ಕಬ್ಬು ಬೆಳೆಗಾರರಿಗೆ ವಿಜಯದಶಮಿ ದಿನ ಗುಡ್​ ನ್ಯೂಸ್​: ಸಕ್ಕರೆ ವಲಯದ ಹೊಸ ಮಾರ್ಗಸೂಚಿ ರೂಪಿಸಲು ಚಿಂತನೆ

ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರ ರಚಿಸಿರುವ ರಮೇಶ್ ಚಂದ್ರ ನೇತೃತ್ವದ ಜಂಟಿ ಸಮಿತಿ ಇಂದು ಮೊದಲ ಸಭೆ ಮಾಡಿದೆ. ಸಮಿತಿಯು ಸಕ್ಕರೆ ವಲಯಕ್ಕೆ ಸಮಗ್ರ ಮತ್ತು ಸುಸ್ಥಿರ ಮಾರ್ಗಸೂಚಿ ರೂಪಿಸಲು ರಾಜ್ಯ ಸರ್ಕಾರಗಳು, ಕಾರ್ಖಾನೆಗಳು, ರೈತರು ಹಾಗೂ ವಿಜ್ಞಾನಿಗಳೊಂದಿಗೆ ಸಮಾಲೋಚನೆ ನಡೆಸಲು ನಿರ್ಧರಿಸಿದೆ.

ಕಬ್ಬು ಬೆಳೆಗಾರರಿಗೆ ವಿಜಯದಶಮಿ ದಿನ ಗುಡ್​ ನ್ಯೂಸ್​: ಸಕ್ಕರೆ ವಲಯದ ಹೊಸ ಮಾರ್ಗಸೂಚಿ ರೂಪಿಸಲು ಚಿಂತನೆ
ಕಬ್ಬು ಬೆಳೆಗಾರರು

Updated on: Oct 21, 2026 | 10:57 PM

ನವದೆಹಲಿ, ಅಕ್ಟೋಬರ್​ 21: ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಚಿಸಿದ್ದ ಜಂಟಿ ಸಮಿತಿಯ ಮೊದಲ ಸಭೆ ವಿಜಯದಶಮಿ ದಿನ ನವದೆಹಲಿಯಲ್ಲಿ ನಡೆಯಿತು. ಆ ಮೂಲಕ ಶೀಘ್ರದಲ್ಲೇ ದೇಶದ ಸಕ್ಕರೆ ವಲಯದ ಸಮಗ್ರ ಹಾಗೂ ಸುಸ್ಥಿರ ಅಭಿವೃದ್ಧಿಗೆ ಮಾರ್ಗಸೂಚಿ ರೂಪಿಸುವ ನಿಟ್ಟಿನಲ್ಲಿ ಸಮಿತಿ ಸನ್ನದ್ಧವಾಗಿದೆ.

ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚನೆ ತೀರ್ಮಾನ

ನೀತಿ ಆಯೋಗದ ಮಾಜಿ ಸದಸ್ಯ ಪ್ರೊ. ರಮೇಶ್ ಚಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಕ್ಕರೆ ವಲಯದ ವಿವಿಧ ಸಮಸ್ಯೆಗಳು ಹಾಗೂ ಕಬ್ಬು ಬೆಳೆಗಾರರ ಬೇಡಿಕೆಗಳ ಬಗ್ಗೆ ಚರ್ಚಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರಗಳು, ಸಕ್ಕರೆ ಕಾರ್ಖಾನೆಗಳು, ಕಬ್ಬು ಬೆಳೆಗಾರರು ಮತ್ತು ಕೃಷಿ ವಿಜ್ಞಾನಿಗಳೊಂದಿಗೆ ಅಗತ್ಯ ಸಮಾಲೋಚನೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಇದನ್ನೂ ಓದಿ: ಕಬ್ಬು ಬೆಳೆಗಾರರ ಸಮಸ್ಯೆಗಳ ಪರಿಶೀಲನೆಗೆ ರಮೇಶ್ ಚಂದ್ ನೇತೃತ್ವದಲ್ಲಿ ಸಮಿತಿ ರಚಿಸಿದ ಕೇಂದ್ರ ಸರ್ಕಾರ

ಇನ್ನು ಕಬ್ಬು ಬೆಳೆಗಾರರ ಸಮಸ್ಯೆಗಳು ಸೇರಿದಂತೆ ಸಮಗ್ರ ಸಕ್ಕರೆ ವಲಯದ ಸಾಧಕ-ಬಾಧಕಗಳ ಕುರಿತು ಸಮಾಲೋಚನೆಗೆ ಸಮಿತಿ ಮುಂದಾಗಿದೆ. ಹಾಗಾಗಿ ಕಬ್ಬು ಬೆಳೆಗಾರರು, ಸಕ್ಕರೆ ಕಾರ್ಖಾನೆಗಳ ಸಂಘಗಳು, ಒಕ್ಕೂಟಗಳು, ಸಕ್ಕರೆ ಮತ್ತು ಕಬ್ಬು ಕ್ಷೇತ್ರದ ಪ್ರಮುಖ ಸಂಶೋಧನಾ ಸಂಸ್ಥೆಗಳನ್ನು ಸಹ ತೊಡಗಿಸಿಕೊಳ್ಳಲು ಸಮಿತಿ ತೀರ್ಮಾನಿಸಿದೆ.

ಕೃಷಿ ವಿಜ್ಞಾನಿಗಳು ಮತ್ತು ಸಂಶೋಧಕರ ಅಭಿಪ್ರಾಯ ಸಂಗ್ರಹ

ಕರ್ನಾಟಕ, ಮಹಾರಾಷ್ಟ್ರ, ಉತ್ತರಪ್ರದೇಶ, ಹರಿಯಾಣ ಸೇರಿದಂತೆ ಕಬ್ಬು ಬೆಳೆಯುವ ಪ್ರದೇಶಗಳ ವಿಜ್ಞಾನಿಗಳು, ಸಂಶೋಧಕರು ಹಾಗೂ ಕೃಷಿ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳನ್ನೂ ಸಮಾಲೋಚನಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಿದ್ದು, ಶೀಘ್ರದಲ್ಲೇ ಜಂಟಿ ಸಮಿತಿ ಕಾರ್ಯ ಆರಂಭವಾಗಲಿದೆ. ವೈಜ್ಞಾನಿಕ ಸಲಹೆ-ಸೂಚನೆಗಳನ್ನು ಸ್ವೀಕರಿಸುವ ಜಂಟಿ ಸಮಿತಿ, ಸಕ್ಕರೆ ವಲಯದ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿಗೆ ಹೊಸ ಮಾರ್ಗಸೂಚಿ ರೂಪಿಸುವ ಕುರಿತು ತನ್ನ ವರದಿಯಲ್ಲಿ ಉಲ್ಲೇಖಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: ಎಂಎಸ್​ಪಿ, ಎಫ್​ಆರ್​ಪಿ ಹೆಚ್ಚಳಕ್ಕೆ ಕಬ್ಬು ಬೆಳೆಗಾರರ ಪಟ್ಟು: ರಾಜ್ಯಾದ್ಯಂತ ಬೀದಿಗಿಳಿದ ರೈತರು, ಹೆದ್ದಾರಿ ತಡೆದು ಉಗ್ರ ಹೋರಾಟ

ಕೇಂದ್ರ ಸರ್ಕಾರ ರಚಿಸಿದ ವಿಶೇಷ ಸಮಿತಿ ಮೊದಲ ಸಭೆಯಲ್ಲಿ ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಕುರಿತು ಚರ್ಚೆ ನಡೆಸಿದ್ದು, ಅಧ್ಯಯನ ನಡೆಸುವ ವೇಳೆ ರೈತರು ಮತ್ತು ತಜ್ಞರಿಂದ ವೈಜ್ಞಾನಿಕ ರೀತಿಯ ಅಭಿಪ್ರಾಯಗಳನ್ನು ಪಡೆಯಲು ನಿರ್ಧರಿಸಿದೆ. ಇನ್ನು ಕೇಂದ್ರ ಸರ್ಕಾರ ರಚಿಸಿರುವ ಈ ವಿಶೇಷ ಸಮಿತಿಯ ಮೊದಲ ಸಭೆಯು ದೇಶದ ಸಕ್ಕರೆ ವಲಯದಕ್ಕೆ ಭದ್ರ ಹಾಗೂ ಸುಸ್ಥಿರ ನೀಲನಕ್ಷೆ ರೂಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us