AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Goa Floods: ಗೋವಾದಲ್ಲಿ 40 ವರ್ಷಗಳಲ್ಲೇ ಅತ್ಯಂತ ಭೀಕರ ಪ್ರವಾಹ; ನೂರಾರು ಜನರ ರಕ್ಷಣೆ, ಕೋಟ್ಯಂತರ ಮೌಲ್ಯದ ಆಸ್ತಿಪಾಸ್ತಿ ಸರ್ವನಾಶ

ಬಿಚೋಲಿಮ್ ತಾಲೂಕಿನ ಹಲವು ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿ ಕೊಟ್ಟಿದ್ದು, ಅಲ್ಲಿನ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದ್ದಾರೆ.

Goa Floods: ಗೋವಾದಲ್ಲಿ 40 ವರ್ಷಗಳಲ್ಲೇ ಅತ್ಯಂತ ಭೀಕರ ಪ್ರವಾಹ; ನೂರಾರು ಜನರ ರಕ್ಷಣೆ, ಕೋಟ್ಯಂತರ ಮೌಲ್ಯದ ಆಸ್ತಿಪಾಸ್ತಿ ಸರ್ವನಾಶ
ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​
TV9 Web
| Updated By: Lakshmi Hegde|

Updated on: Jul 24, 2021 | 9:55 AM

Share

ಕಳೆದ 40 ವರ್ಷಗಳಲ್ಲೇ ಕಂಡರಿಯದಷ್ಟು ಭೀಕರ ಪ್ರವಾಹಕ್ಕೆ ಗೋವಾ (Goa Floods) ತತ್ತರಿಸಿದೆ. ಮಳೆ ಸಂಬಂಧ ದುರ್ಘಟನೆಯಿಂದ ಇದುವರೆಗೆ ಒಂದು ಸಾವಾಗಿದ್ದು, ಬರೋಬ್ಬರಿ 1,000 ಮನೆಗಳಿಗೆ ಹಾನಿಯಾಗಿದೆ. ವಿಪರೀತ ಮಳೆಯಿಂದ ಜಲಾವೃತಗೊಂಡಿರುವ ಕೆಳಪ್ರದೇಶಗಳಿಂದ ನೂರಾರು ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ. ಅದರಲ್ಲೂ ಗೋವಾದ ಸತ್ತಾರಿ, ಬಿಚೋಲಿಮ್​, ಪೊಂಡಾ, ಧರ್ಬಂಡೋರಾ, ಬಾರ್ಡೆಜ್ ಮತ್ತು ಪರ್ನೆಮ್ ತಾಲೂಕುಗಳಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಪ್ರವಾಹ ಉಂಟಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ್​ ಸಾವಂತ್ (Pramod Sawant)​ ತಿಳಿಸಿದ್ದಾರೆ.

ಬಿಚೋಲಿಮ್ ತಾಲೂಕಿನ ಹಲವು ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿ ಕೊಟ್ಟಿದ್ದು, ಅಲ್ಲಿನ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದ್ದಾರೆ. ಸದ್ಯಕ್ಕಂತೂ ಮಳೆ, ಪ್ರವಾಹ ಹೆಚ್ಚಾದ ಪ್ರದೇಶಗಳಲ್ಲಿ ಸರ್ಕಾರಿ ಶಾಲೆಗಳನ್ನು ತಾತ್ಕಾಲಿಕ ಆಶ್ರಯ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದೆ.

ಗೋವಾ 1982ರಿಂದ ಈಚೆಗೆ ಇಂಥ ಭೀಕರ ಪ್ರವಾಹವನ್ನು ಕಂಡಿರಲಿಲ್ಲ. ಈಗ ಸುಮಾರು ಕೋಟಿ ರೂಪಾಯಿ ಮೌಲ್ಯದ ಆಸ್ತಿಪಾಸ್ತಿಗಳು ಸರ್ವನಾಶವಾಗಿದೆ. ವಿಪತ್ತು ನಿರ್ವಹಣಾ ತಂಡಗಳು ಶುಕ್ರವಾರದಿಂದಲೂ ಎಡಬಿಡದೆ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ಪ್ರಮೋದ್​ ಸಾವಂತ್​ ಮಾಹಿತಿ ನೀಡಿದ್ದಾರೆ. ಉತ್ತರ ಗೋವಾದ ಪರ್ನೆಮ್​ ತಾಲೂಕಿನ ಚಪೋರಾ ನದಿ, ಅಪಾಯ ಮಟ್ಟವನ್ನೂ ಮೀರಿ ಹರಿಯುತ್ತಿದ್ದು, ಕೆಳ ಪ್ರದೇಶದಲ್ಲಿರುವ ಸುಮಾರು 88 ಮನೆಗಳಿಗೆ ಹಾನಿಯನ್ನುಂಟು ಮಾಡಿದೆ. ಈ ನದಿಯಿಂದಾಗಿ ಬಾರ್ಡೆಜ್ ತಾಲೂಕಿನ 167 ಮನೆಗಳಿಗೆ ಹಾನಿಯಾಗಿದೆ ಎಂದು ಸಾವಂತ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Vegetable Roll: ಉಳಿದ ಅನ್ನವನ್ನು ಏನು ಮಾಡಬೇಕು ಎಂಬ ಗೊಂದಲದಲ್ಲಿದ್ದರೆ ಈ ವಿಧಾನವನ್ನು ಒಮ್ಮೆ ಟ್ರೈ ಮಾಡಿ​

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?