ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ: ಜಾರಿ ನಿರ್ದೇಶನಾಲಯದ ವಿರುದ್ಧ ಪೊಲೀಸ್ ತನಿಖೆಗೆ ತಡೆಯಾಜ್ಞೆ ನೀಡಲು ಕೇರಳ ಹೈಕೋರ್ಟ್ ನಕಾರ

Kerala High Court: ಕೇರಳ ಪೊಲೀಸರ ತನಿಖೆಗೆ ತಡೆಯಾಜ್ಞೆ ನೀಡಬೇಕು ಎಂದು ಹೇಳಿ ಜಾರಿ ನಿರ್ದೇಶನಾಲಯ ಹೈಕೋರ್ಟ್ ಮೊರೆ ಹೋಗಿತ್ತು. ಇಡಿ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಜರಾಗಿದ್ದರು. ಮುಂದಿನ ವಿಚಾರಣೆಯನ್ನ ಏಪ್ರಿಲ್ 8ಕ್ಕೆ ಮುಂದೂಡಿದ ನ್ಯಾಯಾಲಯವು ಅಂದೇ ತೀರ್ಪು ಪ್ರಕಟಿಸಲಾಗುವುದು ಎಂದು ಹೇಳಿದೆ.

ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ: ಜಾರಿ ನಿರ್ದೇಶನಾಲಯದ ವಿರುದ್ಧ ಪೊಲೀಸ್ ತನಿಖೆಗೆ ತಡೆಯಾಜ್ಞೆ ನೀಡಲು ಕೇರಳ ಹೈಕೋರ್ಟ್ ನಕಾರ
ಕೇರಳ ಹೈಕೋರ್ಟ್
Follow us
ರಶ್ಮಿ ಕಲ್ಲಕಟ್ಟ
|

Updated on: Mar 31, 2021 | 7:40 PM

ತಿರುವನಂತಪುರಂ: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೆಸರನ್ನು ಹೇಳುವಂತೆ  ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರನ್ನು ಒತ್ತಾಯಿಸಲಾಗಿದೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳ ವಿರುದ್ಧ ಕೇರಳ ಪೊಲೀಸರ ಅಪರಾಧ ದಳ ಎಫ್ಐಆರ್ ದಾಖಲಿಸಿಕೊಂಡಿತ್ತು. ಈ ನಡೆಯನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು  ಬಂಧವಾರ ಕೈಗೆತ್ತಿಕೊಂಡ ಕೇರಳ ಹೈಕೋರ್ಟ್, ಕೇರಳ ಪೊಲೀಸರು ತನಿಖೆ ಮುಂದುವರಿಸಬಹುದು ಎಂದು ಹೇಳಿದೆ.

ಕೇರಳ ಪೊಲೀಸರ ತನಿಖೆಗೆ ತಡೆಯಾಜ್ಞೆ ನೀಡಬೇಕು ಎಂದು ಒತ್ತಾಯಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ಇಡಿ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಜರಾಗಿದ್ದರು. ಮುಂದಿನ ವಿಚಾರಣೆಯನ್ನ ಏಪ್ರಿಲ್ 8ಕ್ಕೆ ಮುಂದೂಡಿದ ನ್ಯಾಯಾಲಯವು ಅಂದೇ ತೀರ್ಪು ಪ್ರಕಟಿಸಲಾಗುವುದು ಎಂದು ಹೇಳಿದೆ. ಅದೇ ವೇಳೆ ಇಡಿ ಅಧಿಕಾರಿಗಳ ವಿರುದ್ಧ ಯಾವುದೇ ಕಠಿಣ ಕ್ರಮ ಇಲ್ಲವೇ ಅವರನ್ನು ಬಂಧಿಸುವ ಕಾರ್ಯ ಮಾಡಬಾರದು ಎಂದು ಹೈಕೋರ್ಟ್ ಅಪರಾಧ ದಳಕ್ಕೆ ನಿರ್ದೇಶನ ನೀಡಿದೆ.

ಮಾರ್ಚ್ ತಿಂಗಳ ಆರಂಭದಲ್ಲಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಇಡಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ನೀಡಿದ್ದರು. ಪೊಲೀಸರು ದಾಖಲಿಸಿರುವ ಎಫ್​ಐಆರ್​ನ ವಿವರಗಳಂತೆ, ಕಳೆದ ವರ್ಷದ ಆಗಸ್ಟ್ 12 ಮತ್ತು 13ರಂದು ಸ್ವಪ್ನಾ ಸುರೇಶ್​ರನ್ನು ಪ್ರಶ್ನಿಸಿರುವ ಜಾರಿ ನಿರ್ದೇಶನಾಲಯ, ಮುಖ್ಯಮಂತ್ರಿ ವಿರುದ್ಧ ಸುಳ್ಳು ಹೇಳಿಕೆ ನೀಡುವಂತೆ ಒತ್ತಾಯಿಸಿದೆ. ಸುಳ್ಳು ಸಾಕ್ಷಿ ಸಿದ್ಧಪಡಿಸಲು ಜಾರಿ ನಿರ್ದೇಶನಾಲಯ ಹೀಗೆ ಮಾಡಿದೆ ಎಂದು ಹೇಳಲಾಗಿದೆ. ಸ್ವಪ್ನಾ ಸುರೇಶ್ ಅವರದು ಎನ್ನಲಾಗಿರುವ ಧ್ವನಿ ತುಣುಕೊಂದನ್ನು ಆಧರಿಸಿ ಜಾರಿ ನಿರ್ದೇಶನಾಲಯ ವಿರುದ್ಧ ಸೆಕ್ಷನ್ 120-ಬಿ, 167, 192, 195-ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

14.82 ಕೋಟಿ ಬೆಲೆಬಾಳುವ 30 ಕೆಜಿ ಚಿನ್ನ ಕಳ್ಳ ಸಾಗಾಣಿಕೆ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಸ್ವಪ್ನಾ ಸುರೇಶ್ ಕೇರಳದಲ್ಲಿನ ಯುಎಇ ರಾಯಭಾರ ಕಚೇರಿಯ ಮಾಜಿ ಉದ್ಯೋಗಿಯಾಗಿದ್ದರು. ಕಳೆದ ಕೆಲವು ತಿಂಗಳ ಹಿಂದೆ ಹಂಚಿಕೆಯಾಗಿದ್ದ ಸ್ವಪ್ನಾ ಸುರೇಶ್​ಗೆ ಸಂಬಂಧಿಸಿದ್ದು ಎನ್ನಲಾಗಿರುವ ಧ್ವನಿ ತುಣುಕಿನಲ್ಲಿ, ಇಡಿ ಅಧಿಕಾರಿಗಳು ಮುಖ್ಯಮಂತ್ರಿ ಹಾಗೂ ಇತರ ಕೆಲವು ಸಚಿವರ ವಿರುದ್ಧ ಹೇಳಿಕೆ ನೀಡುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪ ಕೇಳಿಬಂದಿದೆ.

ಅಷ್ಟೇ ಅಲ್ಲದೆ, ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದ ವೇಳೆ ಸ್ವಪ್ನಾ ಸುರೇಶ್ ಜೊತೆಗಿದ್ದ ಇಬ್ಬರು ಮಹಿಳಾ ಪೊಲೀಸರು ಕೂಡ, ವಿಜಯನ್ ಹೆಸರು ಹೇಳುವಂತೆ ಸ್ವಪ್ನಾರನ್ನು ಒತ್ತಾಯಿಸಿದ್ದನ್ನು ಕೇಳಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.  ಜಾರಿ ನಿರ್ದೇಶನಾಲಯ ಜೊತೆಗೆ ರಾಷ್ಟ್ರೀಯ ತನಿಖಾ ದಳ (NIA) ಹಾಗೂ ಕಸ್ಟಮ್ಸ್ ಅಧಿಕಾರಿಗಳು ಕೂಡ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ವಿರುದ್ಧ ತನಿಖೆ ನಡೆಸುತ್ತಿದ್ದಾರೆ. ಕೇಂದ್ರದ ಏಜೆನ್ಸಿಗಳು ತಮ್ಮ ರಾಜ್ಯ ಸರ್ಕಾರವನ್ನು ಗುರಿಯಾಗಿಸಿ ಹೀಗೆ ಮಾಡುತ್ತಿದೆ ಎಂದು ಪಿಣರಾಯಿ ವಿಜಯನ್ ಆರೋಪಿಸಿದ್ದಾರೆ.

ಇದನ್ನೂ ಓದಿ:  ಪಿಣರಾಯಿ ವಿಜಯನ್ ಹೆಸರು ಹೇಳಲು ಸ್ವಪ್ನಾ ಸುರೇಶ್​ರನ್ನು ಒತ್ತಾಯಿಸಲಾಗಿದೆ: ED ವಿರುದ್ಧ ಪ್ರಕರಣ ದಾಖಲಿಸಿದ ಕೇರಳ ಪೊಲೀಸ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್