AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Go First Airlines: ಗೋ ಫಸ್ಟ್ ಏರ್‌ಲೈನ್ಸ್ ಮೇ 3, 4ರಂದು ನಿಗದಿಪಡಿಸಲಾದ ಎಲ್ಲಾ ವಿಮಾನಗಳ ಹಾರಾಟ ರದ್ದು

ಗೋ ಫಸ್ಟ್ ಏರ್‌ಲೈನ್ಸ್ (Go First) ತನ್ನ ಎಲ್ಲಾ ವಿಮಾನಗಳ ಹಾರಾಟವನ್ನು ಮೇ 3 ಮತ್ತು 4ರಂದು ರದ್ದುಗೊಳಿಸಲಾಗುವುದು ಎಂದು DGCA ಗೆ ತಿಳಿಸಿದೆ.

Go First Airlines: ಗೋ ಫಸ್ಟ್ ಏರ್‌ಲೈನ್ಸ್ ಮೇ 3, 4ರಂದು ನಿಗದಿಪಡಿಸಲಾದ ಎಲ್ಲಾ ವಿಮಾನಗಳ ಹಾರಾಟ ರದ್ದು
Go First Airlines
ಅಕ್ಷಯ್​ ಪಲ್ಲಮಜಲು​​
|

Updated on:May 02, 2023 | 4:38 PM

Share

ಹೊಸದಿಲ್ಲಿ: ಗೋ ಫಸ್ಟ್ ಏರ್‌ಲೈನ್ಸ್ (Go First) ತನ್ನ ಎಲ್ಲಾ ವಿಮಾನಗಳ ಹಾರಾಟವನ್ನು ಮೇ 3 ಮತ್ತು 4ರಂದು ರದ್ದುಗೊಳಿಸಲಾಗುವುದು ಎಂದು DGCA ಗೆ ತಿಳಿಸಿದೆ. ಇಂದು (ಮೇ 2) ಇಂಜಿನ್‌ಗಳನ್ನು ಸರಬರಾಜು ಮಾಡದಿರುವ ಬಗ್ಗೆ ಯುಎಸ್ ನ್ಯಾಯಾಲಯದಲ್ಲಿ ಏರ್‌ಲೈನ್ಸ್ ವಿಮಾನ ಎಂಜಿನ್ ತಯಾರಕರಾದ ಪ್ರಾಟ್ ಮತ್ತು ವಿಟ್ನಿ ವಿರುದ್ಧ ತುರ್ತು ಅರ್ಜಿಯನ್ನು ಸಲ್ಲಿಸಿರುವ ಕಾರಣ ಎಲ್ಲ ಮೇ 3 ಮತ್ತು 4ರಂದು ವಿಮಾನಗಳ ಹಾರಾಟ ನಡೆಸಲು ಸಾಧ್ಯವಿಲ್ಲ  ಎಂದು ವರದಿ ತಿಳಿಸಿದೆ. ವರದಿಗಳ ಪ್ರಕಾರ, ಎಂಜಿನ್‌ಗಳನ್ನು ಪೂರೈಸದಿದ್ದರೆ ಅದು ದಿವಾಳಿಯಾಗುತ್ತದೆ ಎಂದು ವಿಮಾನಯಾನ ಸಂಸ್ಥೆ ಹೇಳಿಕೊಂಡಿದೆ.

ವಾಡಿಯಾ ಸಮೂಹದ ಒಡೆತನದ ಗೋ ಫಸ್ಟ್ ತೀವ್ರ ನಿಧಿಯ ಕೊರತೆಯ ನಡುವೆ ಮೇ 3 ಮತ್ತು 4 ರಂದು ತಾತ್ಕಾಲಿಕವಾಗಿ ಹಾರಾಟವನ್ನು ಸ್ಥಗಿತಗೊಳಿಸಲಿದೆ ಎಂದು ಏರ್‌ಲೈನ್‌ನ ಮುಖ್ಯಸ್ಥ ಕೌಶಿಕ್ ಖೋನಾ ಮಂಗಳವಾರ ತಿಳಿಸಿದ್ದಾರೆ. ದೆಹಲಿಯ ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (NCLT) ಮುಂದೆ ಸ್ವಯಂಪ್ರೇರಿತ ದಿವಾಳಿತನ ಪರಿಹಾರ ಪ್ರಕ್ರಿಯೆಗಳಿಗಾಗಿ ಬಜೆಟ್ ಕ್ಯಾರಿಯರ್ ಅರ್ಜಿಯನ್ನು ಸಲ್ಲಿಸಿದೆ.

ಇದನ್ನೂ ಓದಿ: Go First Airline: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ

ಇದು ದುರದೃಷ್ಟಕರ ನಿರ್ಧಾರವಾಗಿದೆ (ಸ್ವಯಂಪ್ರೇರಿತ ದಿವಾಳಿತನ ಪರಿಹಾರ ಪ್ರಕ್ರಿಯೆಗಳಿಗೆ ಸಲ್ಲಿಸುವುದು) ಆದರೆ ಕಂಪನಿಯ ಹಿತಾಸಕ್ತಿಗಳನ್ನು ರಕ್ಷಿಸಲು ಇದನ್ನು ಮಾಡಬೇಕಾಗಿದೆ ಎಂದು ಕೌಶಿಕ್ ಖೋನಾ ಹೇಳಿದರು. ವಿಮಾನಯಾನ ಸಂಸ್ಥೆಯು ಈ ಬೆಳವಣಿಗೆಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಿದೆ ಮತ್ತು ವಿಮಾನಯಾನ ನಿಯಂತ್ರಕ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್‌ಗೆ (ಡಿಜಿಸಿಎ) ವಿವರವಾದ ವರದಿಯನ್ನು ಸಲ್ಲಿಸಲಿದೆ.

ಮೇ 3 ಮತ್ತು 4ರಂದು ವಿಮಾನಗಳನ್ನು ಸ್ಥಗಿತಗೊಳಿಸಲಾಗುವುದು. NCLT ಒಮ್ಮೆ ಅರ್ಜಿಯನ್ನು ಒಪ್ಪಿಕೊಂಡರೆ, ನಂತರ ವಿಮಾನಗಳನ್ನು ಪುನರಾರಂಭಿಸಲಾಗುವುದು ಎಂದು ಖೋನಾ ಹೇಳಿದರು. ಗೋ ಫಸ್ಟ್ 5,000ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದ್ದು. ಇದೀಗ ಈ ನಿರ್ಧಾರ ಭಾರೀ ನಷ್ಟವನ್ನು ಉಂಟು ಮಾಡಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Tue, 2 May 23

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ