ಶಾಂತಿಯುತ ಪ್ರತಿಭಟನೆ ನಡೆಸಲು ರೈತರಿಗೆ ಅವಕಾಶ ಕೊಡಿ: ಕೇಂದ್ರಕ್ಕೆ ಅರವಿಂದ ಕ್ರೇಜಿವಾಲ್ ತಾಕೀತು
ಕೇಂದ್ರ ಸರ್ಕಾರ ರೂಪಿಸಿರುವ ಮೂರು ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿದೆ. ಅವುಗಳನ್ನು ಹಿಂದೆ ತೆಗೆದುಕೊಳ್ಳುವ ಬದಲು ರೈತರ ಪ್ರತಿಭಟನೆಯನ್ನು ಹತ್ತಿಕ್ಕುವುದು ಸರಿಯಲ್ಲ ಎಂದು ಹೇಳಿದ್ದಾರೆ.
ದೆಹಲಿ: ಕೇಂದ್ರದ ಹೊಸ ಕೃಷಿ ಕಾಯ್ದೆ ವಿರುದ್ಧ ರೈತರು ಶಾಂತಿಯುತ ಪ್ರತಿಭಟನೆ ನಡೆಸದಂತೆ ತಡೆಯುವುದು ಮತ್ತು ಅವರ ವಿರುದ್ಧ ಜಲಫಿರಂಗಿಗಳನ್ನು ಬಳಸುವುದು ತಪ್ಪು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
‘ದೆಹಲಿ ಚಲೋ’ ಪ್ರತಿಭಟನೆಯ ಅಂಗವಾಗಿ ರೈತರು ಟ್ರ್ಯಾಕ್ಟರ್ಗಳೊಂದಿಗೆ ಗಡಿದಾಟುವುದನ್ನು ತಡೆಯಲು ಹರಿಯಾಣ ಗಡಿಯುದ್ದಕ್ಕೂ ತಡೆಗೋಡೆ ಹಾಕಿ ನಿರ್ಬಂಧಿಸಿತ್ತು. ರೈತರನ್ನು ಚದುರಿಸಲು ಮತ್ತು ಅವರು ದೆಹಲಿಗೆ ಹೋಗದಂತೆ ತಡೆಯಲು ಪೊಲೀಸರು ಜಲಫಿರಂಗಿ ಬಳಸಿದ್ದರು. ಈ ಕ್ರಮವನ್ನು ಕೇಜ್ರಿವಾಲ್ ಖಂಡಿಸಿದ್ದಾರೆ.
ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ, ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ಸಂವಿಧಾನ ನೀಡಿರುವ ಹಕ್ಕು. ಕೇಂದ್ರ ಸರ್ಕಾರ ರೂಪಿಸಿರುವ ಮೂರು ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿದೆ. ಅವುಗಳನ್ನು ಹಿಂದೆ ತೆಗೆದುಕೊಳ್ಳುವ ಬದಲು ರೈತರ ಪ್ರತಿಭಟನೆಯನ್ನು ಹತ್ತಿಕ್ಕುವುದು ಸರಿಯಲ್ಲ ಎಂದು ಹೇಳಿದ್ದಾರೆ.
ದೆಹಲಿ-ಪಂಜಾಬ್ ಬಸ್ ಸಂಚಾರವನ್ನು ಈಗಾಗಲೇ ನಿರ್ಬಂಧಿಸಲಾಗಿದೆ. ದೆಹಲಿ ಗಡಿಗಳಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.
ಸೆಪ್ಟೆಂಬರ್ 27ರಂದು ಜಾರಿಗೆ ಬಂದ ಕೃಷಿ ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
केंद्र सरकार के तीनों खेती बिल किसान विरोधी हैं। ये बिल वापिस लेने की बजाय किसानों को शांतिपूर्ण प्रदर्शन करने से रोका जा रहा है, उन पर वॉटर कैनन चलाई जा रही हैं। किसानों पर ये जुर्म बिलकुल ग़लत है। शांतिपूर्ण प्रदर्शन उनका संवैधानिक अधिकार है।
— Arvind Kejriwal (@ArvindKejriwal) November 26, 2020
Published On - 5:03 pm, Thu, 26 November 20