ಗಾಂಧೀಜಿ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ, ಗೋಡ್ಸೆಯನ್ನು ಹೊಗಳಿದ ದೇವಮಾನವನ ವಿರುದ್ಧ ಕೇಸ್ ದಾಖಲು

ಗಾಂಧೀಜಿ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ, ಗೋಡ್ಸೆಯನ್ನು ಹೊಗಳಿದ ದೇವಮಾನವನ ವಿರುದ್ಧ ಕೇಸ್ ದಾಖಲು
ಕಾಳಿಚರಣ್ ಮಹಾರಾಜ್

ರಾಜಕೀಯದ ಮೂಲಕ ರಾಷ್ಟ್ರವನ್ನು ವಶಪಡಿಸಿಕೊಳ್ಳುವುದು ಇಸ್ಲಾಂನ ಗುರಿಯಾಗಿದೆ. ಮಹಾತ್ಮ ಗಾಂಧಿಯನ್ನು ಕೊಂದ ನಾಥೂರಾಂ ಗೋಡ್ಸೆಗೆ ನಾನು ಧನ್ಯವಾದ ತಿಳಿಸುತ್ತೇನೆ ಎಂದು ಕಾಳಿಚರಣ್ ಮಹಾರಾಜ್ ಹೇಳಿದ್ದರು.

TV9kannada Web Team

| Edited By: Sushma Chakre

Dec 27, 2021 | 3:51 PM

ರಾಯ್​ಪುರ: ರಾಷ್ಟ್ರಪಿತ ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಕ್ಕಾಗಿ ಮತ್ತು ಮಹಾತ್ಮ ಗಾಂಧೀಜಿಯನ್ನು ಕೊಂದ ನಾಥುರಾಮ್ ಗೋಡ್ಸೆಯನ್ನು ಹೊಗಳಿದ್ದಕ್ಕಾಗಿ ಸ್ವಘೋಷಿತ ದೇವಮಾನವ ಕಾಳಿಚರಣ್ ಮಹಾರಾಜ್ ವಿರುದ್ಧ ರಾಯ್‌ಪುರದ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ರಾಯ್‌ಪುರದ ಮಾಜಿ ಮೇಯರ್ ಪ್ರಮೋದ್ ದುಬೆ ಅವರ ದೂರಿನ ಮೇರೆಗೆ ರಾಯ್‌ಪುರದ ತಿಕ್ರಪಾರಾ ಪೊಲೀಸ್ ಠಾಣೆಯಲ್ಲಿ ಕಾಳಿಚರಣ್ ಮಹಾರಾಜ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಭಾನುವಾರ ರಾಯ್‌ಪುರದ ರಾವಣ ಭಟ ಮೈದಾನದಲ್ಲಿ ನಡೆದ ಧರ್ಮ ಸಂಸದ್‌ನಲ್ಲಿ ಮಾತನಾಡಿದ ಕಾಳಿಚರಣ್ ಮಹಾರಾಜ್, ರಾಜಕೀಯದ ಮೂಲಕ ರಾಷ್ಟ್ರವನ್ನು ವಶಪಡಿಸಿಕೊಳ್ಳುವುದು ಇಸ್ಲಾಂನ ಗುರಿಯಾಗಿದೆ. ಮಹಾತ್ಮ ಗಾಂಧಿಯನ್ನು ಕೊಂದ ನಾಥೂರಾಂ ಗೋಡ್ಸೆಗೆ ನಾನು ಧನ್ಯವಾದ ತಿಳಿಸುತ್ತೇನೆ ಎಂದು ಅವರು ಹೇಳಿದ್ದರು. ಕಾಳಿಚರಣ್ ವಿರುದ್ಧ ಐಪಿಸಿಯ ಸೆಕ್ಷನ್ 505(2) ಮತ್ತು ಸೆಕ್ಷನ್ 294 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಹರಿದ್ವಾರದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಹಿಂದೂ ಧಾರ್ಮಿಕ ಮುಖಂಡರು ಮಾಡಿದ ಪ್ರಚೋದನಕಾರಿ ಮತ್ತು ಕೋಮುವಾದಿ ಭಾಷಣಗಳ ಬೆನ್ನಲ್ಲೇ ಕಾಳಿಚರಣ್ ಮಹಾರಾಜ್ ರಾಯ್‌ಪುರ ಧರಮ್ ಸಂಸದ್‌ನಲ್ಲಿ ಈ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಕಾಳಿಚರಣ್ ಮಹಾರಾಜ್ ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟ್ಟರ್‌ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮಹಾತ್ಮ ಗಾಂಧಿ ಅವರ ಘೋಷಣೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ. “ನೀವು ನನ್ನನ್ನು ಸರಪಳಿಯಲ್ಲಿ ಬಂಧಿಸಬಹುದು, ಹಿಂಸಿಸಬಹುದು, ನೀವು ಈ ದೇಹವನ್ನು ನಾಶ ಪಡಿಸಬಹುದು. ಆದರೆ, ನೀವು ನನ್ನ ಆಲೋಚನೆಗಳನ್ನು ಬಂಧಿಸಲು ಸಾಧ್ಯವಿಲ್ಲ – ಮಹಾತ್ಮ ಗಾಂಧಿ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹರೀಶ್ ರಾವತ್ ಭೇಟಿಯಾದ ರಾಹುಲ್ ಗಾಂಧಿ; ಉತ್ತರಾಖಂಡ್ ಚುನಾವಣಾ ಪ್ರಚಾರಕ್ಕೆ ರಾವತ್ ನೇತೃತ್ವ

ಪ್ರಿಯಾಂಕಾ ಗಾಂಧಿ ಮಕ್ಕಳ ಇನ್​ಸ್ಟಾಗ್ರಾಂ ಖಾತೆ ಹ್ಯಾಕ್ ಆರೋಪ; ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ

Follow us on

Related Stories

Most Read Stories

Click on your DTH Provider to Add TV9 Kannada