ಭಾರತದ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದ 20 ಯೂಟ್ಯೂಬ್ ಚಾನೆಲ್, 2 ವೆಬ್​ಸೈಟ್​ಗೆ ನಿಷೇಧ

ನಿಷೇಧಗೊಂಡ ಚಾನೆಲ್ ಗಳ ಪೈಕಿ 15 ಚಾನೆಲ್ ಗಳು ನಯಾ ಪಾಕಿಸ್ತಾನ್ ಗ್ರೂಪ್​ನ ಒಡೆತನದಲ್ಲಿವೆ. ಉಳಿದವು ನೇಕೆಡ್ ಟ್ರುತ್, 48 ನ್ಯೂಸ್ ಮತ್ತು ಜುನೈದ್ ಹಲಿಮ್ ಅಫೀಶಿಯಲ್ ಮೊದಲಾದ ಚಾನೆಲ್​ಗಳಾಗಿವೆ.

ಭಾರತದ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದ 20 ಯೂಟ್ಯೂಬ್ ಚಾನೆಲ್, 2 ವೆಬ್​ಸೈಟ್​ಗೆ ನಿಷೇಧ
ಯೂಟ್ಯೂಬ್ ಚಾನೆಲ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Dec 21, 2021 | 5:20 PM

ನವದೆಹಲಿ: ಭಾರತದ ವಿರುದ್ಧ ಪ್ರಚಾರದಲ್ಲಿ ತೊಡಗಿದ್ದ 20 ಯೂಟ್ಯೂಬ್ ಚಾನೆಲ್​ಗಳು ಮತ್ತು ಎರಡು ವೆಬ್ ಸೈಟ್​ಗಳಿಗೆ ಕೇಂದ್ರ ಸರ್ಕಾರ ನಿಷೇಧ ಹೇರಿದೆ. ಗುಪ್ತಚರ ಇಲಾಖೆ ಮತ್ತು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಗೆ ಸಿಕ್ಕಿದ ಮಾಹಿತಿ ಮೇರೆಗೆ ಈ ಆದೇಶ ಹೊರಡಿಸಲಾಗಿದೆ. ನಿಷೇಧಕ್ಕೊಳಗಾಗಿರುವ ಬಹುತೇಕ ಈ ವೆಬ್​ಸೈಟ್ ಮತ್ತು ಯೂಟ್ಯೂಬ್ ಚಾನೆಲ್​ಗಳು ಪಾಕಿಸ್ತಾನದಿಂದ ಕಾರ್ಯ ನಿರ್ವಹಿಸುತ್ತಿದ್ದವು ಅಥವಾ ಪಾಕಿಸ್ತಾನದಿಂದ ನಿಯಂತ್ರಿಸಲ್ಪಡುತ್ತಿದ್ದವು ಎಂಬ ಮಾಹಿತಿ ಲಭ್ಯವಾಗಿದೆ.

ನಿಷೇಧಗೊಂಡ ಚಾನೆಲ್ ಗಳ ಪೈಕಿ 15 ಚಾನೆಲ್ ಗಳು ನಯಾ ಪಾಕಿಸ್ತಾನ್ ಗ್ರೂಪ್​ನ ಒಡೆತನದಲ್ಲಿವೆ. ಉಳಿದವು ನೇಕೆಡ್ ಟ್ರುತ್, 48 ನ್ಯೂಸ್ ಮತ್ತು ಜುನೈದ್ ಹಲಿಮ್ ಅಫೀಶಿಯಲ್ ಮೊದಲಾದ ಚಾನೆಲ್​ಗಳಾಗಿವೆ. ಈ ಯೂಟ್ಯೂಬ್ ಚಾನೆಲ್ ಗಳ ಒಟ್ಟು ಚಂದಾದಾರರು ಸುಮಾರು 35 ಲಕ್ಷ ಜನರಿದ್ದು, ಭಾರತಕ್ಕೆ ಸಂಬಂಧಿಸಿದಂತೆ ಬಹಳ ಸೂಕ್ಷ್ಮ ವಿಷಯಗಳ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದವು. ಈ ವಿಡಿಯೋಗಳನ್ನು 500 ಮಿಲಿಯನ್ ಗಿಂತಲೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಈ ಯೂಟ್ಯೂಬ್ ಚಾನೆಲ್​ಗಳು ಭಾರತದ ಕಾಶ್ಮೀರ, ಭಾರತೀಯ ಸೇನೆ, ರಾಮ ಮಂದಿರ, ಜನರಲ್ ಬಿಪಿನ್ ರಾವತ್ ಮುಂತಾದ ವಿಷಯಗಳ ಬಗ್ಗೆ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿದ್ದವು.

ಮಾಹಿತಿ ಮತ್ತು ಪ್ರಸಾರ ಖಾತೆ ಕಾರ್ಯದರ್ಶಿ ಅಪೂರ್ವ ಚಂದ್ರ ಯೂಟ್ಯೂಬ್ ಸಂಸ್ಥೆ ಮತ್ತು ಟೆಲಿಕಾಂ ಇಲಾಖೆಗಳಿಗೆ ಪತ್ರ ಬರೆದು, ಈ ಯೂಟ್ಯೂಬ್ ಚಾನೆಲ್ ಗಳ ವಿಷಯಗಳು ಭಾರತ ದೇಶದ ಸಾರ್ವಭೌಮತ್ವ ಮತ್ತು ಸಮಗ್ರತೆಗೆ ಧಕ್ಕೆಯುನ್ನುಂಟುಮಾಡುವುದರಿಂದ ತಕ್ಷಣವೇ ಪ್ರಸಾರ ತಡೆಹಿಡಿಯಬೇಕು ಎಂದು ಒತ್ತಾಯಿಸಿದ್ದರು. ಈ ಚಾನೆಲ್ ಗಳು ಪಾಕಿಸ್ತಾನದ ಐಎಸ್​ಐ ನೆರವಿನ ಮೂಲಕ ಪ್ರಸಾರವಾಗುತ್ತಿವೆ. ಭಾರತ ವಿರೋಧಿ ಪ್ರಚಾರ ವೆಬ್‌ಸೈಟ್‌ಗಳನ್ನು ನಿಷೇಧಿಸಲು ಐಟಿ ನಿಯಮಗಳು, 2021ರ ಅಡಿಯಲ್ಲಿ ತುರ್ತು ಅಧಿಕಾರವನ್ನು ಬಳಸಿರುವುದು ಇದೇ ಮೊದಲ ಬಾರಿ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಯೂಟ್ಯೂಬ್​ ಚಾನೆಲ್​ಗಳಲ್ಲಿ 35 ಲಕ್ಷಕ್ಕೂ ಹೆಚ್ಚು ಜನರು ಚಂದಾರಾರರಿದ್ದಾರೆ. ಅವರ ವೀಡಿಯೊಗಳು 55 ಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಹೊಂದಿವೆ. ನಯಾ ಪಾಕಿಸ್ತಾನ್ ಗ್ರೂಪ್ (NPG) ನ ಕೆಲವು ಯೂಟ್ಯೂಬ್ ಚಾನೆಲ್‌ಗಳಲ್ಲಿ ಪಾಕಿಸ್ತಾನಿ ಸುದ್ದಿ ಚಾನೆಲ್‌ಗಳ ಆ್ಯಂಕರ್‌ಗಳು ನಿರ್ವಹಿಸುತ್ತಿದ್ದಾರೆ.

ಈ ಯೂಟ್ಯೂಬ್ ಚಾನೆಲ್‌ಗಳು ರೈತರ ಪ್ರತಿಭಟನೆ, ಪೌರತ್ವ (ತಿದ್ದುಪಡಿ) ಕಾಯ್ದೆಗೆ ಸಂಬಂಧಿಸಿದ ಪ್ರತಿಭಟನೆಗಳಂತಹ ವಿಷಯಗಳ ಕುರಿತು ವಿಷಯವನ್ನು ಪೋಸ್ಟ್ ಮಾಡಿ ಮತ್ತು ಭಾರತ ಸರ್ಕಾರದ ವಿರುದ್ಧ ಅಲ್ಪಸಂಖ್ಯಾತರನ್ನು ಪ್ರಚೋದಿಸಲು ಪ್ರಯತ್ನಿಸಿವೆ. ಐದು ರಾಜ್ಯಗಳಲ್ಲಿ ಮುಂಬರುವ ಚುನಾವಣೆಗಳ ಪ್ರಜಾಸತ್ತಾತ್ಮಕ ಪ್ರಕ್ರಿಯೆಯನ್ನು ದುರ್ಬಲಗೊಳಿಸಲು ವಿಷಯವನ್ನು ಪೋಸ್ಟ್ ಮಾಡಲು ಈ ಯೂಟ್ಯೂಬ್ ಚಾನೆಲ್‌ಗಳನ್ನು ಬಳಸಲಾಗುತ್ತದೆ ಎಂಬ ಭಯವೂ ಇತ್ತು.

ಇದನ್ನೂ ಓದಿ: Karnataka Anti Conversion Bill 2021: ಮತಾಂತರ ನಿಷೇಧ ಮಸೂದೆಗೆ ಸಂಪುಟ ಒಪ್ಪಿಗೆ; ನಾಳೆ ಸದನದಲ್ಲಿ ವಿಧೇಯಕ ಮಂಡನೆ

New Year 2022 Guidelines: ಹೊಸ ವರ್ಷಾಚರಣೆ, ಕ್ರಿಸ್​ಮಸ್​ ಆಚರಣೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

Published On - 4:47 pm, Tue, 21 December 21

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ