AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corona Vaccine: ಎರಡು ಡೋಸ್​ ಕೊರೊನಾ ಲಸಿಕೆ ಪಡೆದವರಿಗೆ ಶುಭಸುದ್ದಿ: ಐಸಿಎಂಆರ್​ ಅಧ್ಯಯನದ ಪ್ರಾಥಮಿಕ ವರದಿ

Covid 19 Vaccine: ಎರಡು ಡೋಸ್ ಪಡೆದಿದ್ದೂ ಸೋಂಕು ಕಾಣಿಸಿಕೊಂಡ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿದಾಗ ಅದರಲ್ಲಿ ಶೇ.83ರಷ್ಟು ಮಂದಿ ಕೊರೊನಾ ಸೋಂಕಿನ ಗುಣಲಕ್ಷಣಗಳನ್ನು ತೋರ್ಪಡಿಸಿದರಾದರೂ ಶೇ.9.9 ಮಂದಿಗೆ ಮಾತ್ರ ಆಸ್ಪತ್ರೆಗೆ ದಾಖಲಾಗಬೇಕಾದ ಮಟ್ಟದಲ್ಲಿ ಸೋಂಕು ಬಾಧಿಸಿದೆ.

Corona Vaccine: ಎರಡು ಡೋಸ್​ ಕೊರೊನಾ ಲಸಿಕೆ ಪಡೆದವರಿಗೆ ಶುಭಸುದ್ದಿ: ಐಸಿಎಂಆರ್​ ಅಧ್ಯಯನದ ಪ್ರಾಥಮಿಕ ವರದಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 25, 2021 | 3:12 PM

Share

ದೆಹಲಿ: ಕೊರೊನಾ ಎರಡನೇ ಅಲೆ ಗಣನೀಯ ಪ್ರಮಾಣದಲ್ಲಿ ಇಳಿಮುಖವಾಗುತ್ತಿದೆಯಾರೂ ಡೆಲ್ಟಾ ಪ್ಲಸ್ ರೂಪಾಂತರಿ ಹಾಗೂ ಸಂಭವನೀಯ ಮೂರನೇ ಅಲೆ ಭೀತಿ ಇರುವ ಕಾರಣ ಕೊರೊನಾ ಲಸಿಕೆ ವಿತರಣೆಗೆ ಮತ್ತಷ್ಟು ಒತ್ತು ನೀಡಲಾಗುತ್ತಿದೆ. ಇದೇ ಸಂದರ್ಭದಲ್ಲಿ ಕೊರೊನಾ ಲಸಿಕೆಯು ಸೋಂಕಿನಿಂದ ದೇಹವನ್ನು ರಕ್ಷಿಸುವಲ್ಲಿ ಎಷ್ಟು ಪರಿಣಾಮಕಾರಿಯಾಗಿದೆ ಹಾಗೂ ಸಾವಿನ ಪ್ರಮಾಣ ತಗ್ಗಿಸುವಲ್ಲಿ ಹೇಗೆ ಸಹಕಾರಿಯಾಗುತ್ತದೆ ಎಂಬುದಕ್ಕೆ ಸಾಕ್ಷಿಯಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ನಡೆಸಿದ ಅಧ್ಯಯನದ ಪ್ರಾಥಮಿಕ ವರದಿಯೊಂದನ್ನು ಪ್ರಕಟಿಸಲಾಗಿದೆ. ಒಡಿಶಾದ ಆರೋಗ್ಯ ಕೇಂದ್ರಗಳ ಸಹಕಾರದಿಂದ ನಡೆಸಲಾದ ಈ ಅಧ್ಯಯನವು ಸಣ್ಣ ಪ್ರಮಾಣದ ಮಾದರಿಗಳನ್ನು ಒಳಗೊಂಡಿದೆಯಾದರೂ ಲಸಿಕೆಯ ಕಾರ್ಯಕ್ಷಮತೆಯನ್ನು ಬಿಂಬಿಸಲು ಇದು ಉತ್ತಮ ಉದಾಹರಣೆಯಾಗಿದೆ ಎಂದು ತಜ್ಞರು ತಿಳಿಸಿದ್ದಾರೆ.

ಒಡಿಶಾದ ಆರೋಗ್ಯ ಕೇಂದ್ರಗಳಿಂದ ಸಂಗ್ರಹಿಸಲಾದ ಒಟ್ಟು 361 ಮಾದರಿಗಳನ್ನು ಸದರಿ ಅಧ್ಯಯನಕ್ಕೆ ಒಳಪಡಿಸಲಾಗಿದ್ದು, ಆ ಪೈಕಿ 274 ಮಾದರಿಗಳಲ್ಲಿ ಎರಡು ಡೋಸ್​ ಕೊರೊನಾ ಲಸಿಕೆ ಪಡೆದ ಮೇಲೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಗಮನಾರ್ಹ ವಿಚಾರವೆಂದರೆ ಈ ಎಲ್ಲಾ 274 ಮಾದರಿಗಳಲ್ಲೂ ಎರಡು ಡೋಸ್ ಲಸಿಕೆ ತೆಗೆದುಕೊಂಡವರು 14 ದಿನಗಳ ನಿಗಾ ಅವಧಿಯನ್ನು ಪೂರೈಸಿದ್ದರು. ಲೆಕ್ಕಾಚಾರದ ಪ್ರಕಾರ ಈ ಅವಧಿಯಲ್ಲಿ ಕೊರೊನಾ ಸೋಂಕಿನ ವಿರುದ್ಧ ಹೋರಾಡಬಲ್ಲ ಪ್ರತಿಕಾಯಗಳು ದೇಹದಲ್ಲಿ ಅಭಿವೃದ್ಧಿಯಾಗಿರಬೇಕು.

ಆದರೆ, ಮಾರ್ಚ್​ 1ರಿಂದ ಜೂನ್​ 10ರ ನಡುವೆ ಶೇಖರಿಸಲಾದ ಈ ಮಾದರಿಗಳಲ್ಲಿ ಎರಡು ಡೋಸ್ ಲಸಿಕೆ ತೆಗೆದುಕೊಂಡವರಲ್ಲೂ ಸೋಂಕು ಕಾಣಿಸಿಕೊಂಡಿದೆ. ಜತೆಗೆ, ಮತ್ತೆ ಕೆಲವರಲ್ಲಿ ಸೋಂಕು ಕಾಣಿಸಿಕೊಂಡಿದ್ದು ಅವರೆಲ್ಲಾ ಒಂದು ಡೋಸ್ ಕೊರೊನಾ ಲಸಿಕೆ ಪಡೆದವರಾಗಿದ್ದರು ಎಂದು ಹೇಳಲಾಗಿದೆ. ಎರಡು ಡೋಸ್ ಪಡೆದಿದ್ದರೂ ಸೋಂಕು ಕಾಣಿಸಿಕೊಂಡಿದ್ದು ಚಿಂತನೀಯ ಸಂಗತಿಯಾದರೂ ಅದರ ನಂತರದ ಪ್ರಯೋಗಾಲಯದಲ್ಲಿ ನಡೆಸಲಾದ ಅಧ್ಯಯನದ ವರದಿಗಳು ಕೊಂಚ ಸಮಾಧಾನ ನೀಡಿವೆ.

ಏಕೆಂದರೆ ಎರಡು ಡೋಸ್ ಪಡೆದಿದ್ದೂ ಸೋಂಕು ಕಾಣಿಸಿಕೊಂಡ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿದಾಗ ಅದರಲ್ಲಿ ಶೇ.83ರಷ್ಟು ಮಂದಿ ಕೊರೊನಾ ಸೋಂಕಿನ ಗುಣಲಕ್ಷಣಗಳನ್ನು ತೋರ್ಪಡಿಸಿದರಾದರೂ ಶೇ.9.9 ಮಂದಿಗೆ ಮಾತ್ರ ಆಸ್ಪತ್ರೆಗೆ ದಾಖಲಾಗಬೇಕಾದ ಮಟ್ಟದಲ್ಲಿ ಸೋಂಕು ಬಾಧಿಸಿದೆ. ಅಲ್ಲದೇ ಐಸಿಎಂಆರ್​ ನಡೆಸಿದ ಈ ಅಧ್ಯಯನದಲ್ಲಿ ಎರಡು ಡೋಸ್ ಕೊರೊನಾ ಲಸಿಕೆ ತೆಗೆದುಕೊಂಡವರಲ್ಲಿ ದೊಡ್ಡ ಮಟ್ಟದ ಸಮಸ್ಯೆಗಳೇನೂ ಕಾಣಿಸಿಕೊಂಡಿಲ್ಲ ಎನ್ನುವುದು ಗಮನಾರ್ಹ.

ಒಟ್ಟು 361 ಮಾದರಿಗಳ ಪೈಕಿ ಶೇ.76ರಲ್ಲಿ ಎರಡು ಡೋಸ್ ಲಸಿಕೆ ಪಡೆದ ನಂತರವೂ ಪಾಸಿಟಿವ್ ಬಂದಿರುವುದು ಕಂಡುಬಂದಿದೆಯಾದರೂ ಆಸ್ಪತ್ರೆಗೆ ದಾಖಲಾಗುವ ಸಂದರ್ಭ ಒದಗಿಬಂದಿರುವುದು ಅತ್ಯಲ್ಪವಾದ್ದರಿಂದ ಲಸಿಕೆ ಬಗ್ಗೆ ಭರವಸೆ ಹೆಚ್ಚಿದೆ. ಅಲ್ಲದೇ, ಆಸ್ಪತ್ರೆಗೆ ಸೇರಿದ್ದ 27 ಮಂದಿ ಪೈಕಿ ಒಬ್ಬರು ಮೃತಪಟ್ಟಿದ್ದು ಮತ್ತೆಲ್ಲರೂ ಚೇತರಿಸಿಕೊಂಡಿದ್ದಾರೆ. ಒಟ್ಟಾರೆಯಾಗಿ ಈ ಅಧ್ಯಯನದಲ್ಲಿ ಕೊವಿಶೀಲ್ಡ್ ಲಸಿಕೆಯು ಶೇ.96.7ರಷ್ಟು ಪರಿಣಾಮಕಾರಿಯಾಗಿಯೂ ಕೊವ್ಯಾಕ್ಸಿನ್ ಲಸಿಕೆ ಶೇ.77.1ರಷ್ಟು ಪರಿಣಾಮಕಾರಿಯಾಗಿಯೂ ಕಂಡುಬಂದಿದೆ.

ಇದನ್ನೂ ಓದಿ: Delta Plus Variant: ಡೆಲ್ಟಾ ಪ್ಲಸ್​ ವಿರುದ್ಧ ಯಾವ ಕಂಪೆನಿಯ ಕೊರೊನಾ ಲಸಿಕೆ ಹೆಚ್ಚು ಪರಿಣಾಮಕಾರಿ? 

ಡೆಲ್ಟಾ ಪ್ಲಸ್ ವೈರಸ್ ವಿರುದ್ಧ ಕೊವಿಶೀಲ್ಡ್ ಲಸಿಕೆ ಹೆಚ್ಚು ಪರಿಣಾಮಕಾರಿಯಲ್ಲ: ಲ್ಯಾನ್ಸೆಟ್ ವರದಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ