ಕಿವುಡ ಮತ್ತು ಮೂಕರ ಶಾಲೆಗೆ ಭೇಟಿ ನೀಡಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿ, 'ಹಾಸ್ಟೆಲ್ ನಿರ್ಮಿಸುವ ಮೂಲಕ ಈ ಶಾಲೆಯನ್ನು ವಸತಿ ಶಾಲೆಮಾಡಬೇಕು. ಇದರಿಂದ ಆರ್ಥಿಕವಾಗಿ ದುರ್ಬಲ ಕುಟುಂಬಗಳ ವಿಕಲಚೇತನ ಮಕ್ಕಳಿಗೆ ಸಾಕಷ್ಟು ಪರಿಹಾರ ಸಿಗುತ್ತದೆ. ಅವರ ಪ್ರತಿಭೆ ಬೆಳೆಯುತ್ತದೆ, ಮಕ್ಕಳಿಗೆ ವಸತಿ ಶಾಲೆಯಲ್ಲಿ ಸುರಕ್ಷಿತ ವಾತಾವರಣವನ್ನು ನೀಡಲಾಗುವುದು. ಹಾಗೆಯೇ ಸಂಚಾರಕ್ಕಾಗಿ ಒಂದು ರಸ್ತೆ ನಿರ್ಮಿಸಬೇಕು ಎಂದು ಹೇಳಿದ್ದಾರೆ.

ಕಿವುಡ ಮತ್ತು ಮೂಕರ ಶಾಲೆಗೆ ಭೇಟಿ ನೀಡಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
Follow us
ರಶ್ಮಿ ಕಲ್ಲಕಟ್ಟ
|

Updated on: Sep 18, 2023 | 3:05 PM

ಗೋರಖ್‌ಪುರ: ಉತ್ತರ ಪ್ರದೇಶದ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ಇಂದು (ಸೋಮವಾರ) ಗೋರಖ್‌ಪುರದಲ್ಲಿ (Gorakhpur) ತಂಗಿದ್ದ ಸಂದರ್ಭದಲ್ಲಿ ಹುಮಾಯೂನ್‌ಪುರದಲ್ಲಿರುವ ಸರ್ಕಾರಿ ಕಿವುಡ ಮತ್ತು ಮೂಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳನ್ನು ಭೇಟಿಯಾಗಿದ್ದಾರೆ. ಸಿಎಂ ಯೋಗಿ ಅವರನ್ನು ಕಂಡ ಮೂಕ ಹಾಗೂ ಶ್ರವಣದೋಷವುಳ್ಳ ಮಕ್ಕಳ ಸಂತಸಕ್ಕೆ ಮಿತಿಯೇ ಇರಲಿಲ್ಲ. ಮಕ್ಕಳ ಈ ಮನದಾಳದ ಉತ್ಸಾಹ ನೋಡಿ ಸಿಎಂ ಯೋಗಿ ಕೂಡ ಭಾವುಕರಾದರು.

ಈ ವೇಳೆ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಕಿವುಡ ಮತ್ತು ಮೂಕ ಅಂಗವಿಕಲ ಮಕ್ಕಳ ನಡುವೆ ಭಾವಾನುವಾದಗಳ ವಿನಿಮಯದ ಅವಿಸ್ಮರಣೀಯ ದೃಶ್ಯ ಕಂಡುಬಂತು. ಸಿಎಂ ಅವರ ಮಾತುಗಳ ಸಂವಹನ ಈ ಮಕ್ಕಳನ್ನು ಭಾವುಕರನ್ನಾಗಿಸಿತು. ಸಿಎಂ ಪದಗಳ ಮೂಲಕವೂ ಸಂವಹನ ನಡೆಸಿದ್ದು, ಅದನ್ನು ಶಿಕ್ಷಕರು ಸಂಜ್ಞೆಗಳ ಮೂಲಕ ಮಕ್ಕಳಿಗೆ ವಿವರಿಸಿದರು.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಕ್ಕಳೇ ಆಯೋಜಿಸಿದ್ದ ವಸ್ತುಪ್ರದರ್ಶನವನ್ನು ವೀಕ್ಷಿಸಿದರು. ಮಕ್ಕಳ ಕೌಶಲ್ಯವನ್ನು ಸಿಎಂ ಯೋಗಿ ಮುಕ್ತಕಂಠದಿಂದ ಶ್ಲಾಘಿಸಿದರು. ಇದೇ ಸಂದರ್ಭದಲ್ಲಿ ಶಾಲಾ ಆವರಣ ಹಾಗೂ ತರಗತಿ ಕೊಠಡಿಗಳಿಗೆ ತೆರಳಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿ, ‘ಹಾಸ್ಟೆಲ್ ನಿರ್ಮಿಸುವ ಮೂಲಕ ಈ ಶಾಲೆಯನ್ನು ವಸತಿ ಶಾಲೆಮಾಡಬೇಕು. ಇದರಿಂದ ಆರ್ಥಿಕವಾಗಿ ದುರ್ಬಲ ಕುಟುಂಬಗಳ ವಿಕಲಚೇತನ ಮಕ್ಕಳಿಗೆ ಸಾಕಷ್ಟು ಪರಿಹಾರ ಸಿಗುತ್ತದೆ. ಅವರ ಪ್ರತಿಭೆ ಬೆಳೆಯುತ್ತದೆ, ಮಕ್ಕಳಿಗೆ ವಸತಿ ಶಾಲೆಯಲ್ಲಿ ಸುರಕ್ಷಿತ ವಾತಾವರಣವನ್ನು ನೀಡಲಾಗುವುದು. ಹಾಗೆಯೇ ಸಂಚಾರಕ್ಕಾಗಿ ಒಂದು ರಸ್ತೆ ನಿರ್ಮಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೀವು ನಿಮ್ಮ ರಾಜಕೀಯ ವಿಧಾನವನ್ನು ಬದಲಿಸಿಕೊಳ್ಳಿ: ಸಂಸತ್ ಅಧಿವೇಶನದಲ್ಲಿ ಮಲ್ಲಿಕಾರ್ಜುನ ಖರ್ಗೆ

ಈ ಹಿಂದೆ ಕಟ್ಟಡ ಶಿಥಿಲಗೊಂಡಿತ್ತು, ಇಲ್ಲಿ ಸರ್ಕಾರ ಹೊಸ ಕಟ್ಟಡ ನಿರ್ಮಿಸಿದೆ ಎಂದು ಸಿಎಂ ಯೋಗಿ ಹೇಳಿದರುಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಅಂಗವಿಕಲರಿಗೆ ಅಂಗವಿಕಲರ ಬದಲಿಗೆ ದಿವ್ಯಾಂಗ ಎಂದು ಹೆಸರಿಸುವ ಮೂಲಕ ಅವರ ಜೀವನದಲ್ಲಿ ಬದಲಾವಣೆ ತರಲು ಶ್ರಮಿಸಿದ್ದಾರೆ, ಪ್ರಧಾನಿ ಮೋದಿಯವರ ಮಾರ್ಗದರ್ಶನದಲ್ಲಿ ರಾಜ್ಯ ಸರ್ಕಾರ ದಿವ್ಯಾಂಗ ಜನರ ಅಭಿವೃದ್ಧಿಗಾಗಿ ಕೆಲಸಗಳನ್ನು ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ