AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಪ್ರಯಾಣಿಕರಿಗೆ ಒಳ್ಳೆ ಸುದ್ದಿ; ಟಿಕೆಟ್ ಮರುಪಾವತಿಯ ನಿಯಮದಲ್ಲಿ ಮಹತ್ವದ ಬದಲಾವಣೆ

ವಿಮಾನ ಪ್ರಯಾಣಿಕರಿಗೆ ಡಿಜಿಸಿಎ ಗುಡ್ ನ್ಯೂಸ್ ನೀಡಿದೆ. ವಿಮಾನದ ಟಿಕೆಟ್ ಮರುಪಾವತಿಯ ಮಾನದಂಡಗಳನ್ನು ಪರಿಷ್ಕರಿಸಲಾಗಿದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಪ್ರಯಾಣಿಕ ಸ್ನೇಹಿ ಮಾನದಂಡಗಳೊಂದಿಗೆ ವಿಮಾನ ಟಿಕೆಟ್ ನಿಯಮಗಳನ್ನು ಪರಿಷ್ಕರಿಸಿದೆ. ಹೆಸರು ತಿದ್ದುಪಡಿ ಶುಲ್ಕವಿಲ್ಲದೆ ವಿಮಾನ ಟಿಕೆಟ್ ಮರುಪಾವತಿ ಮಾನದಂಡಗಳನ್ನು ಪರಿಷ್ಕರಿಸಲಾಗಿದೆ. ಟಿಕೆಟ್ ಮರುಪಾವತಿ ಪ್ರಕ್ರಿಯೆಯನ್ನು ಸಡಿಲಗೊಳಿಸಲಾಗಿದೆ. ಪ್ರಯಾಣಿಕರು ಈಗ ಟಿಕೆಟ್ ಬುಕಿಂಗ್ ಮಾಡಿದ 48 ಗಂಟೆಗಳ ಒಳಗೆ ಹೆಚ್ಚುವರಿ ಶುಲ್ಕವನ್ನು ಪಾವತಿಸದೆ ವಿಮಾನ ಟಿಕೆಟ್‌ಗಳನ್ನು ರದ್ದುಗೊಳಿಸಬಹುದು ಅಥವಾ ದಿನಾಂಕ ಬದಲಾಯಿಸಬಹುದು.

ವಿಮಾನ ಪ್ರಯಾಣಿಕರಿಗೆ ಒಳ್ಳೆ ಸುದ್ದಿ; ಟಿಕೆಟ್ ಮರುಪಾವತಿಯ ನಿಯಮದಲ್ಲಿ ಮಹತ್ವದ ಬದಲಾವಣೆ
Flight Passengers
ಸುಷ್ಮಾ ಚಕ್ರೆ
|

Updated on: Feb 26, 2026 | 6:35 PM

Share

ನವದೆಹಲಿ, ಫೆಬ್ರವರಿ 26: ವಿಮಾನ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಭಾರತದ ವಾಯುಯಾನ ನಿಯಂತ್ರಕ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ವಿಮಾನ ಟಿಕೆಟ್ ಮರುಪಾವತಿಯ ಮಾನದಂಡಗಳನ್ನು ಪರಿಷ್ಕರಿಸಿದೆ. ಈ ಹೊಸ ಬದಲಾವಣೆಯಿಂದ ರದ್ದತಿ ಮತ್ತು ವಿಮಾನದ ವೇಳಾಪಟ್ಟಿಗಳಲ್ಲಿನ ಬದಲಾವಣೆಗಳ ಸಂದರ್ಭದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ. ಹೊಸ ನಿಯಮದ ಪ್ರಕಾರ ಪ್ರಯಾಣಿಕರು ಬುಕಿಂಗ್ (Flight Booking) ಮಾಡಿದ 48 ಗಂಟೆಗಳ ಒಳಗೆ ವಿಮಾನ ಟಿಕೆಟ್‌ಗಳನ್ನು ರದ್ದುಗೊಳಿಸಲು ಅಥವಾ ತಿದ್ದುಪಡಿ ಮಾಡಲು ಸಾಧ್ಯವಾಗುತ್ತದೆ. ಅದಕ್ಕಾಗಿ ಅವರು ಯಾವುದೇ ಹೆಚ್ಚುವರಿ ಶುಲ್ಕಗಳನ್ನು ಪಾವತಿಸಬೇಕಾಗಿಲ್ಲ. ವಿಮಾನಯಾನ ಸಂಸ್ಥೆಗಳು 14 ಕೆಲಸದ ದಿನಗಳಲ್ಲಿ ಮರುಪಾವತಿಯನ್ನು ಪೂರ್ಣಗೊಳಿಸಬೇಕು. ಟಿಕೆಟ್‌ಗಳನ್ನು ಬುಕ್ ಮಾಡಿದ 24 ಗಂಟೆಗಳ ಒಳಗೆ ಸರಳವಾದ ಹೆಸರು ತಿದ್ದುಪಡಿಗಳಿದ್ದರೆ ಅದಕ್ಕೆ ಶುಲ್ಕ ವಿಧಿಸಲಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕಳೆದ ಡಿಸೆಂಬರ್‌ನಲ್ಲಿ ಇಂಡಿಗೋ ವಿಮಾನದ ಅಡಚಣೆಯಿಂದ ಭಾರತೀಯ ವಾಯುಯಾನ ವಲಯವು ತೊಂದರೆಗೊಳಗಾದಾಗ ಈ ರೀತಿ ಟಿಕೆಟ್ ರದ್ದತಿ, ಟಿಕೆಟ್ ಹೆಸರು ಬದಲಾವಣೆ, ದಿನಾಂಕ ಬದಲಾವಣೆಯ ಸಮಸ್ಯೆಗಳು ಬಹಳ ತೀವ್ರಗೊಂಡವು. ಇದೀಗ ಇವುಗಳಿಗೆ ಪ್ರಯಾಣಿಕರು ಹೆಚ್ಚುವರಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ಇದನ್ನೂ ಓದಿ: ಚೆನ್ನೈ ವಿಮಾನ ನಿಲ್ದಾಣದಲ್ಲಿ 5 ಗಂಟೆಗೂ ಹೆಚ್ಚು ಕಾಲ ಇಂಡಿಗೋ ವಿಮಾನದೊಳಗೆ ಸಿಲುಕಿಕೊಂಡ ಪ್ರಯಾಣಿಕರು

ಇನ್ಮುಂದೆ, ಪ್ರಯಾಣಿಕರು 48 ಗಂಟೆಗಳ ನಂತರ ಟಿಕೆಟ್‌ಗಳನ್ನು ರದ್ದುಗೊಳಿಸಿದರೆ ಅಥವಾ ಬದಲಾಯಿಸಿದರೆ ಅವರು ಯಾವುದೇ ಹೆಚ್ಚುವರಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಅವರು ವಿಮಾನಯಾನ ಸಂಸ್ಥೆಗಳೊಂದಿಗೆ ನೇರವಾಗಿ ಟಿಕೆಟ್‌ಗಳನ್ನು ಬುಕ್ ಮಾಡಿದರೂ ಸಹ ಕೆಲವು ಷರತ್ತುಗಳನ್ನು ಹೊರತುಪಡಿಸಿ ರದ್ದತಿಯ ಸಮಯದಲ್ಲಿ ಅವರು ಹೆಚ್ಚುವರಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ಅಲ್ಲದೆ, ಬುಕಿಂಗ್ ಮಾಡಿದ 24 ಗಂಟೆಗಳ ಒಳಗೆ ಪ್ರಯಾಣಿಕರು ಹೆಚ್ಚುವರಿ ಶುಲ್ಕಗಳಿಲ್ಲದೆ ಹೆಸರಿನಲ್ಲಿ ಕಾಗುಣಿತ ದೋಷ ಅಥವಾ ಇತ್ಯಾದಿ ಸಣ್ಣಪುಟ್ಟ ತಪ್ಪನ್ನು ವಿಮಾನಯಾನ ಸಂಸ್ಥೆಗಳು ಸರಿಪಡಿಸಲಿವೆ. ಆದರೆ, ಇದು ವಿಮಾನಯಾನ ಸಂಸ್ಥೆಯ ಸ್ವಂತ ವೆಬ್‌ಸೈಟ್‌ನಲ್ಲಿ ಮಾಡಿದ ಬುಕಿಂಗ್‌ಗಳಿಗೆ ಮಾತ್ರ ಅನ್ವಯಿಸುತ್ತದೆ. ಪ್ರಯಾಣಿಕರು ಟ್ರಾವೆಲ್ ಏಜೆಂಟ್‌ಗಳು ಅಥವಾ ಮೂರನೇ ವ್ಯಕ್ತಿಯ ಪೋರ್ಟಲ್‌ಗಳ ಮೂಲಕ ಟಿಕೆಟ್‌ಗಳನ್ನು ಖರೀದಿಸಿದರೆ ಅದಕ್ಕೆ ಈ ನಿಯಮ ಅನವಯವಾಗುವುದಿಲ್ಲ. ಆದರೂ ವಿಮಾನಯಾನ ಸಂಸ್ಥೆಗಳು 14 ಕೆಲಸದ ದಿನಗಳಲ್ಲಿ ಮರುಪಾವತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಕಡ್ಡಾಯ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?
‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ
‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ
ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್
ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ