AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲ್ಡನ್ ಟೆಂಪಲ್​ಗೆ 2 ದಿನಗಳಲ್ಲಿ ಎರಡನೇ ಬಾಂಬ್ ಬೆದರಿಕೆ; ಅಮೃತಸರದಲ್ಲಿ ಬಿಗಿ ಭದ್ರತೆ

ಅಮೃತಸರದ ಗೋಲ್ಡನ್ ಟೆಂಪಲ್‌ಗೆ ಎರಡು ದಿನಗಳಲ್ಲಿ ಇಮೇಲ್ ಮೂಲಕ ಎರಡನೇ ಬಾರಿ ಬಾಂಬ್ ಬೆದರಿಕೆ ಬಂದಿದ್ದು, ಬಾಂಬ್ ಸ್ಕ್ವಾಡ್‌ಗಳು ಮತ್ತು ಪೊಲೀಸ್ ಕಮಾಂಡೋಗಳನ್ನು ನಿಯೋಜಿಸಲಾಗಿದೆ. ಗೋಲ್ಡನ್ ಟೆಂಪಲ್ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅಧಿಕಾರಿಗಳು ತನಿಖೆಯನ್ನು ಪ್ರಾರಂಭಿಸಿದ್ದಾರೆ ಮತ್ತು ಸಾರ್ವಜನಿಕರು ಜಾಗರೂಕರಾಗಿರಲು ಮನವಿ ಮಾಡಿದ್ದಾರೆ.

ಗೋಲ್ಡನ್ ಟೆಂಪಲ್​ಗೆ 2 ದಿನಗಳಲ್ಲಿ ಎರಡನೇ ಬಾಂಬ್ ಬೆದರಿಕೆ; ಅಮೃತಸರದಲ್ಲಿ ಬಿಗಿ ಭದ್ರತೆ
Golden Temple
ಸುಷ್ಮಾ ಚಕ್ರೆ
|

Updated on: Jul 15, 2025 | 8:20 PM

Share

ಅಮೃತಸರ, ಜುಲೈ 15: ಅಮೃತಸರದ ಐತಿಹಾಸಿಕ ಗೋಲ್ಡನ್ ಟೆಂಪಲ್‌ಗೆ (Golden Temple) 2 ದಿನಗಳಲ್ಲಿ ಎರಡನೇ ಬಾಂಬ್ ಬೆದರಿಕೆ ಬಂದಿದ್ದು, ಇದು ಭಕ್ತರು ಮತ್ತು ಅಧಿಕಾರಿಗಳಲ್ಲಿ ಆತಂಕವನ್ನು ಹೆಚ್ಚಿಸಿದೆ. ಇಂದು ಇಮೇಲ್ ಮೂಲಕ ಬಂದಿರುವ ಬೆದರಿಕೆಯಲ್ಲಿ ಸಿಖ್ ದೇವಾಲಯದ ಗರ್ಭಗುಡಿಯನ್ನು ಗುರಿಯಾಗಿಸಲು ಆರ್‌ಡಿಎಕ್ಸ್ ತುಂಬಿದ ಸ್ಫೋಟಕ ಸಾಧನವನ್ನು ಬಳಸಲಾಗುವುದು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ, ಬಾಂಬ್ ನಿಷ್ಕ್ರಿಯ ದಳಗಳು, ಸ್ನಿಫರ್ ಡಾಗ್ ಘಟಕಗಳು ಮತ್ತು ಬಿಎಸ್‌ಎಫ್ ಸಿಬ್ಬಂದಿ ಮತ್ತು ಪೊಲೀಸ್ ಕಮಾಂಡೋಗಳು ಸೇರಿದಂತೆ ಹೆಚ್ಚುವರಿ ಭದ್ರತಾ ಪಡೆಗಳನ್ನು ಗೋಲ್ಡನ್ ಟೆಂಪಲ್ ಸಂಕೀರ್ಣ ಮತ್ತು ಸುತ್ತಮುತ್ತ ನಿಯೋಜಿಸಲಾಗಿದೆ.

ಗೋಲ್ಡನ್ ಟೆಂಪಲ್ ಸುತ್ತಮುತ್ತಲಿನ ಪ್ರವೇಶ ಮತ್ತು ನಿರ್ಗಮನ ಸ್ಥಳಗಳು ಕಟ್ಟುನಿಟ್ಟಿನ ಕಣ್ಗಾವಲಿನಲ್ಲಿವೆ. ಎಲ್ಲಾ ಪ್ರಯಾಣಿಕರನ್ನು ಸಂಪೂರ್ಣವಾಗಿ ಪರಿಶೀಲಿಸಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿಯ (SGPC) ಕಾರ್ಯದರ್ಶಿ ಪ್ರತಾಪ್ ಸಿಂಗ್, ಇದಕ್ಕೆ ಕಾರಣರಾದವರ ವಿರುದ್ಧ ತಕ್ಷಣ ಮತ್ತು ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. “ಗೋಲ್ಡನ್ ಟೆಂಪಲ್ ವಿಶ್ವದ ನಂಬಿಕೆಯ ಕೇಂದ್ರವಾಗಿದೆ. ನಮಗೆ ಸ್ಫೋಟದ ಬೆದರಿಕೆ ಇಮೇಲ್ ಬಂದಿದೆ. ನಾವು ಪಂಜಾಬ್ ಮುಖ್ಯಮಂತ್ರಿ ಮತ್ತು DGPಗೆ ಪತ್ರ ಬರೆದಿದ್ದೇವೆ” ಎಂದು ಅವರು ಸುದ್ದಿಗಾರರೊಂದಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಆಪರೇಷನ್ ಸಿಂಧೂರ್ ವೇಳೆ ಗೋಲ್ಡನ್ ಟೆಂಪಲ್​ನಲ್ಲಿ ಬಂದೂಕು ಇಟ್ಟಿರಲಿಲ್ಲ; ಭಾರತೀಯ ಸೇನೆ ಸ್ಪಷ್ಟನೆ

ಬೆದರಿಕೆಯ ಹೊರತಾಗಿಯೂ ಪ್ರತಾಪ್ ಸಿಂಗ್ ಸಾರ್ವಜನಿಕರು ಮತ್ತು ಭಕ್ತರು ಭಯಭೀತರಾಗುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು. “ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಲೇ ಇದ್ದಾರೆ. ಭಾರತದಲ್ಲಿರಲಿ ಅಥವಾ ವಿದೇಶಗಳಲ್ಲಿರಲಿ ಯಾರೂ ಗಾಬರಿಯಾಗಬೇಡಿ ಎಂದು ನಾನು ಮನವಿ ಮಾಡುತ್ತೇನೆ” ಎಂದು ಅವರು ಹೇಳಿದರು.

ಇಂತಹ ಬೆದರಿಕೆ ಬಂದ ಸತತ ಎರಡನೇ ದಿನ ಇದು. ಸೋಮವಾರವೂ ಇದೇ ರೀತಿಯ ಇಮೇಲ್ ಬಂದಿದ್ದು, ಭದ್ರತಾ ಕಾಳಜಿಯಿಂದಾಗಿ ಇಮೇಲ್‌ಗಳ ವಿಷಯವನ್ನು ಬಹಿರಂಗಪಡಿಸಲಾಗಿರಲಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ