Sign In

By signing in or creating an account, you agree with Associated Broadcasting Company's Terms & Conditions and Privacy Policy.

Golden Book Of World Records: ಸತತ 8 ಗಂಟೆಗಳ ಕಾಲ ಈಜಿ ದಾಖಲೆ ಸೃಷ್ಟಿಸಿದ 15 ವರ್ಷದ ಬಾಲಕಿ

15 ವರ್ಷದ ಬಾಲಕಿ ಸತತ 8 ಗಂಟೆಗಳ ಕಾಲ ಈಜುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್​ ರೆಕಾರ್ಡ್ಸ್​ಗೆ ಸೇರ್ಪಡೆಯಾಗಿ ಪೋಷಕರು ಮಾತ್ರವಲ್ಲದೇ ಇಡೀ ದೇಶವೇ ಹೆಮ್ಮೆ ಪಡುವಂತೆ ಮಾಡಿದ್ದಾಳೆ.

Golden Book Of World Records: ಸತತ 8 ಗಂಟೆಗಳ ಕಾಲ ಈಜಿ ದಾಖಲೆ ಸೃಷ್ಟಿಸಿದ 15 ವರ್ಷದ ಬಾಲಕಿ
ಚಂದ್ರಕಲಾImage Credit source: India Today
Follow us
ನಯನಾ ರಾಜೀವ್
|

Updated on: Apr 10, 2023 | 12:01 PM

ಎಲ್ಲರಿಗೂ ಜೀವನದಲ್ಲಿ ತಾವು ಏನಾದರೂ ಸಾಧಿಸಬೇಕೆಂಬ ಛಲವಿರುತ್ತದೆ, ಅದನ್ನು ಸಾಧಿಸಿದಾಗ ಆಗುವ ಸಂತೋಷಕ್ಕೆ ಪಾರವೇ ಇರುವುದಿಲ್ಲ. 15 ವರ್ಷದ ಬಾಲಕಿ ಸತತ 8 ಗಂಟೆಗಳ ಕಾಲ ಈಜುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್​ ರೆಕಾರ್ಡ್ಸ್​ಗೆ ಸೇರ್ಪಡೆಯಾಗಿ ಪೋಷಕರು ಮಾತ್ರವಲ್ಲದೇ ಇಡೀ ದೇಶವೇ ಹೆಮ್ಮೆ ಪಡುವಂತೆ ಮಾಡಿದ್ದಾಳೆ. ಛತ್ತೀಸ್​ಗಢದ ದುರ್ಗ್​ ಜಿಲ್ಲೆಯ ಪುರೈ ಗ್ರಾಮದ 15 ವರ್ಷದ ಬಾಲಕಿ ಚಂದ್ರಕಲಾ ಓಜಾ 8 ಗಂಟೆಗಳ ಕಾಲ ನಿರಂತರವಾಗಿ ಈಜುವ ಮೂಲಕ ಸಾಧನೆ ಮಾಡಿದ್ದಾಳೆ.

10ನೇ ತರಗತಿ ವಿದ್ಯಾರ್ಥಿನಿಯಾಗಿರುವ ಚಂದ್ರಕಲಾ, ತನ್ನ 5ನೇ ವಯಸ್ಸಿನಿಂದ ಈಜು ಅಭ್ಯಾಸ ಮಾಡುತ್ತಿದ್ದು, ರಾಷ್ಟ್ರ ಮತ್ತು ರಾಜ್ಯ ಮಟ್ಟದ ಆಟಗಾರರ ಕುಟುಂಬದಿಂದ ಬಂದವರು. ಜ್ಯೂನಿಯರ್ ಓಪನ್ ರಾಷ್ಟ್ರೀಯ ಮತ್ತು ರಾಜ್ಯ ಚಾಂಪಿಯನ್​ಶಿಪ್​ಗಳಲ್ಲಿ 3 ಚಿನ್ನ, 2 ಬೆಳ್ಳಿ ಪದಕಗಳನ್ನು ಅವರು ಗೆದ್ದಿದ್ದಾರೆ. ಅವರ ಅಕ್ಕ ಭೂಮಿಕಾ ಕೂಡ ಈಜುಗಾರ್ತಿ.

ಮತ್ತಷ್ಟು ಓದಿ: ಸೀರೆಯುಟ್ಟ ಅಜ್ಜಿ ನದಿಗೆ ಧುಮುಕಿದ್ದಕ್ಕೆ ಭಲೇ ಭಲೇ ಎನ್ನುತ್ತಿರುವ ನೆಟ್ಟಿಗರು

ಬೆಳಗ್ಗೆ 5.10ಕ್ಕೆ ಪುರೈ ಗ್ರಾಮದ ಹೊಂಡದಲ್ಲಿ ಪ್ರಾರ್ಥನೆ ಮುಗಿಸಿ ಈಜಲು ಪ್ರಾರಂಭಿಸಿದ ಚಂದ್ರಕಲಾ ಮಧ್ಯಾಹ್ನ 1.10ರವರೆಗೂ ಈಜಿದ್ದರು. ಈ ಹೊಸ ದಾಖಲೆ ಸೃಷ್ಟಿಸಲು ಚಂದ್ರಕಲಾ ನಿತ್ಯ 10 ರಿಂದ 12 ಗಂಟೆಗಳ ಕಾಲ ಅಭ್ಯಾಸ ನಡೆಸುತ್ತಿದ್ದರು. ಆಕೆಗೆ ತರಬೇತಿ ನೀಡಿದವರು ಓಂ ಕುಮಾರ್ ಓಜಾ. ಇಡೀ ಗ್ರಾಮವು ಆಕೆಗೆ ಬೆಂಬಲ ನೀಡಿದೆ.

8 ಗಂಟೆಗಳ ಕಾಲ ಈಜಿ ಹೊರಗಡೆ ಬಂದಾಗ ಎಲ್ಲರೂ ಅಭಿನಂದಿಸಿದರು. ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನ ಏಷ್ಯಾ ಮುಖ್ಯಸ್ಥ ಡಾ ಮನೀಷ್ ಬಿಷ್ಣೋಯ್ ಅವರ ಸಾಧನೆಯನ್ನು ಘೋಷಿಸಿದರು ಮತ್ತು ರಾಜ್ಯ ಗೃಹ ಸಚಿವ ತಾಮ್ರಧ್ವಜ್ ಸಾಹು ಅವರು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಮಾಣಪತ್ರ ಮತ್ತು ಪದಕವನ್ನು ನೀಡಿದರು. ಪ್ರಸ್ತುತ, ಪುರೈನಲ್ಲಿ 103 ಯುವ ಈಜುಪಟುಗಳಿದ್ದಾರೆ, ಅವರು ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ ಅನುಭವ ಹೊಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ