳೀಯರ ನೆರವಿನಿಂದ ಯುವತಿಯನ್ನು ರಕ್ಷಿಸಲಾಗಿದೆ. ಈ ಪ್ರದೇಶದಲ್ಲಿ ಭಾರೀ ಮಳೆಯ ನಡುವೆ ಈ ಘಟನೆ ಸಂಭವಿಸಿದ್ದು, ತೋಸ್ಘರ್ ಸೇರಿದಂತೆ ಜಲಪಾತಗಳು ಉಕ್ಕಿ ಹರಿಯುತ್ತಿವೆ.

ಸೆಲ್ಫಿ ತೆಗೆದುಕೊಳ್ಳಲು ಹೋಗಿ 60 ಅಡಿ ಆಳದ ಕಂದಕಕ್ಕೆ ಬಿದ್ದ ಯುವತಿಯ ರಕ್ಷಣೆ
ಯುವತಿ

Updated on: Aug 04, 2024 | 12:03 PM

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವತಿಯೊಬ್ಬಳು 60 ಅಡಿ ಆಳದ ಕಂದಕಕ್ಕೆ ಬಿದ್ದಿರುವ ಘಟನೆ ಮಹಾರಾಷ್ಟ್ರದ ಬೋರನೆ ಘಾಟ್‌ನಲ್ಲಿ ನಡೆದಿದೆ. ಗೃಹರಕ್ಷಕ ದಳ ಹಾಗೂ ಸ್ಥಳೀಯರ ನೆರವಿನಿಂದ ಯುವತಿಯನ್ನು ರಕ್ಷಿಸಲಾಗಿದೆ. ಈ ಪ್ರದೇಶದಲ್ಲಿ ಭಾರೀ ಮಳೆಯ ನಡುವೆ ಈ ಘಟನೆ ಸಂಭವಿಸಿದ್ದು, ತೋಸ್ಘರ್ ಸೇರಿದಂತೆ ಜಲಪಾತಗಳು ಉಕ್ಕಿ ಹರಿಯುತ್ತಿವೆ.

ಶನಿವಾರ ಪುಣೆಯ ತಂಡವೊಂದು ತೋಸ್ಘರ್ ಜಲಪಾತಕ್ಕೆ ಭೇಟಿ ನೀಡಿತ್ತು. ಪುಣೆಯ ವಾರ್ಜೆ ಮೂಲದ 29 ವರ್ಷದ ನಸ್ರೀನ್ ಅಮೀರ್ ಖುರೇಷಿ ಬೋರನ್ ಘಾಟ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ 60 ಅಡಿ ಆಳದ ಕಮರಿಗೆ ಜಾರಿ ಬಿದ್ದಿದ್ದರು.

ನಸ್ರೀನ್ ಅವರನ್ನು ಯಶಸ್ವಿಯಾಗಿ ಕಂದಕದಿಂದ ಹೊರತೆಗೆಯಲಾಗಿದ್ದು, ತಕ್ಷಣವೇ ಸತಾರಾದಲ್ಲಿರುವ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಇಂತಹ ಅವಘಡಗಳನ್ನು ತಡೆಯುವ ನಿಟ್ಟಿನಲ್ಲಿ ಆಗಸ್ಟ್ 2ರಿಂದ 4ರವರೆಗೆ ಪ್ರವಾಸಿ ತಾಣಗಳು ಹಾಗೂ ಜಲಪಾತಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಜಿತೇಂದ್ರ ದುಡಿ ಆದೇಶಿಸಿದ್ದಾರೆ.

ಮತ್ತಷ್ಟು ಓದಿ: ಜೀವಕ್ಕೆ ಕುತ್ತು ತಂದ ರೀಲ್ಸ್, ರಿವರ್ಸ್​ ಗೇರ್​ನಲ್ಲಿದ್ದಾಗ ಎಕ್ಸಲೇಟರ್​ ಒತ್ತಿದ ಪರಿಣಾಮ ಕಂದಕಕ್ಕೆ ಬಿದ್ದ ಕಾರು, ಯುವತಿ ಸಾವು

ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುವಾಗ ನಸ್ರೀನ್ ಬೀಳುತ್ತಿರುವ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ರಾತ್ರೋ ರಾತ್ರಿವೈರಲ್ ಆಗ ಬಯಸುವವರು ತಮ್ಮ ಜೀವದ ಹಂಗನ್ನು ತೊರೆದು ಅಪಾಯಕಾರಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us