ಟಿಟಿಡಿ: ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಇನ್ಮುಂದೆ ಮಂಗಳಸೂತ್ರ ಮಾರಾಟ

ಇದಕ್ಕಾಗಿ ತಿರುಪತಿ ತಿಮ್ಮಪ್ಪನಿಗೆ ಬರುವ ಕಾಣಿಕೆಯ ಬಂಗಾರದಿಂದ 5 ಗ್ರಾಂ ಮತ್ತು 10 ಗ್ರಾಂ ಕರಿಮಣಿಯನ್ನು ಮಾಡಲು ಟಿಟಿಡಿ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಯಿತು. ತಿಮ್ಮಪ್ಪನಿಗೆ ಪಾದಪೂಜೆ ನೆರವೇರಿದ ನಂತರ ನವ ದಂಪತಿಗೆ ಪ್ರಸಾದ ವಿನಿಯೋಗ ನಡೆಯಲಿದೆ.

ಟಿಟಿಡಿ: ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಇನ್ಮುಂದೆ ಮಂಗಳಸೂತ್ರ ಮಾರಾಟ
ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಇನ್ಮುಂದೆ ಮಂಗಳಸೂತ್ರ ಮಾರಾಟ
Follow us
ಸಾಧು ಶ್ರೀನಾಥ್​
|

Updated on:Jan 31, 2024 | 12:55 PM

ಹೊಸದಾಗಿ ಮದುವೆಯಾಗುವ ಭಕ್ತರಿಗಾಗಿ ಮಂಗಳಸೂತ್ರಗಳನ್ನು ಮಾರಾಟ ಮಾಡಲು ತಿರುಮಲ ತಿರುಪತಿ ದೇವಸ್ಥಾನಂ ನಿರ್ಧರಿಸಿದೆ. ತಿಮ್ಮಪ್ಪನಿಗೆ ಪಾದಪೂಜೆ ನೆರವೇರಿದ ನಂತರ ನವ ದಂಪತಿಗೆ ಪ್ರಸಾದ ವಿನಿಯೋಗ ನಡೆಯಲಿದೆ. ಇದಕ್ಕಾಗಿ ತಿರುಪತಿ ತಿಮ್ಮಪ್ಪನಿಗೆ ಬರುವ ಕಾಣಿಕೆಯ ಬಂಗಾರದಿಂದ 5 ಗ್ರಾಂ ಮತ್ತು 10 ಗ್ರಾಂ ಕರಿಮಣಿಯನ್ನು ಮಾಡಲು ಟಿಟಿಡಿ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಯಿತು. 2024-25ಕ್ಕೆ ಸಂಬಂಧಿಸಿದಂತೆ, ಆಡಳಿತ ಮಂಡಳಿಯು 5,141 ಕೋಟಿಗಳೊಂದಿಗೆ 2024-25 ರ ಟಿಟಿಡಿಯ ವಾರ್ಷಿಕ ಬಜೆಟ್ ಅನ್ನು ಅನುಮೋದಿಸಿದೆ.

2024-25 ಟಿಟಿಡಿ ವಾರ್ಷಿಕ ಬಜೆಟ್ ವಿಶೇಷಗಳು: ಟಿಟಿಡಿ ನೌಕರರ ವಸತಿ ಪ್ರದೇಶಗಳಲ್ಲಿ ಜಲ್ಲಿಕಲ್ಲು ರಸ್ತೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಟಿಟಿಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಇಲಾಖೆಗಳ ನೌಕರರ ವೇತನ ಹೆಚ್ಚಳಕ್ಕೆ ಆಡಳಿತ ಮಂಡಳಿ ಗ್ರೀನ್ ಸಿಗ್ನಲ್ ನೀಡಿದೆ. ಟಿಟಿಡಿ ಅಧೀನದಲ್ಲಿ ನಡೆಯುತ್ತಿರುವ 60 ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲು ನಿರ್ಧರಿಸಲಾಗಿದೆ. ಸ್ವಿಮ್ಸ್ ಆಸ್ಪತ್ರೆಯನ್ನು 300 ಹಾಸಿಗೆಗಳಿಂದ 1,200 ಹಾಸಿಗೆಗಳಿಗೆ ವಿಸ್ತರಿಸಲು ಟಿಟಿಡಿ ಮಂಡಳಿಯು ಅನುಮೋದನೆ ನೀಡಿದೆ. ಅನ್ನಮಯ್ಯ ಭವನದ ಜತೆಗೆ ಕುಟೀರಗಳ ಆಧುನೀಕರಣಕ್ಕೆ ಹಾಗೂ ಸಪ್ತಗಿರಿ ಛತ್ರಗಳ ಅಭಿವೃದ್ಧಿಗೆ ಅಪಾರ ಹಣ ಮೀಸಲಿಟ್ಟಿದೆ. ಟಿಟಿಡಿಯಲ್ಲಿ ಒರಾಕಲ್ ಫ್ಯೂಷನ್ ಕ್ಲೌಡ್ ಸಾಫ್ಟ್‌ವೇರ್ ಬಳಕೆಗೆ ಅನುಮೋದನೆ ನೀಡಲಾಗಿದೆ.

ಮತ್ತಷ್ಟು ಓದಿ: ದೆಹಲಿಯ ಐಷಾರಾಮಿ ಹೋಟೆಲ್​ನಲ್ಲಿ ಹಣ ನೀಡದೆ 15 ದಿನಗಳ ಕಾಲ ಉಳಿದಿದ್ದ ಆಂಧ್ರ ಮಹಿಳೆಯ ಬಂಧನ

ವಿಜಯವಾಡ ದುರ್ಗದ ಗುಡಿಯ ಆಡಳಿತ ಮಂಡಳಿ ಸಭೆಯಲ್ಲೂ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ದುರ್ಗಮ್ಮನ ದರ್ಶನಕ್ಕಾಗಿ ಎಲಿವೇಟೆಡ್ ಕ್ಯೂಲೈನ್‌ಗಳನ್ನು ಸ್ಥಾಪಿಸಲು ದುರ್ಗದ ದೇವಸ್ಥಾನದ ಆಡಳಿತ ಮಂಡಳಿ ಅನುಮೋದನೆ ನೀಡಿದೆ. ಬೆಟ್ಟದ ಮೇಲೆ ಪೂಜಾ ಮಂಟಪ ನಿರ್ಮಾಣಕ್ಕೂ ಅನುಮೋದನೆ ದೊರೆತಿದೆ. ಘಾಟ್ ರಸ್ತೆ ದುರಸ್ತಿ ಕಾಮಗಾರಿ ಜತೆಗೆ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲಾಗುವುದು ಎಂದು ದುರ್ಗದ ಗುಡಿ ಆಡಳಿತ ಮಂಡಳಿ ಅಧ್ಯಕ್ಷ ಕರ್ನಾಟಿ ರಾಂಬಾಬು ಹೇಳಿದರು. ಶೀಘ್ರವೇ ಬೆಟ್ಟ ಪ್ರದಕ್ಷಿಣೆ ಮಾರ್ಗದಲ್ಲಿ ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗುವುದು ಎಂದು ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:53 pm, Wed, 31 January 24

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ