AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾ: ಪಾರ್ಟಿಗೆಂದು ಆಹ್ವಾನಿಸಿ ಮೂವರು ಬಾಲಕಿಯರ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ

ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು ಸ್ನೇಹಿತರೇ ಮೂವರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿರುವ ಘಟನೆ ಗೋವಾದಲ್ಲಿ ನಡೆದಿದೆ. ಪೊಲೀಸರ ಬಳಿ ಬಾಲಕಿಯರು ಘಟನೆ ಬಗ್ಗೆ ಮಾಹಿತಿ ನೀಡಿದ್ದು, ಇಬ್ಬರು ಆರೋಪಿಗಳು ಹುಟ್ಟುಹಬ್ಬ ಆಚರಣೆಗೆಂದು ಕಾಯ್ದಿರಿಸಿದ ಹೋಟೆಲ್​​ ಕೊಠಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್), ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಮತ್ತು ಗೋವಾ ಮಕ್ಕಳ ಕಾಯ್ದೆಯಡಿಯಲ್ಲಿ ಅತ್ಯಾಚಾರ ಮತ್ತು ಅಪಹರಣದ ಆರೋಪಗಳನ್ನು ಹೊರಿಸಲಾಗಿದೆ.

ಗೋವಾ: ಪಾರ್ಟಿಗೆಂದು ಆಹ್ವಾನಿಸಿ ಮೂವರು ಬಾಲಕಿಯರ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ
ಕ್ರೈಂImage Credit source: Shutterstock
ನಯನಾ ರಾಜೀವ್
|

Updated on: Jun 12, 2025 | 9:37 AM

Share

ಗೋವಾ, ಜೂನ್ 12: ಪಾರ್ಟಿಗೆಂದು ಮೂವರು ಬಾಲಕಿಯರನ್ನು ಆಹ್ವಾನಿಸಿ ಸ್ನೇಹಿತರೇ  ಅತ್ಯಾಚಾರವೆಸಗಿರುವ ಘಟನೆ ಉತ್ತರ ಗೋವಾದಲ್ಲಿ ನಡೆದಿದೆ. ಮೂವರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ. ಜೂನ್ 8 ರಂದು ಈ ಘಟನೆ ನಡೆದಿದ್ದು, ಹುಡುಗಿಯರ ಪೋಷಕರು ಪೊಲೀಸರ ಬಳಿ ನಾಪತ್ತೆ ದೂರು ದಾಖಲಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ.

ಬಾಲಕಿಯರು 11, 13 ಮತ್ತು 15 ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದ್ದು, ಅವರಲ್ಲಿ ಇಬ್ಬರು ಒಡಹುಟ್ಟಿದವರು. ಪೊಲೀಸರ ಪ್ರಕಾರ, ಹುಡುಗಿಯರು ಆರೋಪಿಗಳ ಸ್ನೇಹಿತರಾಗಿದ್ದರು ಮತ್ತು ಅವರನ್ನು ಪಾರ್ಟಿಗೆ ಆಹ್ವಾನಿಸಿದ್ದರಿಂದ ಇವರು ಹೋಗಿದ್ದರು.

ಪೊಲೀಸರು ಅವರನ್ನು ಹುಡುಕಲು ಹಲವಾರು ತಂಡಗಳನ್ನು ರಚಿಸಿದ ನಂತರ ಅದೇ ದಿನ ಕ್ಯಾಲಂಗುಟ್ ಬೀಚ್‌ನಲ್ಲಿರುವ ಹೋಟೆಲ್‌ನಿಂದ ಅವರನ್ನು ರಕ್ಷಿಸಲಾಯಿತು.ಪೊಲೀಸರು ಅಲ್ತಾಫ್ (19) ಮತ್ತು ಓಂ (21) ಎಂದು ಗುರುತಿಸಲಾದ ಆರೋಪಿಗಳನ್ನು ಸಹ ಬಂಧಿಸಿದ್ದಾರೆ.

ಇದನ್ನೂ ಓದಿ
Image
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಪ್ರಕರಣದ ಎ3 ಪೊಲೀಸಪ್ಪನ ಮಗ ಪರಾರಿ
Image
ಹೆಬ್ಬಾಳ್ಕರ್​​ಗೆ ಅವಾಚ್ಯ ಪದ ಬಳಕೆ ಆರೋಪ: ಸಿಟಿ ರವಿಗೆ ಕೋರ್ಟ್​ ರಿಲೀಫ್!
Image
ಯೋಧನ ಅಂತ್ಯಕ್ರಿಯೆಗೆ ಸರ್ಕಾರಿ ಜಾಗ ಕೇಳಿದವರ ಮೇಲೆ ಲಾಠಿ ಬೀಸಿದ ಪೊಲೀಸರು
Image
ಕುರಾನ್ ಸುಟ್ಟಿದ್ದನ್ನ ಖಂಡಿಸಿ ಪ್ರತಿಭಟನೆ: ಪೊಲೀಸರ ಮೇಲೆಯೇ ಚಪ್ಪಲಿ ಎಸೆತ

ಪೊಲೀಸರ ಬಳಿ ಬಾಲಕಿಯರು ಘಟನೆ ಬಗ್ಗೆ ಮಾಹಿತಿ ನೀಡಿದ್ದು, ಇಬ್ಬರು ಆರೋಪಿಗಳು ಹುಟ್ಟುಹಬ್ಬ ಆಚರಣೆಗೆಂದು ಕಾಯ್ದಿರಿಸಿದ ಹೋಟೆಲ್​​ ಕೊಠಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್), ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಮತ್ತು ಗೋವಾ ಮಕ್ಕಳ ಕಾಯ್ದೆಯಡಿಯಲ್ಲಿ ಅತ್ಯಾಚಾರ ಮತ್ತು ಅಪಹರಣದ ಆರೋಪಗಳನ್ನು ಹೊರಿಸಲಾಗಿದೆ.

ಪ್ರಕರಣದಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾದ ನಂತರ ಪೊಲೀಸರು ಹೋಟೆಲ್ ಮಾಲೀಕರನ್ನು ಬಂಧಿಸಿದ್ದಾರೆ. ಮತ್ತು ಪೋಷಕರ ಅನುಪಸ್ಥಿತಿಯಲ್ಲಿ ಅಪ್ರಾಪ್ತ ವಯಸ್ಕರಿಗೆ ಕೊಠಡಿಗಳನ್ನು ಹೇಗೆ ನೀಡಲಾಯಿತು ಎಂದು ಪ್ರಶ್ನಿಸಿದರು.

ಮತ್ತಷ್ಟು ಓದಿ: ಉತ್ತರ ಪ್ರದೇಶ: ಮೂರು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಮೆಟ್ರೋ ಸೇತುವೆ ಕೆಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ

ಮತ್ತೊಂದು ಘಟನೆ ಚಾಕೊಲೇಟ್​ ಆಮಿಷವೊಡ್ಡಿ 4 ವರ್ಷದ ಬಾಲಕಿ ಕರೆದೊಯ್ದು ಅತ್ಯಾಚಾರ, ಇಟ್ಟಿಗೆಯಿಂದ ಹಲ್ಲೆ ಚಾಕೊಲೇಟ್ ಆಮಿಷವೊಡ್ಡಿ 4 ವರ್ಷದ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಪಕ್ಕದ ಮನೆಯ ವ್ಯಕ್ತಿ ಬಾಲಕಿಗೆ ಆಮಿಷವೊಡ್ಡಿ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಬಳಿಕ ಇಟ್ಟಿಗೆಯಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಮಂಗಳವಾರ ಸಂಜೆ ಕಾನ್ಪುರ ನಗರ ಜಿಲ್ಲೆಯ ಘಟಂಪುರದಲ್ಲಿ ಈ ಘಟನೆ ನಡೆದಿದೆ.

ಸಂಜೆ 5.30 ರ ಸುಮಾರಿಗೆ ಬಾಲಕಿ ಹತ್ತಿರದ ಅಂಗಡಿಗೆ ಹೋಗಿದ್ದಳು ಎಂದು ಆಕೆಯ ತಂದೆ ಹೇಳಿದ್ದಾರೆ .ಅಂಗಡಿಯ ಬಳಿ, ಅದೇ ಪ್ರದೇಶದ ಯುವಕನೊಬ್ಬ ಬಾಲಕಿ ಬಳಿ ಚಾಕೊಲೇಟ್​ ಕೊಡಿಸುವುದಾಗಿ ಹೇಳಿ ಅಂಗಡಿಯ ಹಿಂದಿನ ಪೊದೆಯೊಳಗೆ ಕರೆದೊಯ್ದಿದ್ದ. ಬಾಲಕಿ ನೋವಿನಿಂದ ಕಿರುಚಿದಾಗ, ಆರೋಪಿ ಆಕೆಯ ಬಾಯಿಯೊಳಗೆ ಎಲೆಗಳನ್ನು ತುರುಕಿದ್ದಾನೆ.

ಆಕೆ ಅಳುತ್ತಲೇ ಇದ್ದಳು. ಆ ವ್ಯಕ್ತಿ ಹತ್ತಿರದಲ್ಲಿ ಇರಿಸಲಾಗಿದ್ದ ಇಟ್ಟಿಗೆಯಿಂದ ಆಕೆಗೆ ಹಲವಾರು ಬಾರಿ ಹೊಡೆದು ಬಾಲಕಿಯನ್ನು ರಕ್ತದ ಮಡುವಿನಲ್ಲಿ ಬಿಟ್ಟು ಓಡಿಹೋಗಿದ್ದಾನೆ. ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ ಬಾಲಕಿಯ ತಂದೆ, ನನ್ನ ಮಗಳು ಸಂಜೆ 5.30 ರ ಸುಮಾರಿಗೆ ಹತ್ತಿರದ ಅಂಗಡಿಗೆ ಹೋಗಿದ್ದಳು. 10 ರಿಂದ 15 ನಿಮಿಷಗಳಾದರೂ ಆಕೆ ಹಿಂತಿರುಗದಿದ್ದಾಗ, ಅವಳ ತಾಯಿ ಆಕೆಯನ್ನು ಹುಡುಕಲು ಹೋಗಿದ್ದಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ