AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಬಿಐ ಉಪ ಗವರ್ನರ್ ಆಗಿ ರೋಹಿತ್ ಜೈನ್ ನೇಮಕ

Rohit Jain: ಕೇಂದ್ರ ಸರ್ಕಾರ ರೋಹಿತ್ ಜೈನ್ ಅವರನ್ನು ಆರ್‌ಬಿಐ ಉಪ ಗವರ್ನರ್ ಆಗಿ ನೇಮಕ ಮಾಡಿದೆ. ರೋಹಿತ್ ಜೈನ್ ಅವರನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ನೂತನ ಉಪ ಗವರ್ನರ್ ಆಗಿ ನೇಮಿಸಲಾಗಿದೆ. ಇದು ಮೇ 3ರಿಂದ ಅಥವಾ ನಂತರ ಜಾರಿಗೆ ಬರುತ್ತದೆ. ಕ್ಯಾಬಿನೆಟ್ ನೇಮಕಾತಿ ಸಮಿತಿ (ಎಸಿಸಿ) ರೋಹಿತ್ ಜೈನ್ ಅವರನ್ನು 3 ವರ್ಷಗಳ ಕಾಲ ಡಿಜಿಯಾಗಿ ನೇಮಕ ಮಾಡಲು ಅನುಮೋದನೆ ನೀಡಿದೆ. ಟಿ. ರವಿಶಂಕರ್ ಅವರ ಅಧಿಕಾರಾವಧಿ ಇಂದು ಕೊನೆಗೊಳ್ಳುತ್ತದೆ. ಅವರ ಸ್ಥಾನವನ್ನು ರೋಹಿತ್ ಜೈನ್ ವಹಿಸಿಕೊಳ್ಳಲಿದ್ದಾರೆ.

ಆರ್​ಬಿಐ ಉಪ ಗವರ್ನರ್ ಆಗಿ ರೋಹಿತ್ ಜೈನ್ ನೇಮಕ
RBI
ಸುಷ್ಮಾ ಚಕ್ರೆ
|

Updated on: May 02, 2026 | 5:09 PM

Share

ನವದೆಹಲಿ, ಮೇ 2: ಕೇಂದ್ರ ಸರ್ಕಾರವು ರೋಹಿತ್ ಜೈನ್ ಅವರನ್ನು ಭಾರತೀಯ ರಿಸರ್ವ್ ಬ್ಯಾಂಕಿನ (RBI) ಹೊಸ ಉಪ ಗವರ್ನರ್ ಆಗಿ 3 ವರ್ಷಗಳ ಅವಧಿಗೆ ನೇಮಕ ಮಾಡಿದೆ. ಅವರ ನೇಮಕಾತಿಯನ್ನು ಕ್ಯಾಬಿನೆಟ್‌ನ ನೇಮಕಾತಿ ಸಮಿತಿಯು ಅನುಮೋದಿಸಿದೆ. ಅವರು ಮೇ 3ರಂದು ಅಥವಾ ನಂತರ ಅಧಿಕಾರ ವಹಿಸಿಕೊಳ್ಳುವ ನಿರೀಕ್ಷೆಯಿದೆ. ಆರ್​ಬಿಐ ಉಪ ಗವರ್ನರ್ ಆಗಿದ್ದ ಟಿ. ರವಿಶಂಕರ್ ಅವರ ಅಧಿಕಾರಾವಧಿ ಮುಗಿದಿದೆ. ಹೀಗಾಗಿ, ಅವರ ಸ್ಥಾನವನ್ನು ರೋಹಿತ್ ಜೈನ್ ವಹಿಸಿಕೊಳ್ಳಲಿದ್ದಾರೆ.

ರೋಹಿತ್ ಜೈನ್ ಸುಮಾರು ಮೂರು ದಶಕಗಳ ಅನುಭವವನ್ನು ಹೊಂದಿದ್ದಾರೆ. ಅವರು ರಿಸರ್ವ್ ಬ್ಯಾಂಕಿನಲ್ಲಿ ಮೇಲ್ವಿಚಾರಣೆ, ಮಾನವ ಸಂಪನ್ಮೂಲ ನಿರ್ವಹಣೆ, ಬ್ಯಾಂಕಿಂಗ್ ಮತ್ತು ಇತರ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಇದಕ್ಕೂ ಮೊದಲು ರೋಹಿತ್ ಜೈನ್ ಅವರನ್ನು ಡಿಸೆಂಬರ್ 2020ರಲ್ಲಿ ಆರ್‌ಬಿಐನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಿಸಲಾಯಿತು. ರೋಹಿತ್ ಜೈನ್ ವಾಣಿಜ್ಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ವ್ಯವಹಾರ ಆಡಳಿತದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿದ್ದಾರೆ.

ಇದನ್ನೂ ಓದಿ: ಆರ್​ಬಿಐನಿಂದ ಹೊಸ ಇ-ಮ್ಯಾಂಡೇಟ್ ಫ್ರೇಮ್​ವರ್ಕ್; 15,000 ರೂವರೆಗಿನ ರಿಕರಿಂಗ್ ಪೇಮೆಂಟ್ಸ್​ಗೆ ಒಟಿಪಿ ಬೇಕಿಲ್ಲ

ಆರ್‌ಬಿಐ ಒಬ್ಬ ಗವರ್ನರ್ ಮತ್ತು ನಾಲ್ಕು ಉಪ ಗವರ್ನರ್‌ಗಳನ್ನು ಹೊಂದಿದೆ. ಇಬ್ಬರು ಉಪ ಗವರ್ನರ್‌ಗಳನ್ನು ಬಡ್ತಿ ಮೂಲಕ ನೇಮಿಸಲಾಗುತ್ತದೆ. ಇತರ ಇಬ್ಬರು ಉಪ ಗವರ್ನರ್‌ಗಳು ಹೊರಗಿನವರಾಗಿರುತ್ತಾರೆ. ಅವರ ಹೆಸರು ಪೂನಂ ಗುಪ್ತಾ ಮತ್ತು ಸ್ವಾಮಿನಾಥನ್ ಜೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು