ವಾಟ್ಸ್​ಆ್ಯಪ್​ ಗೌಪ್ಯತಾ ನೀತಿ ಬದಲಾವಣೆ ಕುರಿತು ವಿವರಣೆ ಕೇಳಿದ ಕೇಂದ್ರ ಸರ್ಕಾರ

ವಾಟ್ಸ್​ಆ್ಯಪ್​ ಸಂಸ್ಥೆಯ ಹೊಸ ನೀತಿಯನ್ನು ಸರ್ಕಾರ ಗಮನಿಸುತ್ತಿದೆ. ಈ ಬಗ್ಗೆ ನಾವು ವಾಟ್ಸ್​ಆ್ಯಪ್​ನಿಂದ ವಿವರಣೆಯನ್ನು ತರಿಸಿಕೊಂಡಿದ್ದು, ಸೂಕ್ತ ತನಿಖೆ ನಡೆಸಲಿದ್ದೇವೆ ಎಂದು ಸರ್ಕಾರದ ಉನ್ನತ ಮೂಲಗಳು ಮಾಹಿತಿ ನೀಡಿವೆ.

ವಾಟ್ಸ್​ಆ್ಯಪ್​ ಗೌಪ್ಯತಾ ನೀತಿ ಬದಲಾವಣೆ ಕುರಿತು ವಿವರಣೆ ಕೇಳಿದ ಕೇಂದ್ರ ಸರ್ಕಾರ
ವಾಟ್ಸ್​ಆ್ಯಪ್​
Follow us
Skanda
| Updated By: ರಶ್ಮಿ ಕಲ್ಲಕಟ್ಟ

Updated on: Jan 14, 2021 | 5:52 PM

ದೆಹಲಿ: ವಾಟ್ಸ್​ಆ್ಯಪ್​ ಸಂಸ್ಥೆ ತನ್ನ ಗೌಪ್ಯತಾ ನೀತಿಗಳನ್ನು ಬದಲಾಯಿಸಲು ಹೊರಟಿರುವುದು ವಿವಾದವನ್ನು ಸೃಷ್ಟಿಸಿದೆ. ಫೆಬ್ರವರಿ 8ರ ಒಳಗೆ ತನ್ನ ಹೊಸ ನೀತಿಯನ್ನು ಒಪ್ಪಿಕೊಳ್ಳದೇ ಇದ್ದರೆ ವಾಟ್ಸ್​ಆ್ಯಪ್​ ಬಳಸುವುದು ಸಾಧ್ಯವಾಗುವುದಿಲ್ಲ ಎನ್ನುವ ಸಂಸ್ಥೆಯ ನಿಲುವಿನ ವಿರುದ್ಧ ಅನೇಕರು ತಿರುಗಿ ಬಿದ್ದಿದ್ದಾರೆ. ಇದೀಗ ಈ ಕುರಿತು ಪರಿಶೀಲನೆ ನಡೆಸಲು ಸರ್ಕಾರವೇ ಮುಂದಾಗಿದೆ.

ವಾಟ್ಸ್​ಆ್ಯಪ್​ ಸಿದ್ಧಪಡಿಸಿರುವ ಹೊಸ ಗೌಪ್ಯತಾ ನೀತಿಯ ಮೂಲಕ ಬಳಕೆದಾರರ ಮಾಹಿತಿಯನ್ನು ವಾಣಿಜ್ಯ ಉದ್ದೇಶಗಳಿಗಾಗಿ ತನ್ನ ಸಹಸಂಸ್ಥೆ ಫೇಸ್​ಬುಕ್​, ಮೆಸೆಂಜರ್​ ಮುಂತಾದವುಗಳೊಂದಿಗೆ ಹಂಚಿಕೊಳ್ಳಬಹುದಾಗಿದೆ. ಇದು ಬಳಕೆದಾರರ ಖಾಸಗಿತನಕ್ಕೆ ಧಕ್ಕೆ ಉಂಟುಮಾಡಬಹುದು ಎಂಬ ಆತಂಕ ಸೃಷ್ಟಿಯಾಗಿರುವುದರಿಂದ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಈ ಬಗ್ಗೆ ನಾವು ವಾಟ್ಸ್​ಆ್ಯಪ್​ನಿಂದ ವಿವರಣೆಯನ್ನು ತರಿಸಿಕೊಂಡಿದ್ದು, ಸೂಕ್ತ ತನಿಖೆ ನಡೆಸಲಿದ್ದೇವೆ ಎಂದು ಸರ್ಕಾರದ ಉನ್ನತ ಮೂಲಗಳು ಮಾಹಿತಿ ನೀಡಿವೆ.

ವಾಟ್ಸ್​ಆ್ಯಪ್​ ಸಂಸ್ಥೆಯ ಹೊಸ ನೀತಿಯನ್ನು ಸರ್ಕಾರ ಗಮನಿಸುತ್ತಿದೆ. ಭಾರತದಲ್ಲಿ ದತ್ತಾಂಶ ರಕ್ಷಣೆಗಾಗಿ ಇನ್ನೂ ಕಾನೂನು ಜಾರಿಯಾಗಿಲ್ಲ. ಆದರೆ, ಅದರ ಕುರಿತಾದ ಮಸೂದೆ ಲೋಕಸಭೆಯಲ್ಲಿದೆ. ತುರ್ತಾಗಿ ಕಾನೂನು ಜಾರಿಗೊಳಿಸುವುದು ಸಾಧ್ಯವಿಲ್ಲವೆಂದರೂ ವಾಟ್ಸ್​ಆ್ಯಪ್​ ಸಂಸ್ಥೆಯ ಉದ್ದೇಶಗಳನ್ನು ವಿವಿಧ ಆಯಾಮಗಳ ಮೂಲಕ ತನಿಖೆ ಮಾಡಲಿದ್ದೇವೆ ಎಂದು ಮೂಲಗಳು ಹೇಳಿವೆ.

ಈ ಹಿಂದೆಯೂ ಕೇಮ್​ಬ್ರಿಡ್ಜ್​ ಅನಾಲಿಟಿಕಲ್​ ಡೇಟಾ ಸೋರಿಕೆ ಸೇರಿದಂತೆ ಕೆಲ ವಿಚಾರವಾಗಿ ಸರ್ಕಾರ ವಾಟ್ಸ್​ಆ್ಯಪ್​ ಮತ್ತು ಫೇಸ್​ಬುಕ್​ ಸಂಸ್ಥೆಗಳನ್ನು ತನಿಖೆ ಮಾಡಿತ್ತು. ಫೇಕ್​ ಮೆಸೇಜ್​ಗಳಿಂದಾದ ದುರಂತದ ಬಗ್ಗೆಯೂ ವಿಚಾರಣೆ ನಡೆಸಿತ್ತು. ಆದರೆ, ಆ ಸಂದರ್ಭದಲ್ಲಿ ಬಳಕೆದಾರರ ದತ್ತಾಂಶಗಳನ್ನು ನೀಡುವುದು ಸಾಧ್ಯವಿಲ್ಲ ಎಂದು ಹೇಳಿದ್ದ ಮೆಸೆಂಜರ್​ ಸರ್ಕಾರ ಕೇಳಿದ ಮಾಹಿತಿಗಳನ್ನು ಕೊಡಲು ನಿರಾಕರಿಸಿತ್ತು.

ಏನಿದು ವಾಟ್ಸಾಪ್​ ಹೊಸ ಪಾಲಿಸಿ? ನಿಮ್ಮ ಖಾಸಗಿ ಮಾಹಿತಿ ಸೋರಿಕೆ ಆಗೋದು ಇನ್ನೂ ಸುಲಭ!

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ