ತಂದೆ, ಚಿಕ್ಕಪ್ಪ, ಅಜ್ಜನಿಂದ ಬಾಲಕಿ ಮೇಲೆ ಅತ್ಯಾಚಾರ, ಆಕೆ ಈಗ ಎರಡು ತಿಂಗಳ ಗರ್ಭಿಣಿ

ಬಾಲಕಿ ಮೇಲೆ ಆಕೆಯ ತಂದೆ ಸೇರಿ ಕುಟುಂಬ ಮೂವರು ಕಳೆದ ಒಂದು ವರ್ಷದಿಂದ ನಿರಂತರವಾಗಿ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಔರಿಯಾ ಜಿಲ್ಲೆಯ ಬಿಧುನಾ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಇಂತಹ ಘಟನೆ ನಡೆದಿದೆ.ಈ ಘಟನೆ ಬೆಳಕಿಗೆ ಬಂದ ನಂತರ ಗ್ರಾಮಸ್ಥರಲ್ಲಿ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ಅಲ್ಲಿ ಶಾಂತಿ ಕಾಪಾಡುತ್ತಿದ್ದಾರೆ. ಸಂತ್ರಸ್ತೆಯ ತಾಯಿ ದೆಹಲಿಯಲ್ಲಿ ವಾಸಿಸುತ್ತಿದ್ದು, ತನ್ನ ಕುಟುಂಬ ಸದಸ್ಯರ ವರ್ತನೆಯಿಂದ ಅತೃಪ್ತಿ ಹೊಂದಿದ್ದಾಳೆ.

ತಂದೆ, ಚಿಕ್ಕಪ್ಪ, ಅಜ್ಜನಿಂದ ಬಾಲಕಿ ಮೇಲೆ ಅತ್ಯಾಚಾರ, ಆಕೆ ಈಗ ಎರಡು ತಿಂಗಳ ಗರ್ಭಿಣಿ
Follow us
ನಯನಾ ರಾಜೀವ್
|

Updated on: Dec 29, 2024 | 9:49 AM

ಹಲವು ತಿಂಗಳುಗಳಿಂದ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗುತ್ತಿದ್ದ ಆಕೆಯ ತಂದೆ, ಚಿಕ್ಕಪ್ಪ ಹಾಗೂ ಅಜ್ಜನನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸಂಬಂಧಿಯೊಬ್ಬರ ಜತೆ ಬಾಲಕಿ ಬಂದು ಸ್ಥಳೀಯ ಬಿಧುನಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಎಎಸ್​ಪಿ ಅಲೋಕ್ ಹೇಳಿದರು.

ಉತ್ತರ ಪ್ರದೇಶದ ಔರಿಯಾ ಜಿಲ್ಲೆಯ ಬಿಧುನಾ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಇಂತಹ ಘಟನೆ ನಡೆದಿದೆ. ಆಕೆ ಗರ್ಭಿಣಿ ಎಂದು ತಿಳಿಯುತ್ತಿದ್ದಂತೆ ತಂದೆ ಆಕೆಯನ್ನು ಕೊಲೆ ಮಾಡಲು ಯೋಜನೆ ರೂಪಿಸಿದ್ದ, ಸಂತ್ರಸ್ತ ಬಾಲಕಿ ತನ್ನ ಚಿಕ್ಕಮ್ಮನೊಂದಿಗೆ ಪೊಲೀಸ್ ಠಾಣೆಗೆ ಬಂದಿದ್ದಳು.

ಈ ಘಟನೆ ಬೆಳಕಿಗೆ ಬಂದ ನಂತರ ಗ್ರಾಮಸ್ಥರಲ್ಲಿ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ಅಲ್ಲಿ ಶಾಂತಿ ಕಾಪಾಡುತ್ತಿದ್ದಾರೆ. ಸಂತ್ರಸ್ತೆಯ ತಾಯಿ ದೆಹಲಿಯಲ್ಲಿ ವಾಸಿಸುತ್ತಿದ್ದು, ತನ್ನ ಕುಟುಂಬ ಸದಸ್ಯರ ವರ್ತನೆಯಿಂದ ಅತೃಪ್ತಿ ಹೊಂದಿದ್ದಾಳೆ. ಚಿಕ್ಕಮ್ಮನೊಂದಿಗೆ ಪೊಲೀಸ್ ಠಾಣೆಗೆ ಬಂದಿದ್ದಳು.

ಮತ್ತಷ್ಟು ಓದಿ: ಮೂರನೇ ಬಾರಿಯೂ ಹೆಣ್ಣು ಮಗು ಹೆತ್ತಳೆಂದು ಪತ್ನಿಯನ್ನು ಬೆಂಕಿಹಚ್ಚಿ ಸುಟ್ಟ ಗಂಡ

ಕಳೆದ ಹಲವು ತಿಂಗಳುಗಳಿಂದ ತನ್ನ ಅಜ್ಜ, ತಂದೆ ಮತ್ತು ಚಿಕ್ಕಪ್ಪ ತನ್ನನ್ನು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದರು ಎಂದು ಬಾಲಕಿ ಹೇಳಿದ್ದಾಳೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಯಿತು ಮತ್ತು ಪ್ರಾಥಮಿಕವಾಗಿ ಅವಳು ಎರಡು ತಿಂಗಳ ಗರ್ಭಿಣಿ ಎಂಬುದು ತಿಳಿದುಬಂದಿದೆ ಎಂದು ಮಿಶ್ರಾ ಹೇಳಿದರು.

ಆರೋಪಿಗಳನ್ನು ಬಂಧಿಸಲಾಗಿದ್ದು, ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ಕಟ್ಟುನಿಟ್ಟಿನ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯೂ ದೂರು ದಾಖಲಿಸಲಾಗಿದೆ ಎಂದು ಮಿಶ್ರಾ ಹೇಳಿದರು.

ಹಾಗೆಯೇ ಸೆಕ್ಷನ್ 64 (ಎಫ್), 65 (1), 232 ಅಡಿ ದೂರು ದಾಖಲಿಸಲಾಗಿದೆ. ಅಕ್ಟೋಬರ್‌ನಲ್ಲಿಯೂ ಔರೈಯಾ ಜಿಲ್ಲೆಯ ಹಳ್ಳಿಯೊಂದರಲ್ಲಿ 6 ವರ್ಷದ ಬಾಲಕಿಯ ಮೇಲಿನ ಕ್ರೌರ್ಯದ ಘಟನೆ ಬೆಳಕಿಗೆ ಬಂದಿದೆ. ಇಲ್ಲಿ ಹಗಲು ಹೊತ್ತಿನಲ್ಲಿ ವ್ಯಕ್ತಿಯೊಬ್ಬ ಬಾಲಕಿಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಇದಾದ ಬಳಿಕ ಆತ ಪರಾರಿಯಾಗಿದ್ದ.

ಬಾಲಕಿ ಅಳುತ್ತಿರುವುದನ್ನು ಕಂಡ ಯಾರೋ ಆಕೆಯನ್ನು ಮನೆಯ ಹೊರಗೆ ಬಿಟ್ಟಿದ್ದಾರೆ. ಸಂತ್ರಸ್ತ ಬಾಲಕಿಯ ಪೋಷಕರ ದೂರಿನ ಮೇರೆಗೆ ಪೊಲೀಸರು ಸದರ್ ಕೊತ್ವಾಲಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಆತ ಸದರ್ ಔರೈಯಾ ಕೊಟ್ವಾಲಿ ಪ್ರದೇಶದ ಗ್ರಾಮದ ನಿವಾಸಿ ಎಂದು ಸಂತ್ರಸ್ತೆಯ ತಂದೆ ತಿಳಿಸಿದ್ದಾರೆ. ಆಕೆಯ ದೇಹದಿಂದ ರಕ್ತ ಬರುತ್ತಿತ್ತು ಎಂದು ಬಾಲಕಿ ತಾಯಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್