AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Global Millets Conference: ಆಹಾರ ಭದ್ರತೆ ಸವಾಲು ಎದುರಿಸಲು ಸಿರಿಧಾನ್ಯ ನೆರವಾಗಬಹುದು; ಪ್ರಧಾನಿ ಮೋದಿ

ಆಹಾರ ಭದ್ರತೆಗೆ ಸಂಬಂಧಿಸಿದ ಮತ್ತು ಆಹಾರ ಪದ್ಧತಿಗೆ ಸಂಬಂಧಿಸಿದ ಸವಾಲುಗಳನ್ನು ಎದುರಿಸುವಲ್ಲಿ ಸಿರಿಧಾನ್ಯಗಳು ನೆರವಾಗಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು.

Global Millets Conference: ಆಹಾರ ಭದ್ರತೆ ಸವಾಲು ಎದುರಿಸಲು ಸಿರಿಧಾನ್ಯ ನೆರವಾಗಬಹುದು; ಪ್ರಧಾನಿ ಮೋದಿ
ನರೇಂದ್ರ ಮೋದಿImage Credit source: ANI
ಗಣಪತಿ ಶರ್ಮಾ
|

Updated on: Mar 18, 2023 | 1:24 PM

Share

ನವದೆಹಲಿ: ಆಹಾರ ಭದ್ರತೆಗೆ ಸಂಬಂಧಿಸಿದ ಮತ್ತು ಆಹಾರ ಪದ್ಧತಿಗೆ ಸಂಬಂಧಿಸಿದ ಸವಾಲುಗಳನ್ನು ಎದುರಿಸುವಲ್ಲಿ ಸಿರಿಧಾನ್ಯಗಳು ನೆರವಾಗಬಹುದು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಹೇಳಿದರು. ದೆಹಲಿಯಲ್ಲಿ 2 ದಿನಗಳ ಕಾಲ ನಡೆಲಿರುವ ‘ಜಾಗತಿಕ ಸಿರಿಧಾನ್ಯ (ಶ್ರೀ ಅನ್ನ) ಸಮಾವೇಶ’ (Global Millets Conference) ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರೀಯ ಆಹಾರಗಳ ಪಟ್ಟಿಯಲ್ಲಿ ಪೌಷ್ಟಿಕಾಂಶಯುಕ್ತ ಧಾನ್ಯಗಳ ಪಾಲನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಕೃಷಿ ವಿಜ್ಞಾನಿಗಳಿಗೆ ಮನವಿ ಮಾಡಿದರು. ಭಾರತದ ಪ್ರಸ್ತಾವನೆ ಮತ್ತು ಪ್ರಯತ್ನಗಳನ್ನು ಮನ್ನಿಸಿರುವ ವಿಶ್ವಸಂಸ್ಥೆಯು 2023ನೇ ವರ್ಷವನ್ನು ‘ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷ’ ಎಂದು ಘೋಷಣೆ ಮಾಡಿದೆ. ಇದು ದೇಶಕ್ಕೆ ಗೌರವದ ವಿಷಯವಾಗಿದೆ. ಭಾರತವು ಸಿರಿಧಾನ್ಯ ಅಥವಾ ಶ್ರೀ ಅನ್ನವನ್ನು ಜಾಗತಿಕ ಚಳವಳಿಯಾಗಿ ಮಾರ್ಪಡಿಸಿ ಉತ್ತೇಜನ ನೀಡಲು ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಮೋದಿ ಹೇಳಿದರು.

ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಲ್ಲಿ, ರಾಸಾಯನಿಕಗಳು ಮತ್ತು ರಸಗೊಬ್ಬರಗಳಿಲ್ಲದೆ ಸಿರಿಧಾನ್ಯಗಳನ್ನು ಸುಲಭವಾಗಿ ಬೆಳೆಯಬಹುದು. ಸಿರಿಧಾನ್ಯ ಮಿಷನ್​ನಿಂದ ದೇಶದ 2.5 ಕೋಟಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪ್ರಯೋಜನವಾಗಲಿದೆ. ಇಂದು ದೇಶದ ಆಹಾರದ ಪಟ್ಟಿಯಲ್ಲಿ ಸಿರಿಧಾನ್ಯಗಳು ಶೇ 5-6ರಷ್ಟು ಸ್ಥಾನ ಪಡೆದಿವೆ. ಈ ಪಾಲನ್ನು ಹೆಚ್ಚಿಸಲು ತ್ವರಿತವಾಗಿ ಕೆಲಸ ಮಾಡಬೇಕೆಂದು ದೇಶದ ವಿಜ್ಞಾನಿಗಳು ಮತ್ತು ಕೃಷಿ ತಜ್ಞರನ್ನು ಒತ್ತಾಯಿಸುತ್ತೇನೆ ಎಂದು ಮೋದಿ ಹೇಳಿದರು.

ಇದನ್ನೂ ಓದಿ: Adani-Hindenburg Row: ಅದಾನಿ ತಪ್ಪು ಮಾಡಿದ್ದೇ ಆದಲ್ಲಿ… ಹಿಂಡನ್​ಬರ್ಗ್ ವಿವಾದದ ಬಗ್ಗೆ ಅಮಿತ್ ಶಾ ಮಾತು ಇಲ್ಲಿದೆ

ಆಹಾರ ಸಂಸ್ಕರಣಾ ಕ್ಷೇತ್ರಕ್ಕೆ ಸರ್ಕಾರವು ಉತ್ಪಾದನೆ ಆಧಾರಿತ ಭತ್ಯೆ (ಪಿಎಲ್​ಐ) ಯೋಜನೆ ಆರಂಭಿಸಿದೆ. ಕಂಪನಿಗಳು ಇದರ ಪ್ರಯೋಜನ ಪಡೆದುಕೊಂಡು ಸಿರಿಧಾನ್ಯ ಆಧಾರಿತ ಉತ್ಪನ್ನಗಳ ಉತ್ಪಾದನೆಯನ್ನು ಹೆಚ್ಚಿಸಬೇಕು ಎಂದು ಮೋದಿ ಮನವಿ ಮಾಡಿದರು.

ಸಿರಿಧಾನ್ಯ ಅಥವಾ ಪೌಷ್ಟಿಕಾಂಶಯುಕ್ತ ಧಾನ್ಯಗಳ ಪ್ರಾಮುಖ್ಯತೆಯನ್ನು ಗುರುತಿಸುವುದು, ಜನರಿಗೆ ಪೌಷ್ಟಿಕ ಆಹಾರವನ್ನು ಒದಗಿಸುವುದರೊಂದಿಗೆ ದೇಶೀಯ ಮತ್ತು ಜಾಗತಿಕ ಬೇಡಿಕೆಯನ್ನು ಸೃಷ್ಟಿಸುವ ದೃಷ್ಟಿಯಿಂದ 2023 ಅನ್ನು ‘ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷ’ ಎಂದು ಘೋಷಣೆ ಮಾಡುವಂತೆ ಭಾರತವು ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿಗೆ ಪ್ರಸ್ತಾವ ಸಲ್ಲಿಸಿತ್ತು. ಈ ಪ್ರಸ್ತಾವನೆಗೆ 72 ದೇಶಗಳಿಂದ ಬೆಂಬಲ ದೊರೆತಿತ್ತು.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!