AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಪಾಲ್ ಖೇಮ್ಕಾ ಕೊಲೆ ಪ್ರಕರಣ: ಆರೋಪಿ ವಿಕಾಸ್ ಪೊಲೀಸ್ ಎನ್​ಕೌಂಟರ್​​ನಲ್ಲಿ ಹತ್ಯೆ

Gopal Khemka murder accused Vikas shot dead: ಉದ್ಯಮಿ ಗೋಪಾಲ್ ಖೇಮ್ಕಾ ಕೊಲೆ ಆರೋಪಿ ವಿಕಾಸ್ ಎಂಬಾತ ಕಳೆದ ರಾತ್ರಿ ಪೊಲೀಸ್ ಎನ್​ಕೌಂಟರ್​​ನಲ್ಲಿ ಹತ್ಯೆಯಾಗಿದ್ದಾನೆ. ರೇಡ್ ಮಾಡಲು ಬಂದ ಪೊಲೀಸರ ಮೇಲೆ ವಿಕಾಸ್ ಅಲಿಯಾಸ್ ರಾಜಾ ಗುಂಡು ಹಾರಿಸಿದಾಗ, ಪೊಲೀಸರು ಪ್ರತಿದಾಳಿ ನಡೆಸಿ ಆತನನ್ನು ಹತ್ಯೆ ಮಾಡಿದ್ಧಾರೆ. ಖೇಮ್ಕಾ ಹತ್ಯೆಯಲ್ಲಿ ವಿಕಾಸ್ ನೇರ ಭಾಗಿಯಾಗಿರುವ ಆರೋಪ ಇದೆ.

ಗೋಪಾಲ್ ಖೇಮ್ಕಾ ಕೊಲೆ ಪ್ರಕರಣ: ಆರೋಪಿ ವಿಕಾಸ್ ಪೊಲೀಸ್ ಎನ್​ಕೌಂಟರ್​​ನಲ್ಲಿ ಹತ್ಯೆ
ಗೋಪಾಲ್ ಖೇಮ್ಕಾ ಹತ್ಯೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jul 08, 2025 | 1:54 PM

Share

ಪಟ್ನಾ, ಜುಲೈ 8: ಬಿಹಾರದ ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ ಪ್ರಕರಣದ ಆರೋಪಿ ವಿಕಾಸ್ (Vikas) ಅಲಿಯಾಸ್ ರಾಜಾ ಎಂಬಾತ ಪೊಲೀಸ್ ಎನ್​​ಕೌಂಟರ್​​ನಲ್ಲಿ ಹತ್ಯೆಯಾಗಿದ್ದಾನೆ. ಇಂದು ಮಂಗಳವಾರ ಮುಂಜಾನೆ ವೇಳೆ (ರಾತ್ರಿ 2:45) ಈ ಘಟನೆ ನಡೆದಿರುವುದು ವರದಿಯಾಗಿದೆ. ಗೋಪಾಲ್ ಖೇಮ್ಕಾ ಹತ್ಯೆ ಪ್ರಕರಣದ (Gopal Khemka murder case) ತನಿಖೆ ನಡೆಸುತ್ತಿರುವ ಎಸ್​​ಐಟಿ ಹಾಗೂ ಎಸ್​ಟಿಎಫ್ ತಂಡಗಳ ಪೊಲೀಸರು ರೇಡ್ ನಡೆಸುವಾಗ ಈ ಎನ್​​ಕೌಂಟರ್ ಸಂಭವಿಸಿದೆ ಎನ್ನಲಾಗಿದೆ.

ರೇಡ್ ಮಾಡಲು ಬಂದ ಪೊಲೀಸರ ಮೇಲೆ ವಿಕಾಸ್ ಗುಂಡಿನ ದಾಳಿ ನಡೆಸಲು ಮುಂದಾಗಿದ್ದ. ಇದಕ್ಕೆ ಪ್ರತಿಯಾಗಿ ಪೊಲೀಸರೂ ಫೈರಿಂಗ್ ನಡೆಸಿದ್ದಾರೆ. ಈ ವೇಳೆ, ಗುಂಡೇಟು ಬಿದ್ದು ಆರೋಪಿ ವಿಕಾಸ್ ಸ್ಥಳದಲ್ಲೇ ಸತ್ತಿದ್ದಾನೆ. ಸ್ಥಳದಿಂದ ಒಂದು ಪಿಸ್ತೂಲ್, ಒಂದು ಬುಲೆಟ್ ಮತ್ತು ಕಾರ್ಟ್ರಿಡ್ಜ್ ಅನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಅಮೆರಿಕದಲ್ಲಿ ಭೀಕರ ಕಾರ್ ಅಪಘಾತ; ಭಾರತ ಮೂಲದ ಒಂದೇ ಕುಟುಂಬದ ನಾಲ್ವರ ಸಾವು

ಇದನ್ನೂ ಓದಿ
Image
ಪಾಕಿಸ್ತಾನ ಸೇನೆಯ ಏಜೆಂಟ್ ಆಗಿದ್ದೆ; ತಹವ್ವೂರ್ ರಾಣಾ ಬಿಚ್ಚಿಟ್ಟ ಸತ್ಯಗಳಿವು
Image
ಉದ್ಯಮಿ ಕೊಲೆ ಮಾಡಿ ಅಂತ್ಯಸಂಸ್ಕಾರಕ್ಕೆ ಬಂದಿದ್ದ ಹಂತಕ, ಅಲ್ಲೇ ಅರೆಸ್ಟ್​
Image
ಕುಡಿದ ಮತ್ತಿನಲ್ಲಿ ವಾಗ್ವಾದ, ಬಿಜೆಪಿ ನಾಯಕನ ಸಹೋದರನಿಗೆ ಗುಂಡಿಕ್ಕಿ ಹತ್ಯೆ
Image
ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಮೇಲೆ ಗುಂಡಿನ ದಾಳಿ

ಈ ವ್ಯಕ್ತಿ ಅಕ್ರಮ ಶಸ್ತ್ರಾಸ್ತ್ರಗಳನ್ನು ತಯಾರಿಸುವ ಮತ್ತು ಮಾರುವ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ. ಇದು ಪೊಲೀಸರು ನೀಡಿರುವ ಮಾಹಿತಿಯಾಗಿದೆ. ವಿಕಾಸ್​​ನ ಮೃತದೇಹವನ್ನು ಪೋಸ್ಟ್ ಮಾರ್ಟಮ್ ಪರೀಕ್ಷೆಗೆ ನಳಂದ ಮೆಡಿಕಲ್ ಕಾಲೇಜಿಗೆ ಕಳುಹಿಸಲಾಗಿದೆ.

ಜುಲೈ 4, ಶುಕ್ರವಾರದಂದು ಬಿಹಾರ ರಾಜಧಾನಿ ಪಟ್ನಾ ನಗರದಲ್ಲಿ ಗೋಪಾಲ್ ಖೇಮ್ಕಾ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಗಾಂಧಿ ಮೈದಾನ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ, ಅವರ ಮನೆ ಹೊರಗೆ ಆ ಘಟನೆ ನಡೆದಿತ್ತು. ಖೇಮ್ಕಾ ಅವರು ತಮ್ಮ ಮನೆಯ ಗೇಟ್ ಬಳಿ ಕಾರಿನಲ್ಲಿ ಬಂದ ಕೂಡಲೇ ಅಲ್ಲೇ ಕಾದಿದ್ದ ಹೆಲ್ಮೆಟ್​ಧಾರಿ ವ್ಯಕ್ತಿಯೊಬ್ಬ ಗುಂಡಿನ ದಾಳಿ ಮಾಡಿದ್ದ. ಬೈಕ್​​ನಲ್ಲಿ ಬಂದಿದ್ದ ಆತ ಕೂಡಲೇ ಅಲ್ಲಿಂದ ಪರಾರಿಯಾಗಿದ್ದ.

ಗೋಪಾಲ್ ಖೇಮ್ಕಾ ಬಿಜೆಪಿ ಪಕ್ಷಕ್ಕೆ ನಿಕಟವಾಗಿದ್ದರು. ಮಗಧ್ ಆಸ್ಪತ್ರೆಯ ಮಾಲೀಕರಾಗಿದ್ದ ಖೇಮ್ಕಾ, ಹಲವು ಸಾಮಾಜಿಕ ಸಂಘಟನೆಗಳೊಂದಿಗೆ ಜೋಡಿಸಿಕೊಂಡಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭಾಷಾ ಕಿಡಿ; ಎಂಎನ್​ಎಸ್​​​ನಿಂದ ಇಂದು ಮೆರವಣಿಗೆ; ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸ್

ಆರೇಳು ವರ್ಷದ ಹಿಂದೆ (2018ರ ಡಿಸೆಂಬರ್ 20) ಗೋಪಾಲ್ ಖೇಮ್ಕಾ ಅವರ ಮಗ ಗುಂಜನ್ ಖೇಮ್ಕಾ ಅವರನ್ನೂ ಹಾಜಿಪುರ್ ಇಂಡಸ್ಟ್ರಿಯಲ್ ಏರಿಯಾದಲ್ಲಿ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.

ಈ ಕೊಲೆ ಪ್ರಕರಣ ಸಂಬಂಧ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಹತ್ಯೆ ಮಾಡಲು ಶೂಟರ್​​ಗೆ ಕಾಂಟ್ರಾಕ್ಟ್ ಕೊಟ್ಟ ಆರೋಪ ಇರುವ ಒಬ್ಬ ವ್ಯಕ್ತಿಯೂ ಕಸ್ಟಡಿಯಲ್ಲಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:56 pm, Tue, 8 July 25

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
ಎ ಯು ಜ್ಯುವೆಲ್ಲರ್ಸ್‌ನಿಂದ 140 ಕೆಜಿ ಬೆಳ್ಳಿ ದೋಚಿದವರು ಅಂದರ್!
ಎ ಯು ಜ್ಯುವೆಲ್ಲರ್ಸ್‌ನಿಂದ 140 ಕೆಜಿ ಬೆಳ್ಳಿ ದೋಚಿದವರು ಅಂದರ್!
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ