AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾ ಕಾಂಗ್ರೆಸ್‌ನ ಭರವಸೆಯ ನಾಯಕ ಕೇತನ್ ಭಾಟಿಕರ್ ಸಾವು: ದಾಂಡೇಲಿಗೆ ತೆರಳುತ್ತಿದ್ದಾಗ ಹಾವು ಕಚ್ಚಿ ಘೋರ ದುರಂತ

ಗೋವಾ ಕಾಂಗ್ರೆಸ್ ನಾಯಕ ಡಾ. ಕೇತನ್ ಭಾಟಿಕರ್ ಕರ್ನಾಟಕದ ಗಡಿ ಭಾಗದಲ್ಲಿ ಹಾವಿನ ಕಡಿತಕ್ಕೆ ಬಲಿಯಾಗಿದ್ದಾರೆ. ದಾಂಡೇಲಿಗೆ ತೆರಳುತ್ತಿದ್ದಾಗ ಅವರಿಗೆ ಕರ್ಮಲ್ ಘಾಟ್ ಪ್ರದೇಶದಲ್ಲಿ ಹಾವು ಕಚ್ಚಿದ ಪರಿಣಾಮ ಸಾವಿಗೀಡಾಗಿದ್ದಾರೆ. 38 ವರ್ಷದ ಯುವ ನಾಯಕನ ಅಕಾಲಿಕ ನಿಧನವು ಗೋವಾ ರಾಜಕಾರಣದಲ್ಲಿ ಶೋಕದ ಛಾಯೆ ಮೂಡಿಸಿದೆ.

ಗೋವಾ ಕಾಂಗ್ರೆಸ್‌ನ ಭರವಸೆಯ ನಾಯಕ ಕೇತನ್ ಭಾಟಿಕರ್ ಸಾವು: ದಾಂಡೇಲಿಗೆ ತೆರಳುತ್ತಿದ್ದಾಗ ಹಾವು ಕಚ್ಚಿ ಘೋರ ದುರಂತ
ಕೇತನ್ ಭಾಟಿಕರ್ (ಚಿತ್ರ: ಕೇತನ್ ಭಾಟಿಕರ್ ಅವರ ಫೇಸ್​​ಬುಕ್ ಖಾತೆಯಿಂದ)Image Credit source: Facebook
ಗಣಪತಿ ಶರ್ಮಾ
|

Updated on:May 15, 2026 | 10:31 AM

Share

ಪಣಜಿ, ಮೇ 15: ಗೋವಾ ಕಾಂಗ್ರೆಸ್ (Congress) ನಾಯಕ ಕೇತನ್ ಭಾಟಿಕರ್ (38) (Ketan Bhatikar) ಹಾವಿನ ಕಡಿತದಿಂದ ಮೃತಪಟ್ಟಿದ್ದಾರೆ. ಗೋವಾ-ಕರ್ನಾಟಕ ಗಡಿ ಭಾಗದಲ್ಲಿ ಕರ್ಮಲ್ ಘಾಟ್ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ಕೇತನ್ ಭಾಟಿಕರ್ ದಾಂಡೇಲಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಪಕ್ಷದ ಉದಯೋನ್ಮುಖ ನಾಯಕನ ಅಕಾಲಿಕ ನಿಧನಕ್ಕೆ ಕಾಂಗ್ರೆಸ್ ಮುಖಂಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮುಖ್ಯಾಂಶಗಳು

  • ಗೋವಾ-ಕರ್ನಾಟಕ ಗಡಿಯ ಕರ್ಮಲ್ ಘಾಟ್ ಬಳಿ ಹಾವಿನ ಕಡಿತಕ್ಕೊಳಗಾಗಿ ಕೇತನ್ ಭಾಟಿಕರ್ ಸಾವು.
  • ಕರ್ನಾಟಕದ ದಾಂಡೇಲಿಗೆ ಪ್ರಯಾಣಿಸುತ್ತಿದ್ದ ವೇಳೆ ಘಟನೆ.
  • ಇತ್ತೀಚೆಗೆ ರದ್ದಾದ ಫೋಂಡಾ ವಿಧಾನಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು ಭಾಟಿಕರ್.

ಪೊಲೀಸ್ ಮೂಲಗಳ ಪ್ರಕಾರ, ಗುರುವಾರ ರಾತ್ರಿ ಕೇತನ್ ಭಾಟಿಕರ್ ಅವರು ಕರ್ನಾಟಕದ ದಾಂಡೇಲಿ ಗ್ರಾಮಕ್ಕೆ ತೆರಳುತ್ತಿದ್ದರು. ಮಾರ್ಗಮಧ್ಯೆ ಗೋವಾ-ಕರ್ನಾಟಕ ಗಡಿಯಲ್ಲಿರುವ ಕರ್ಮಲ್ ಘಾಟ್ ಬಳಿ ಯಾವುದೋ ಕಾರಣಕ್ಕಾಗಿ ವಾಹನದಿಂದ ಕೆಳಗಿಳಿದಾಗ ಹಾವೊಂದು ಕಡಿದಿದೆ. ತಕ್ಷಣ ಅವರನ್ನು ಗೋವಾದ ಧಾರವಾಡೋರಾದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಆದರೆ, ದುರದೃಷ್ಟವಶಾತ್ ಅವರು ಆಸ್ಪತ್ರೆಗೆ ತಲುಪುವ ಮೊದಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಕೇತನ್ ಭಾಟಿಕರ್ ಅವರು ಗೋವಾ ಕಾಂಗ್ರೆಸ್‌ನ ಭರವಸೆಯ ನಾಯಕರಾಗಿದ್ದರು. ಫೋಂಡಾ ಉಪಚುನಾವಣೆಗೆ ಇವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಆದರೆ, ಹೈಕೋರ್ಟ್ ತೀರ್ಪಿನಿಂದಾಗಿ ಉಪಚುನಾವಣೆ ರದ್ದಾಗಿತ್ತು. ಹೈಕೋರ್ಟ್ ಆದೇಶದ ವಿರುದ್ಧ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಸದ್ಯ ಪ್ರಕರಣ ವಿಚಾರಣೆಯ ಹಂತದಲ್ಲಿದೆ.

ಇದನ್ನೂ ಓದಿ: ದೆಹಲಿ-ಗೋವಾ ಆಕಾಶ ಏರ್​ ವಿಮಾನದ ವಾಶ್​ರೂಂನಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದ ಪ್ರಯಾಣಿಕ

ಕೇತನ್ ಭಾಟಿಕರ್ ನಿಧನಕ್ಕೆ ಗೋವಾ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಯೂರಿ ಅಲೆಮಾವೊ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಕೇತನ್ ಅವರ ಸಾರ್ವಜನಿಕ ಸೇವೆ ಮತ್ತು ಬದ್ಧತೆಯನ್ನು ನೆನೆಯುತ್ತಾ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಕಾಂಗ್ರೆಸ್ ಪಕ್ಷ ಪ್ರಾರ್ಥಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:27 am, Fri, 15 May 26

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More