AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid Review Meet: ಚೀನಾದಲ್ಲಿ ಮತ್ತೆ ಕೊವಿಡ್ ಸ್ಫೋಟ: ಕಣ್ಗಾವಲಿಗೆ ವಿಶೇಷ ಸಮಿತಿ ರಚಿಸಿದ ಭಾರತ ಸರ್ಕಾರ, ಜಿನೋಮ್ ಸೀಕ್ವೆನ್ಸ್ ಹೆಚ್ಚಿಸಲು ನಿರ್ಧಾರ

Coronavirus: ಪ್ರಸ್ತುತ ಚೀನಾ ಜೊತೆಗೆ ಜಪಾನ್, ಅಮೆರಿಕ, ಕೊರಿಯಾ ಮತ್ತು ಬ್ರೆಜಿಲ್ ದೇಶಗಳಲ್ಲಿಯೂ ಕೊರೊನಾ ಸೋಂಕು ವ್ಯಾಪಿಸಿದೆ. ಈ ಹಿನ್ನೆಲೆಯಲ್ಲಿ ಜಿನೋಮ್ ಸೀಕ್ವೆನ್ಸಿಂಗ್ ಬಗ್ಗೆ ಭಾರತ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವು ಮಹತ್ವ ಪಡೆದಿದೆ.

Covid Review Meet: ಚೀನಾದಲ್ಲಿ ಮತ್ತೆ ಕೊವಿಡ್ ಸ್ಫೋಟ: ಕಣ್ಗಾವಲಿಗೆ ವಿಶೇಷ ಸಮಿತಿ ರಚಿಸಿದ ಭಾರತ ಸರ್ಕಾರ, ಜಿನೋಮ್ ಸೀಕ್ವೆನ್ಸ್ ಹೆಚ್ಚಿಸಲು ನಿರ್ಧಾರ
ಪ್ರಾತಿನಿಧಿಕ ಚಿತ್ರImage Credit source: PTI
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Dec 21, 2022 | 8:22 AM

Share

ದೆಹಲಿ: ಚೀನಾ ಮತ್ತು ಇತರ ಕೆಲವು ದೇಶಗಳಲ್ಲಿ ಕೊವಿಡ್-19 (Covid) ಪ್ರಕರಣಗಳು ಏಕಾಏಕಿ ಹೆಚ್ಚಾದ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ಬುಧವಾರ (ಡಿ 21) ಹೊಸ ಅಧಿಸೂಚನೆ ಹೊರಡಿಸಿದ್ದು, ಕೊವಿಡ್ ವೈರಾಣು (Corona Virus) ತಪಾಸಣೆ ವೇಳೆ ಪಾಸಿಟಿವ್ ಬಂದ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್​ಗಾಗಿ ಗರಿಷ್ಠ ಪ್ರಮಾಣದಲ್ಲಿ ಇನ್​ಸಾಕಾಗ್ (INSACOG) ಪ್ರಯೋಗಾಲಯಗಳಿಗೆ ಪ್ರತಿದಿನ ಕಳಿಸಬೇಕು. ಈ ಮೂಲಕ ಹೊಸ ರೂಪಾಂತರಿಗಳನ್ನು ಪತ್ತೆ ಹೆಚ್ಚಲು ಸಹಕರಿಸಬೇಕು ಎಂದು ಸೂಚಿಸಿದೆ. ಕೇಂದ್ರ ಅರೋಗ್ಯ ಸಚಿವ ಮನ್​ಸುಖ್ ಮಾಂಡವೀಯಾ ಅವರು ದೇಶದ ಕೊವಿಡ್ ಸ್ಥಿತಿಗತಿಯ ಪರಿಶೀಲನಾ ಸಭೆಯನ್ನು ಕರೆದಿದ್ದಾರೆ. ಈ ಸಂಬಂಧ ಭಾರತದ ಎಲ್ಲ ರಾಜ್ಯಗಳ ರಾಜ್ಯ ಸರ್ಕಾರಗಳಿಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್​ ಭೂಷಣ್ ಪತ್ರ ಬರೆದಿದ್ದು, ‘ಜಿನೋಮ್ ಸೀಕ್ವೆನ್ಸಿಂಗ್ ಹೆಚ್ಚಿಸಬೇಕು’ ಎಂದು ಸೂಚಿಸಿದ್ದಾರೆ. ಚೀನಾ ಸೇರಿದಂತೆ ವಿಶ್ವದ ಇತರ ದೇಶಗಳ ಕೊವಿಡ್ ಸೋಂಕು ಪ್ರಕರಣಗಳ ಅಂಕಿಅಂಶ ಮತ್ತು ಆರೋಗ್ಯ ಪರಿಸ್ಥಿತಿಯನ್ನು ಗಮನಿಸಲು ಕೇಂದ್ರ ಸರ್ಕಾರವು ಆಂತರಿಕ ಕಾರ್ಯಪಡೆಯೊಂದನ್ನು ರಚಿಸಿದೆ. ಈ ಸಮಿತಿಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿದ್ದು, ಭಾರತದ ಮೇಲಿನ ಪರಿಣಾಮ ಮತ್ತು ಸ್ಥಳೀಯವಾಗಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಕಣ್ಗಾವಲು ಇರಿಸಲು, ತುರ್ತು ನಿರ್ಧಾರ ತೆಗೆದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

ಪ್ರಸ್ತುತ ಚೀನಾ ಜೊತೆಗೆ ಜಪಾನ್, ಅಮೆರಿಕ, ಕೊರಿಯಾ ಮತ್ತು ಬ್ರೆಜಿಲ್ ದೇಶಗಳಲ್ಲಿಯೂ ಕೊರೊನಾ ಸೋಂಕು ವ್ಯಾಪಿಸಿದೆ. ಈ ಹಿನ್ನೆಲೆಯಲ್ಲಿ ಜಿನೋಮ್ ಸೀಕ್ವೆನ್ಸಿಂಗ್ ಬಗ್ಗೆ ಭಾರತ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವು ಮಹತ್ವ ಪಡೆದಿದೆ. ಜಿನೋಮ್ ಸೀಕ್ವೆನ್ಸಿಂಗ್​ ಪ್ರಮಾಣವು ಹೆಚ್ಚಾದರೆ ಮಾತ್ರ ದೇಶದಲ್ಲಿ ಹರಡುತ್ತಿರುವ ಹೊಸ ರೂಪಾಂತರಿಗಳನ್ನು ಪತ್ತೆ ಮಾಡಲು ಹಾಗೂ ಸಮುದಾಯ ಆರೋಗ್ಯಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಸಕಾಲದಲ್ಲಿ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ರಾಜ್ಯಗಳಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ. ಕೊವಿಡ್ ತಪಾಸಣೆಯನ್ನು ಹೆಚ್ಚಿಸಬೇಕು. ಪಾಸಿಟಿವ್ ಬಂದ ಎಲ್ಲ ಮಾದರಿಗಳನ್ನೂ ಜಿನೋಮ್ ಸೀಕ್ವೆನ್ಸಿಂಗ್​ಗಾಗಿ ಇನ್​ಸಾಕಾಗ್ ಪ್ರಯೋಗಾಲಯಗಳಿಗೆ (lGSLs – INSACOG Genome Sequencing Laboratories) ಕಡ್ಡಾಯವಾಗಿ ಕಳುಹಿಸಿಕೊಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಕಳೆದ ಎರಡು ವಾರಗಳಿಂದ ಚೀನಾದಲ್ಲಿ ಕೊವಿಡ್ ವ್ಯಾಪಕವಾಗಿ ಹರಡುತ್ತಿದ್ದು, ಜಾಗತಿಕ ಆರೋಗ್ಯ ಪರಿಸ್ಥಿತಿ ಹಾಘೂ ಆರ್ಥಿಕತೆಯ ಮೇಲೆ ಮತ್ತೊಂದು ಕಾರ್ಮೋಡ ಕವಿಯುವಂತೆ ಆಗಿದೆ. ಎರಡು ವರ್ಷಗಳಿಂದ ಲಾಕ್​ಡೌನ್ ನಿರ್ಬಂಧಗಳ ಮೂಲಕ ಕೊವಿಡ್ ನಿಯಂತ್ರಣಕ್ಕೆ ಬಿಗಿ ಕ್ರಮಗಳನ್ನು ತೆಗೆದುಕೊಂಡಿದ್ದ ಚೀನಾ ಸರ್ಕಾರವು, 15 ದಿನಗಳ ಹಿಂದೆ ಏಕಾಏಕಿ ನಿರ್ಬಂಧಗಳನ್ನು ಸಡಿಲಿಸಿತ್ತು. ‘ಚೀನಾದ ವಿದ್ಯಮಾನವು ಈಗ ಇಡೀ ಜಗತ್ತಿಗೆ ಆತಂಕ ತಂದೊಡ್ಡಿದೆ. ವಿಶ್ವದ ಬೃಹತ್ ಆರ್ಥಿಕತೆ ಮತ್ತು ಅತಿಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿರುವ ಚೀನಾದ ಈ ಬೆಳವಣಿಗೆಯು ಜಾಗತಿಕ ಮಟ್ಟದಲ್ಲಿ ಪರಿಣಾಮ ಬೀರಲಿದೆ’ ಎಂದು ಅಮೆರಿಕ ಎಚ್ಚರಿಸಿದೆ. ಈ ನಡುವೆ ಅಮೆರಿಕದಲ್ಲಿಯೂ ಏಕಾಏಕಿ ಕೊವಿಡ್ ಸಾವುಗಳ ಪ್ರಮಾಣ ಹೆಚ್ಚಾಗಿರುವುದು ಭಾರತ ಸರ್ಕಾರಕ್ಕೆ ಆತಂಕ ಉಂಟು ಮಾಡಿದೆ.

ಭಾರತೀಯರು ಗಣನೀಯ ಪ್ರಮಾಣದಲ್ಲಿ ಅಮೆರಿಕದಲ್ಲಿ ನೆಲೆಸಿದ್ದು, ಅಲ್ಲಿ ಆಗುವ ಯಾವುದೇ ಬೆಳವಣಿಗೆಯು ಭಾರತದ ಆಂತರಿಕ ವಿದ್ಯಮಾನಗಳ ಮೇಲೆಯೂ ಪರಿಣಾಮ ಬೀರಲಿದೆ. ಈ ಹಿನ್ನೆಲೆಯಲ್ಲಿಯೇ ಕೇಂದ್ರ ಅರೋಗ್ಯ ಕಾರ್ಯದರ್ಶಿ ಬರೆದಿರುವ ಪತ್ರದಲ್ಲಿರುವ, ‘ಈಗಾಗಲೇ ಅಸ್ತಿತ್ವದಲ್ಲಿರುವ ರೂಪಾಂತರಿಕಗಳ ಹರಡುವಿಕೆಯ ಮೇಲೆ ನಿಗಾ ಇರಿಸುವುದು ಅತ್ಯಗತ್ಯ’ ಎಂಬ ಸಾಲು ಮಹತ್ವ ಪಡೆದಿದೆ. ಭಾರತದಲ್ಲಿ 112 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,490ಕ್ಕೆ ಇಳಿದಿದೆ. ಕೇರಳದಲ್ಲಿ ಇಬ್ಬರು ಮತ್ತು ಮಹಾರಾಷ್ಟ್ರದಲ್ಲಿ ಒಬ್ಬರು ಕೊವಿಡ್​ನಿಂದ ಮೃತಪಟ್ಟಿದ್ದಾರೆ. ಮುಂದಿನ 90 ದಿನಗಳಲ್ಲಿ ಚೀನಾದ ಶೇ 60, ವಿಶ್ವದ ಶೇ 10ರಷ್ಟು ಜನರು ಕೊರೊನಾ ಸೋಂಕಿಗೆ ಒಳಗಾಗುವ ಸಾಧ್ಯತೆಯಿದೆ ಎಂದು ಸಾಂಕ್ರಾಮಿಕ ರೋಗಗಳ ತಜ್ಞ ಎರಿಕ್ ಫೀಗ್ಲ್-ಡಿಂಗ್ ಅಂದಾಜಿಸಿದ್ದಾರೆ.

ಇದನ್ನೂ ಓದಿ: China Covid Updates: ಮುಂದಿನ 90 ದಿನಗಳಲ್ಲಿ ಚೀನಾದ ಶೇ.60ರಷ್ಟು ಜನತೆ ಕೊರೊನಾ ಸೋಂಕಿಗೆ ಒಳಗಾಗಬಹುದು: ಲಕ್ಷಾಂತರ ಮಂದಿ ಸಾಯಬಹುದು

Published On - 8:20 am, Wed, 21 December 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ