AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನೇಶ್ ಕುಮಾರ್ ವಿವಾದ: ರಾಹುಲ್ ಗಾಂಧಿಗೆ ತಿರುಗೇಟು ನೀಡಲು ಬಿಜೆಪಿಯ 12 ಮುಖ್ಯಮಂತ್ರಿಗಳ ಅಖಾಡ ಪ್ರವೇಶ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಕುರಿತ ವಿವಾದ ತೀವ್ರಗೊಂಡಿದೆ. ಕಾಂಗ್ರೆಸ್ ಅವರ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆಗೆ ಸಿದ್ಧತೆ ನಡೆಸಿದರೆ, ಬಿಜೆಪಿ 12 ಮುಖ್ಯಮಂತ್ರಿಗಳನ್ನು ಕಣಕ್ಕಿಳಿಸಿ ಚುನಾವಣಾ ಆಯೋಗವನ್ನು ಸಮರ್ಥಿಸಿಕೊಂಡಿದೆ. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯಲ್ಲಿ ಅಕ್ರಮ ಆರೋಪವಿದೆ. ಆಯೋಗವು ತನ್ನ ನಿರ್ಧಾರಗಳು ಒಮ್ಮತದಿಂದಲೇ ಇವೆ ಎಂದು ಸ್ಪಷ್ಟಪಡಿಸಿದೆ.

ಜ್ಞಾನೇಶ್ ಕುಮಾರ್ ವಿವಾದ: ರಾಹುಲ್ ಗಾಂಧಿಗೆ ತಿರುಗೇಟು ನೀಡಲು ಬಿಜೆಪಿಯ 12 ಮುಖ್ಯಮಂತ್ರಿಗಳ ಅಖಾಡ ಪ್ರವೇಶ
ಜ್ಞಾನೇಶ್ ಕುಮಾರ್Image Credit source: PTI
ನಯನಾ ರಾಜೀವ್
|

Updated on: Sep 28, 2026 | 8:20 AM

Share

ನವದೆಹಲಿ, ಸೆಪ್ಟೆಂಬರ್ 28: ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿಚಾರವಾಗಿ ರಾಜಕೀಯ ವಾಗ್ವಾದ ತೀವ್ರಗೊಂಡಿದೆ. ಕಾಂಗ್ರೆಸ್ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿರುವ ಬೆನ್ನಲ್ಲೇ, ಬಿಜೆಪಿ 12 ರಾಜ್ಯಗಳ ಮುಖ್ಯಮಂತ್ರಿಗಳನ್ನು ಪತ್ರಿಕಾಗೋಷ್ಠಿಗೆ ಕಣಕ್ಕಿಳಿಸಿ ಚುನಾವಣಾ ಆಯೋಗದ ಪರವಾಗಿ ತನ್ನ ನಿಲುವು ಸ್ಪಷ್ಟಪಡಿಸಿದೆ.

ಬಿಜೆಪಿ, ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಆಧಾರರಹಿತ ಆರೋಪ ಮಾಡುತ್ತಿದೆ ಎಂದು ಹೇಳಿದರೆ, ಕಾಂಗ್ರೆಸ್ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದೆ. ಚುನಾವಣಾ ಆಯೋಗ ಮಾತ್ರ ತನ್ನೊಳಗೆ ಚರ್ಚೆಗಳು ನಡೆದಿದ್ದರೂ ಅಂತಿಮ ನಿರ್ಧಾರಗಳು ಒಮ್ಮತದಿಂದ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದೆ

ಏನಿದು ಬಿಜೆಪಿ ತಂತ್ರ?

ಬಿಜೆಪಿ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಕಾಂಗ್ರೆಸ್ ಮತ್ತು ಇಂಡಿ ಮೈತ್ರಿಕೂಟ ಚುನಾವಣಾ ಆಯೋಗದ ನಿಷ್ಪಕ್ಷಪಾತತೆಯನ್ನು ಪ್ರಶ್ನಿಸಿ ಸಂವಿಧಾನಾತ್ಮಕ ಸಂಸ್ಥೆಗಳ ಮೇಲೆ ಅನುಮಾನ ಮೂಡಿಸಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿ ನಡೆಸಿದರೆ, ಉಳಿದ ರಾಜ್ಯಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಅಥವಾ ವಿರೋಧ ಪಕ್ಷದ ನಾಯಕರು ಮಾಧ್ಯಮಗಳ ಮುಂದೆ ಪಕ್ಷದ ನಿಲುವು ಮಂಡಿಸಿದರು.

ಮತ್ತಷ್ಟು ಓದಿ: ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಆಗ್ರಹ, ಅಕ್ಟೋಬರ್ 2ರಿಂದ ದೇಶಾದ್ಯಂತ ಪ್ರತಿಭಟನೆ ಎಚ್ಚರಿಕೆ

ಕಾಂಗ್ರೆಸ್ ಏನು ಹೇಳುತ್ತಿದೆ?

ರಾಹುಲ್ ಗಾಂಧಿ ಈಗಾಗಲೇ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪವನ್ನು ಕಾಂಗ್ರೆಸ್ ಪುನರುಚ್ಚರಿಸಿದೆ. ಈ ಹಿನ್ನೆಲೆ ಕಾಂಗ್ರೆಸ್ ದೇಶದಾದ್ಯಂತ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೊಂದಿಗೆ ವರ್ಚುವಲ್ ಸಭೆ ನಡೆಸಿ ಪ್ರತಿಭಟನೆಯ ರೂಪುರೇಷೆಗಳನ್ನು ಚರ್ಚಿಸಿದ್ದಾರೆ.

ಪೋಸ್ಟ್​

ಮುಖ್ಯಮಂತ್ರಿಗಳು ಏನು ಹೇಳಿದರು?

ಬಿಜೆಪಿ ಮುಖ್ಯಮಂತ್ರಿಗಳು ಕಾಂಗ್ರೆಸ್ ಆರೋಪಗಳನ್ನು ತಳ್ಳಿಹಾಕಿದರು.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, “ಯಾವುದೇ ಮತ ಕಳವಾಗಿಲ್ಲ, ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ” ಎಂದು ಹೇಳಿದರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಎಸ್​ಐಆರ್ ಕುರಿತು ತಪ್ಪು ಮಾಹಿತಿ ಹರಡಲಾಗುತ್ತಿದೆ ಎಂದು ಆರೋಪಿಸಿದರು.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಚುನಾವಣಾ ಆಯೋಗವನ್ನು ಗುರಿಯಾಗಿಸುವುದು ಸೋಲಿನ ರಾಜಕೀಯ ಎಂದು ಟೀಕಿಸಿದರು.

ಬಿಹಾರ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ, ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಪ್ರಕ್ರಿಯೆ ಅಗತ್ಯ ಎಂದು ಹೇಳಿದರು. ಚುನಾವಣಾ ಆಯೋಗದ ಪ್ರತಿಕ್ರಿಯೆ

ಚುನಾವಣಾ ಆಯೋಗವು ತನ್ನೊಳಗಿನ ಭಿನ್ನಾಭಿಪ್ರಾಯಗಳ ವರದಿಗಳಿಗೆ ಪ್ರತಿಕ್ರಿಯಿಸಿ, ಆಯೋಗದಲ್ಲಿ ಚರ್ಚೆಗಳು ನಡೆದಿದ್ದರೂ ಅಂತಿಮ ನಿರ್ಧಾರಗಳು ಒಮ್ಮತದಿಂದ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ. ಆಯೋಗವು ತನ್ನ ಕಾರ್ಯವೈಖರಿ ನಿಯಮಾನುಸಾರ ನಡೆದಿದ್ದು, ಸಂವಿಧಾನಾತ್ಮಕ ಸಂಸ್ಥೆಯಾಗಿ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು