ಮತದಾರರ ಪಟ್ಟಿ ಜತೆ ಆಧಾರ್ ಜೋಡಣೆಗೆ ಸರ್ಕಾರ ಚಿಂತನೆ: ಕೇಂದ್ರ ಸಚಿವ ರವಿಶಂಕರ್ ಪ್ರಸಾದ್

Aadhaar Card Linking: ಮತದಾರರ  ಗುರುತಿನ ಚೀಟಿಯನ್ನು ಆಧಾರ್‌ ಜೊತೆ  ಜೋಡಣೆ ಮಾಡುವ ಚುನಾವಣಾ ಆಯೋಗದ ಪ್ರಸ್ತಾವನೆ ಈಗ ಯಾವ ಹಂತದಲ್ಲಿದೆ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ರವಿಶಂಕರ್ ಪ್ರಸಾದ್, ಮತದಾರರ ಪಟ್ಟಿಯ ದತ್ತಾಂಶ ಸುರಕ್ಷತೆ ಮತ್ತು ಭದ್ರತೆಗೆ ಚುನಾವಣಾ ಆಯೋಗ ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದಿದ್ದಾರೆ.

ಮತದಾರರ ಪಟ್ಟಿ ಜತೆ ಆಧಾರ್ ಜೋಡಣೆಗೆ ಸರ್ಕಾರ ಚಿಂತನೆ: ಕೇಂದ್ರ ಸಚಿವ ರವಿಶಂಕರ್ ಪ್ರಸಾದ್
ಕೇಂದ್ರ ಸಚಿವ ರವಿಶಂಕರ್ ಪ್ರಸಾದ್
Follow us
ರಶ್ಮಿ ಕಲ್ಲಕಟ್ಟ
|

Updated on:Mar 18, 2021 | 1:17 PM

ನವದೆಹಲಿ: ಮತದಾರರ ಪಟ್ಟಿಯಲ್ಲಿರುವ ಒಬ್ಬ ವ್ಯಕ್ತಿ ಬೇರೆ ಬೇರೆ ಕಡೆ ಮತದಾರರ ಪಟ್ಟಿಯಲ್ಲಿ ಹೆಸರು  ಹೊಂದುವ ಮೂಲಕ ಚುನಾವಣಾ ಅಕ್ರಮಗಳಿಗೆ ಕಡಿವಾಣ ಹಾಕಲು ಮತದಾರರ ಪಟ್ಟಿಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ  ಪ್ರಸ್ತಾವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಲಿಖಿತರೂಪದಲ್ಲಿ ಪ್ರಶ್ನೆಯೊಂದಕ್ಕೆ ಸಚಿವರು ಈ ಉತ್ತರ ನೀಡಿದ್ದಾರೆ. ಮತದಾರರ ಪಟ್ಟಿಯಲ್ಲಿರುವ ಮಾಹಿತಿಗಳು ಆಧಾರ್ ವ್ಯವಸ್ಥೆಯಡಿಯಲ್ಲಿ ಬರುವುದಿಲ್ಲ. ದೃಢೀಕರಣ ಉದ್ದೇಶಕ್ಕಾಗಿ ಈ ಎರಡೂ ವ್ಯವಸ್ಥೆಗಳ ನಡುವೆ ಅಂತರವಿರಿಸಲಾಗಿದೆ. ಮತದಾನ ವ್ಯವಸ್ಥೆಯಲ್ಲಿ ಮತದಾರರ ಹೆಸರು ಪುನರಾವರ್ತನೆಯಾಗುವುದನ್ನು ತಡೆಯಲು ಆಧಾರ್ ಜೋಡಣೆ ಬಳಸಲಾಗುವುದು. ಅದಕ್ಕಾಗಿ ಪ್ರಸ್ತುತ ಕಾನೂನಿನಲ್ಲಿ ತಿದ್ದುಪಡಿ ತರಬೇಕು ಮತ್ತು ಸರ್ಕಾರದ ಅಂಗೀಕಾರವೂ ಸಿಗಬೇಕು ಎಂದು ಸಚಿವರು ಹೇಳಿದ್ದಾರೆ. ಆಧಾರ್ ಮತ್ತು ಮತದಾರರ ಚೀಟಿ ಜತೆ ಜೋಡಣೆಯಾಗಿರುವ ಮಾಹಿತಿಯನ್ನು ಸರ್ಕಾರ ಹೇಗೆ ಸಂರಕ್ಷಿಸಲಿದೆ ಎಂಬ ಪ್ರಶ್ನೆಗೆ ರವಿಶಂಕರ್ ಈ ರೀತಿ ಲಿಖಿತರೂಪದಲ್ಲಿ ಉತ್ತರ ನೀಡಿದ್ದಾರೆ.  ಅದೇ ವೇಳೆ ಮತದಾರರ  ಗುರುತಿನ ಚೀಟಿಯನ್ನು ಆಧಾರ್‌ ಜೊತೆ   ಜೋಡಣೆ ಮಾಡುವ ಚುನಾವಣಾ ಆಯೋಗದ ಪ್ರಸ್ತಾವನೆ ಈಗ ಯಾವ ಹಂತದಲ್ಲಿದೆ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಮತದಾರರ ಪಟ್ಟಿಯ ದತ್ತಾಂಶ ಸುರಕ್ಷತೆ ಮತ್ತು ಭದ್ರತೆಗೆ ಚುನಾವಣಾ ಆಯೋಗ ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದಿದ್ದಾರೆ.

ಮತದಾರರ ಗುರುತಿನ ಚೀಟಿಯನ್ನು ಆಧಾರ್ ಕಾರ್ಡ್ ಜತೆ ಜೋಡಣೆ ಮಾಡಲು ಚುನಾವಣಾ ಆಯೋಗ ಕಾನೂನು ಸಚಿವಾಲಯಕ್ಕೆ ಕಳೆದ ವರ್ಷ ಮನವಿ ಮಾಡಿತ್ತು. ಇದಕ್ಕೆ ಸಚಿವಾಲಯ ಧನಾತ್ಮಕವಾಗಿ ಪ್ರತಿಕ್ರಿಯೆಸಿದೆ ಎಂದು ಇಂಡಿಯನ್ ಎಕ್ಸ್​​ಪ್ರೆಸ್ ವರದಿ ಮಾಡಿತ್ತು. ಮತದಾರರ ಗುರುತಿನ ಚೀಟಿ ಜತೆ ಆಧಾರ್ ಜೋಡಣೆಗಿರುವ ಕಾನೂನು ಅಧಿಕಾರವನ್ನು ನೀಡಬೇಕು ಎಂದು ಚುನಾವಣಾ ಆಯೋಗ ಮನವಿ ಮಾಡಿದ್ದು, ಮಾಹಿತಿಯ ಸುರಕ್ಷತೆಯನ್ನು ಕಾಪಾಡಬೇಕು ಎಂದು ಸಚಿವಾಲಯ ಪ್ರತಿಕ್ರಿಯಿಸಿತ್ತು.

2015ರಲ್ಲಿ ಆಧಾರ್ ಚೌಕಟ್ಟನ್ನು ಪ್ರಶ್ನಿಸಿ ಸಲ್ಲಿಸಿದ್ದ ಮನವಿಯ ವಿಚಾರಣೆ ನಡೆಸಿ ಮಧ್ಯಂತರ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್, ರಾಜ್ಯ ಪ್ರಾಯೋಜಿತ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಲು ಮಾತ್ರ ಆಧಾರ್ ಕಾರ್ಡ್ ಮಾಹಿತಿ ಬಳಸಬಹುದು ಎಂದು ಹೇಳಿತ್ತು. 2018ರಲ್ಲಿ ಸುಪ್ರೀಂ ಕೋರ್ಟ್ ಖಾಸಗಿತನದ ಹಕ್ಕು ಮೂಲಭೂತವಾದ ಹಕ್ಕು ಎಂದು ಹೇಳಿದ್ದು, ಆಧಾರ್ ವ್ಯವಸ್ಥೆಯನ್ನು ನಿರ್ವಹಿಸಲು ನಿರ್ದಿಷ್ಟ ಕಾನೂನನ್ನು ಸರ್ಕಾರ ತರಬೇಕು ಎಂದು ಹೇಳಿತ್ತು. ಮತದಾರರ ಗುರುತಿನ ಚೀಟಿ ಜತೆ ಆಧಾರ್ ಜೋಡಣೆ ಮಾಡಿದರೆ ವ್ಯಕ್ತಿಗಳ ಖಾಸಗಿತ ನವನ್ನು ಸಂರಕ್ಷಿಸಬೇಕು ಎಂಬುದನ್ನು ಈ ತೀರ್ಪು ಹೇಳಿತ್ತು.

ಆಧಾರ್ ಜೋಡಣೆ ಮಾಡದ 3 ಕೋಟಿ ಪಡಿತರ ಚೀಟಿ ರದ್ದು ಮಾಡಿದ ಕೇಂದ್ರ ಸರ್ಕಾರ ಆಧಾರ್ ಜೋಡಣೆ ಮಾಡದ 3 ಕೋಟಿ ಪಡಿತರ ಚೀಟಿಗಳನ್ನು ರದ್ದು ಮಾಡಿದ ಕೇಂದ್ರ ಸರ್ಕಾರದ ನಡೆಯನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಬುಧವಾರ ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಪೀಠ ಇದು ಗಂಭೀರ ವಿಚಾರ. ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತಿಕ್ರಿಯೆ ನೀಡಬೇಕು ಎಂದು ಹೇಳಿದೆ. ಕೇಂದ್ರ ನಡೆಗೆ ವಿರೋಧ ವ್ಯಕ್ತಪಡಿಸಿದ ಮುಖ್ಯನ್ಯಾಯಮೂರ್ತಿ ಎಸ್.ಎ. ಬೊಬ್ಡೆ, ಎ.ಎಸ್. ಬೋಪಣ್ಣ ಮತ್ತು ರಾಮಸುಬ್ರಮಣಿಯನ್ ಅವರ ನ್ಯಾಯಪೀಠ ಇದು ಗಂಭೀರ ವಿಷಯವಾಗಿದೆ ಎಂದು ಹೇಳಿದ್ದಾರೆ. ಪ್ರಸ್ತುತ ವಿಷಯದ ಬಗ್ಗೆ ತೀರ್ಪು ಕಾದಿರಿಸಲಾಗಿದೆ.

ಇದನ್ನೂ ಓದಿ:  Aadhaar Address Update: ದಾಖಲೆ ಇಲ್ಲದೆ ಆಧಾರ್​ನಲ್ಲಿ ವಿಳಾಸ ಬದಲಾವಣೆಗೆ ಈ 8 ಹಂತ ಅನುಸರಿಸಿ

Published On - 1:06 pm, Thu, 18 March 21

ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು