AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ಒಲ್ಲೆ ಎಂದ ಗರ್ಲ್​​​ಫ್ರೆಂಡ್​​; ಫೇಸ್​​ಬುಕ್​​ ಲೈವ್ ಬಂದು ಆತ್ಮಹತ್ಯೆ ಮಾಡಿಕೊಂಡ ಯುವಕ

ನಮ್ಮ ಕುಟುಂಬ ತೀವ್ರ ಆಘಾತದಲ್ಲಿದೆ. ಏನು ಮಾಡಬೇಕೆಂದು ನಮಗೆ ಅರ್ಥವಾಗುತ್ತಿಲ್ಲ. ಹಾಗಾಗಿ ಇಲ್ಲಿಯವರೆಗೆ ನಾವು ಯಾವುದೇ ಎಫ್‌ಐಆರ್‌ ದಾಖಲಿಸಿಲ್ಲ. ಇಂದು ಸಿಲ್ಚಾರ್ ಪೊಲೀಸ್ ಠಾಣೆಗೆ ತೆರಳಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ರಾಯ್ ಅವರ ಸಹೋದರ ರೂಪಂ ರೇ ಹೇಳಿದ್ದಾರೆ.

ಮದುವೆಗೆ ಒಲ್ಲೆ ಎಂದ ಗರ್ಲ್​​​ಫ್ರೆಂಡ್​​; ಫೇಸ್​​ಬುಕ್​​ ಲೈವ್ ಬಂದು ಆತ್ಮಹತ್ಯೆ ಮಾಡಿಕೊಂಡ ಯುವಕ
ಜಯದೀಪ್ ರಾಯ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Dec 30, 2022 | 5:50 PM

Share

ಗುವಾಹಟಿ: 27 ವರ್ಷದ ಯುವಕನೊಬ್ಬ ಫೇಸ್‌ಬುಕ್‌ನಲ್ಲಿ (Facebook) ಲೈವ್ ಬಂದು ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾನೆ.  ತನ್ನ ಪ್ರೇಯಸಿ ತನ್ನನ್ನು ಮದುವೆಯಾಗಲು ನಿರಾಕರಿಸಿದಳು. ಅವಳ ಕುಟುಂಬವು ಅವಳ ಮೇಲೆ ಒತ್ತಡ ಹೇರಿದೆ ಎಂದು ಆತ ಹೇಳಿಕೊಂಡಿದ್ದಾನೆ. ಸೋಮವಾರ ಈತ ಆತ್ಮಹತ್ಯೆ ಮಾಡಿಕೊಂಡಿದ್ದು ಆಘಾತಕ್ಕೊಳಗಾದ ಕುಟುಂಬವು ಇಲ್ಲಿಯವರೆಗೆ ಪೊಲೀಸರ ಮೊರೆ ಹೋಗಲಿಲ್ಲ. ಇದೀಗ ಆತನ ಸಾವಿಗೆ ಆತನ ಪ್ರೇಯಸಿಯ ಮನೆಯವರ ಮೇಲೆ ಆರೋಪ ಮಾಡುತ್ತಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೆಡಿಕಲ್ ಸೇಲ್ಸ್ ವೃತ್ತಿ ಮಾಡುತ್ತಿದ್ದ ಜಯದೀಪ್ ರಾಯ್ ಸಿಲ್ಚಾರ್‌ನಲ್ಲಿರುವ ತಮ್ಮ ಬಾಡಿಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾನೆ. ಅವರ ಕುಟುಂಬವು ಹತ್ತಿರದ ಕಲಾಯಿನ್‌ನಲ್ಲಿ ವಾಸಿಸುತ್ತಿತ್ತು. “ನಾನು ಮದುವೆಯ ಪ್ರಸ್ತಾಪ ಮಾಡಿದ್ದೆ. ಎಲ್ಲರ ಮುಂದೆ ಅವಳು ನಿರಾಕರಿಸಿದಳು. ನಂತರ ಅವಳ ಮಾವ ನನ್ನ ಬಳಿಗೆ ಬಂದು ನಮ್ಮ ಸಂಬಂಧದ ಕಾರಣದಿಂದ ಆಕೆಯ ಹತ್ಯೆಮಾಡುವುದಾಗಿ ಹೇಳಿದರು. ಅವಳು ನನ್ನಿಂದಾಗಿ ನೋವು ಅನುಭವಿಸಬಾರುದು ಎಂದು ನಾನು ಈ ಲೋಕ ತೊರೆಯುತ್ತಿದ್ದೇನೆ ಎಂದು ಹೇಳಿ ರಾಯ್ ಆತ್ಮಹತ್ಯೆ ಮಾಡಿದ್ದಾನೆ.

ನನ್ನ ತಾಯಿ, ಚಿಕ್ಕಪ್ಪ, ಚಿಕ್ಕಮ್ಮ, ಸಹೋದರಿ, ಅಣ್ಣ, ಸೊಸೆ ಮತ್ತು ಸೋದರ ಮಾವನಿಗೆ ಕ್ಷಮಿಸಿ ಎಂದು ಹೇಳುತ್ತಿದ್ದೇನೆ. ನಾನು ನಿಮ್ಮೆಲ್ಲರನ್ನೂ ಪ್ರೀತಿಸುತ್ತೇನೆ, ಆದರೆ ನಾನು ನನ್ನ ಗೆಳತಿಯನ್ನು ಹೆಚ್ಚು ಪ್ರೀತಿಸುತ್ತೇನೆ. ಅವಳಿಲ್ಲದೆ ನಾನು ಬದುಕಲು ಸಾಧ್ಯವಿಲ್ಲ ಎಂದು ರಾಯ್ ಹೇಳಿದ್ದಾನೆ.

ನಮ್ಮ ಕುಟುಂಬ ತೀವ್ರ ಆಘಾತದಲ್ಲಿದೆ. ಏನು ಮಾಡಬೇಕೆಂದು ನಮಗೆ ಅರ್ಥವಾಗುತ್ತಿಲ್ಲ. ಹಾಗಾಗಿ ಇಲ್ಲಿಯವರೆಗೆ ನಾವು ಯಾವುದೇ ಎಫ್‌ಐಆರ್‌ ದಾಖಲಿಸಿಲ್ಲ. ಇಂದು ಸಿಲ್ಚಾರ್ ಪೊಲೀಸ್ ಠಾಣೆಗೆ ತೆರಳಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ರಾಯ್ ಅವರ ಸಹೋದರ ರೂಪಂ ರೇ ಹೇಳಿದ್ದಾರೆ.

ಇದನ್ನೂ ಓದಿ:ಭಗವಾನ್ ರಾಮ ಮತ್ತು ಹನುಮಾನ್ ಮೇಲಿನ ಭಕ್ತಿ ಬಿಜೆಪಿಯ ಕಾಪಿರೈಟ್ ಅಲ್ಲ: ಬಿಜೆಪಿ ನಾಯಕಿ ಉಮಾಭಾರತಿ

ಮಹಿಳೆಯ ಕುಟುಂಬದವರು ಇಂಥಾ ಕಠಿಣ ನಿರ್ಧಾರ ತೆಗೆದುಕೊಳ್ಳುವಂತೆ ನನ್ನ ಸಹೋದರನಿಗೆ ಒತ್ತಾಯಿಸಿದರು. ಆಕೆಯ ಮಾವ ಅವಳನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದರು. ನನ್ನ ಸಹೋದರ ಒಳ್ಳೆಯ ವ್ಯಕ್ತಿ ಮತ್ತು ನಮ್ಮ ಇಡೀ ಕುಟುಂಬವನ್ನು ನೋಡಿಕೊಳ್ಳುತ್ತಿದ್ದನು. ಅವನು ಚೆನ್ನಾಗಿ ಸಂಪಾದಿಸಿದನು, ಅದರಿಂದ ಮಹಿಳೆಯ ಕುಟುಂಬಕ್ಕೆ ಏನು ತೊಂದರೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದಿದ್ದಾರೆ ರೇ.

ಫೇಸ್‌ಬುಕ್ ಲೈವ್‌ನಲ್ಲಿ, ಸಂತ್ರಸ್ತ ಜಯದೀಪ್ ರಾಯ್, ಸುಮಾರು ವರ್ಷದ ಪ್ರೇಮದ ನಿರಾಕರಣೆಯನ್ನು ನಿಭಾಯಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾನೆ. ನಮಗೆ ಇನ್ನೂ ಕುಟುಂಬದಿಂದ ಯಾವುದೇ ಔಪಚಾರಿಕ ದೂರು ಬಂದಿಲ್ಲ. ಆದರೆ ನಾವು ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:40 pm, Fri, 30 December 22

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?