Godhra Violence: ಗೋಧ್ರಾ ಗಲಭೆಯಲ್ಲಿ ರೈಲಿಗೆ ಬೆಂಕಿ ಹಚ್ಚಿದ 8 ಅಪರಾಧಿಗಳಿಗೆ ಜಾಮೀನು ನೀಡಿದ ಸುಪ್ರೀಂ

|

Updated on: Apr 21, 2023 | 4:24 PM

2002ರ ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಇಂದು (ಏ.21) ಜಾಮೀನು ಮಂಜೂರು ಮಾಡಿದೆ.

Godhra Violence: ಗೋಧ್ರಾ ಗಲಭೆಯಲ್ಲಿ ರೈಲಿಗೆ ಬೆಂಕಿ ಹಚ್ಚಿದ 8 ಅಪರಾಧಿಗಳಿಗೆ ಜಾಮೀನು ನೀಡಿದ ಸುಪ್ರೀಂ
ಸುಪ್ರೀಂ
Follow us on

ದೆಹಲಿ: 2002ರ ಗೋಧ್ರಾ ರೈಲು ಹತ್ಯಾಕಾಂಡ (Godhra Violence) ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಇಂದು (ಏ.21) ಜಾಮೀನು ಮಂಜೂರು ಮಾಡಿದೆ. ಇತರ ನಾಲ್ವರು ಅಪರಾಧಿಗಳ ಜಾಮೀನು ಅರ್ಜಿಯನ್ನು ಈ ಗಲಭೆಯಲ್ಲಿ ದೊಡ್ಡ ಮಟ್ಟದ ಪಾತ್ರ ಇದೆ ಎಂದು ತಿರಸ್ಕರಿಸಲಾಗಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಎಂಟು ಅಪರಾಧಿಗಳಿಗೆ 17 ವರ್ಷಗಳಿಂದ ಜೈಲುವಾಸ ಅನುಭವಿಸಿದ ಹಿನ್ನೆಲೆಯಲ್ಲಿ ಜಾಮೀನು ನೀಡಿದೆ. ಈ ಎಂಟು ಜನ ಅಪರಾಧಿಗಳು ಜೀವಾವಧಿ ಶಿಕ್ಷೆಗೆ ಗುರಿಯಾದವರು ಮತ್ತು ಈ ಕುರಿತು ಗುಜರಾತ್ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿಯಲಾಯಿತು. ವಿಚಾರಣಾ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಒಳಗಾದ ಅಪರಾಧಿಗಳ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ ಆದರೆ ಗುಜರಾತ್ ಹೈಕೋರ್ಟ್ ಅದನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿದೆ.

ಗೋಧ್ರಾ ರೈಲು ಕೋಚ್ ಸುಟ್ಟ ಪ್ರಕರಣದ ಅಪರಾಧಿಗಳು ಗಂಭೀರ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ ಎಂದು ಗುಜರಾತ್ ಸರ್ಕಾರ ಸೋಮವಾರ ಹೇಳಿತ್ತು. ಆರೋಪಿಗಳು ರೈಲಿನ ಬಾಗಿಲನ್ನು ಹೊರಗಿನಿಂದ ಲಾಕ್ ಮಾಡಿದ್ದಾರೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸುಪ್ರೀಂ ಕೋರ್ಟ್‌ಗೆ ಹೇಳಿದರು.

ಇದನ್ನೂ ಓದಿ:Bilkis Bano Case: ಅತ್ಯಾಚಾರ ಅಪರಾಧಿಗಳ ಬಿಡುಗಡೆ ಆದೇಶ ಮರುಪರಿಶೀಲಿಸುವಂತೆ ಕೋರಿ ಬಿಲ್ಕಿಸ್ ಬಾನು ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಜಾ

ಆದರೆ, ಅಪರಾಧಿಗಳ ಪರ ವಕೀಲರು ಅವರು ಈಗಾಗಲೇ 17 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಫೆಬ್ರವರಿ 27, 2002 ರಂದು ಗುಜರಾತ್‌ನ ಗೋಧ್ರಾ ರೈಲು ನಿಲ್ದಾಣದಲ್ಲಿ ಸಬರಮತಿ ಎಕ್ಸ್‌ಪ್ರೆಸ್‌ನ ಕೆಲವು ಬೋಗಿಗಳಿಗೆ ಬೆಂಕಿ ಹಾಕಿದ ಪರಿಣಾಮ 58 ಜನರು ಪ್ರಾಣ ಕಳೆದುಕೊಂಡಿದ್ದರು.

ಈ ಘಟನೆಯು ಗುಜರಾತ್‌ನಲ್ಲಿ ದೊಡ್ಡ ಪ್ರಮಾಣದ ಗಲಭೆಗೆ ಕಾರಣವಾಯಿತು. 2011ರಲ್ಲಿ ಸ್ಥಳೀಯ ನ್ಯಾಯಾಲಯವು 31 ಆರೋಪಿಗಳಿಗೆ ಶಿಕ್ಷೆ ವಿಧಿಸಿ 63 ಜನರನ್ನು ಖುಲಾಸೆಗೊಳಿಸಿತ್ತು. ವಿಚಾರಣಾ ನ್ಯಾಯಾಲಯವು ಹನ್ನೊಂದು ಆರೋಪಿಗಳಿಗೆ ಮರಣದಂಡನೆ ಮತ್ತು 20 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ನಂತರ ಗುಜರಾತ್ ಹೈಕೋರ್ಟ್ 31 ಆರೋಪಿಗಳನ್ನು ದೋಷಿಗಳೆಂದು ಪರಿಗಣಿಸುವ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ ಆದರೆ 11 ಮಂದಿಯ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿತು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ