ಮೋದಿ ಬಗ್ಗೆ ಜೆಮಿನಿ ಎಐ ವಿವಾದಾತ್ಮಕ ಪ್ರತಿಕ್ರಿಯೆ; ತಪ್ಪಾಗಿದೆ, ಸಮಸ್ಯೆ ಸರಿಪಡಿಸಿಕೊಳ್ಳುತ್ತೇವೆ ಎಂದ ಗೂಗಲ್

ಇಮೇಲ್ ಮೂಲಕ ಹೇಳಿಕೆ ನೀಡಿರುವ ಗೂಗಲ್ ವಕ್ತಾರರು ಈ ಸಮಸ್ಯೆಯನ್ನು ಪರಿಹರಿಸಲು ಅವರು ತ್ವರಿತ ಕಾರ್ಯ ನಿರ್ವಹಿಸಿದ್ದಾರೆ ಎಂದು ಹೇಳಿದ್ದಾರೆ. ಜೆಮಿನಿಯನ್ನು ಪ್ರಾಥಮಿಕವಾಗಿ ಸೃಜನಶೀಲತೆ ಮತ್ತು ಉತ್ಪಾದಕತೆಯ ಸಾಧನವಾಗಿ ವಿನ್ಯಾಸಗೊಳಿಸಲಾಗಿದೆ. ವಿಶೇಷವಾಗಿ ಪ್ರಸ್ತುತ ಘಟನೆಗಳು ಅಥವಾ ರಾಜಕೀಯ ವಿಷಯಗಳಿಗೆ ಸಂಬಂಧಿಸಿದ ವಿಷಯಗಳು ವಿಶ್ವಾಸಾರ್ಹವಾಗಿರುವುದಿಲ್ಲ ಎಂದು ಕಂಪನಿ ಹೇಳಿದೆ

ಮೋದಿ ಬಗ್ಗೆ ಜೆಮಿನಿ ಎಐ ವಿವಾದಾತ್ಮಕ ಪ್ರತಿಕ್ರಿಯೆ; ತಪ್ಪಾಗಿದೆ, ಸಮಸ್ಯೆ ಸರಿಪಡಿಸಿಕೊಳ್ಳುತ್ತೇವೆ ಎಂದ ಗೂಗಲ್
ನರೇಂದ್ರ ಮೋದಿ
Follow us
|

Updated on: Feb 24, 2024 | 5:48 PM

ದೆಹಲಿ ಫೆಬ್ರವರಿ 24: ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಬಗ್ಗೆ ಕೇಳಿದಾಗ ಗೂಗಲ್ ಎಐ (Google’s AI) ವೇದಿಕೆ ಜೆಮಿನಿ (Gemini) ವಿವಾದಾತ್ಮಕ ಪ್ರತಿಕ್ರಿಯೆ ನೀಡಿದ್ದು ಇದನ್ನು ಕೇಂದ್ರ ಸರ್ಕಾರ ತೀವ್ರವಾಗಿ ಖಂಡಿಸಿತ್ತು. ಕೇಂದ್ರ ಸರ್ಕಾರದ ಟೀಕೆಗೆ ಪ್ರತಿಕ್ರಿಯಿಸಿದ ಟೆಕ್ ದೈತ್ಯ ಗೂಗಲ್, ಸಮಸ್ಯೆಯನ್ನು ಒಪ್ಪಿಕೊಂಡಿದ್ದು, ಚಾಟ್‌ಬಾಟ್ ಯಾವಾಗಲೂ ಪ್ರಸ್ತುತ ಘಟನೆಗಳು ಮತ್ತು ರಾಜಕೀಯ ವ್ಯಕ್ತಿಗಳಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ವಿಶ್ವಾಸಾರ್ಹ ಉತ್ತರಗಳನ್ನು ನೀಡುವುದಿಲ್ಲ ಎಂದು ಹೇಳಿದೆ. AI ನ ಪ್ರತಿಕ್ರಿಯೆಯು ಐಟಿ ನಿಯಮಗಳು ಮತ್ತು ಕೆಲವು ಕ್ರಿಮಿನಲ್ ಕೋಡ್ ನಿಬಂಧನೆಗಳನ್ನು ಉಲ್ಲಂಘಿಸಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಎಕ್ಸ್‌ನಲ್ಲಿ ಪಿಎಂ ಮೋದಿ ಬಗ್ಗೆ ಕೇಳಲಾದ ಪ್ರಶ್ನೆಗೆ ಜೆಮಿನಿಯ ಪ್ರತಿಕ್ರಿಯೆಯ ಸ್ಕ್ರೀನ್‌ಶಾಟ್‌ಗಳನ್ನು ಬಳಕೆದಾರರು ಹಂಚಿಕೊಂಡ ನಂತರ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಕಳವಳ ವ್ಯಕ್ತಪಡಿಸಿದ್ದರು. ಎಐನ ಪ್ರತಿಕ್ರಿಯೆಯು ಐಟಿ ನಿಯಮಗಳು ಮತ್ತು ಕೆಲವು ಕ್ರಿಮಿನಲ್ ಕೋಡ್ ನಿಬಂಧನೆಗಳನ್ನು ಉಲ್ಲಂಘಿಸಿದೆ ಎಂದು ಚಂದ್ರಶೇಖರ್ ಹೇಳಿದ್ದು, ತಮ್ಮ ಪೋಸ್ಟ್‌ನಲ್ಲಿ ಗೂಗಲ್ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವನ್ನು ಟ್ಯಾಗ್ ಮಾಡಿದ್ದಾರೆ.

ಜೆಮಿನಿಯ ಪ್ರತಿಕ್ರಿಯೆಯು ಐಟಿ ಕಾಯಿದೆಯ ಇಂಟರ್ ಮೀಡಿಯರಿ ನಿಯಮಗಳ (ಐಟಿ ನಿಯಮಗಳು) ನಿಯಮ 3(1)(ಬಿ) ಅನ್ನು ಉಲ್ಲಂಘಿಸುತ್ತದೆ ಚಂದ್ರಶೇಖರ್ ಅವರು X ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಮೋದಿ ಪ್ರಶ್ನೆಗೆ ತಾರತಮ್ಯದ ಉತ್ತರ ನೀಡಿದ ಜೆಮಿನಿ

ಸ್ಕ್ರೀನ್‌ಶಾಟ್‌ಗಳನ್ನು ಪೋಸ್ಟ್ ಮಾಡಿದ ಬಳಕೆದಾರರ ಪ್ರಕಾರ, ಮೋದಿ ಪ್ರಶ್ನೆಗೆ ಜೆಮಿನಿ ತನ್ನ ಪ್ರತಿಕ್ರಿಯೆಯಲ್ಲಿ ಪಕ್ಷಪಾತವನ್ನು ತೋರಿಸಿದೆ. ಯುಎಸ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯ ಬಗ್ಗೆ ಇದೇ ರೀತಿಯ ಪ್ರಶ್ನೆಗಳನ್ನು ಕೇಳಿದಾಗಲೂ ಅದು ಸ್ಪಷ್ಟ ಉತ್ತರವನ್ನು ನೀಡಲು ವಿಫಲವಾಗಿದೆ.

ಇಮೇಲ್ ಮೂಲಕ ಹೇಳಿಕೆ ನೀಡಿರುವ ಗೂಗಲ್ ವಕ್ತಾರರು ಸಮಸ್ಯೆಯನ್ನು ಪರಿಹರಿಸಲು ಅವರು ತ್ವರಿತ ಕಾರ್ಯ ನಿರ್ವಹಿಸಿದ್ದಾರೆ ಎಂದು ಹೇಳಿದ್ದಾರೆ. ಜೆಮಿನಿಯನ್ನು ಪ್ರಾಥಮಿಕವಾಗಿ ಸೃಜನಶೀಲತೆ ಮತ್ತು ಉತ್ಪಾದಕತೆಯ ಸಾಧನವಾಗಿ ವಿನ್ಯಾಸಗೊಳಿಸಲಾಗಿದೆ. ವಿಶೇಷವಾಗಿ ಪ್ರಸ್ತುತ ಘಟನೆಗಳು ಅಥವಾ ರಾಜಕೀಯ ವಿಷಯಗಳಿಗೆ ಸಂಬಂಧಿಸಿದ ವಿಷಯಗಳು ವಿಶ್ವಾಸಾರ್ಹವಾಗಿರುವುದಿಲ್ಲ ಎಂದು ಕಂಪನಿ ಹೇಳಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಕುರಿತು ಎಐ ಜೆಮಿನಿ ತಾರತಮ್ಯದ ಉತ್ತರ; ಗೂಗಲ್​​ಗೆ ನೋಟಿಸ್ ನೀಡಲು ಕೇಂದ್ರ ಚಿಂತನೆ

ಈ ಸಮಸ್ಯೆಯನ್ನು ಪರಿಹರಿಸಲು ನಾವು ತ್ವರಿತವಾಗಿ ಕೆಲಸ ಮಾಡಿದ್ದೇವೆ

ಇಮೇಲ್ ಹೇಳಿಕೆಯಲ್ಲಿ, Google ವಕ್ತಾರರು ಈ ರೀಕಿ ಹೇಳಿದ್ದಾರೆ: “ಈ ಸಮಸ್ಯೆಯನ್ನು ಪರಿಹರಿಸಲು ನಾವು ತ್ವರಿತವಾಗಿ ಕೆಲಸ ಮಾಡಿದ್ದೇವೆ.” ಜೆಮಿನಿಯನ್ನು ಸೃಜನಶೀಲತೆ ಮತ್ತು ಉತ್ಪಾದಕತೆಯ ಸಾಧನವಾಗಿ ನಿರ್ಮಿಸಲಾಗಿದೆ. ಅದು ಯಾವಾಗಲೂ ವಿಶ್ವಾಸಾರ್ಹವಾಗಿರುವುದಿಲ್ಲ, ವಿಶೇಷವಾಗಿ ಪ್ರಸ್ತುತ ಘಟನೆಗಳು, ರಾಜಕೀಯ ವಿಷಯಗಳು ಅಥವಾ ಅಪ್ಡೇಟ್ ಆಗುವ ಸುದ್ದಿಗಳ ಕುರಿತು ಪ್ರತಿಕ್ರಿಯಿಸುವಾಗ ಎಲ್ಲವೂ ಸರಿಯಾಗಿರಬೇಕೆಂದೇನಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ