AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಮೂರ್ತಿ ಯಶವಂತ್ ವರ್ಮಾ ಮಹಾಭಿಯೋಗಕ್ಕೆ ಸರ್ವಪಕ್ಷಗಳ ಸಹಕಾರ ಕೋರಿದ ಕೇಂದ್ರ

ನವದೆಹಲಿಯಲ್ಲಿರುವ ಅಧಿಕೃತ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾದ ಬಳಿಕ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧ ಮಹಾಭಿಯೋಗ ಪ್ರಕ್ರಿಯೆ ನಡೆಸಲು ಕೇಂದ್ರ ಸರ್ಕಾರವು ಎಲ್ಲಾ ಪಕ್ಷಗಳ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದೆ. ಏಪ್ರಿಲ್ 8 ರ ರಾತ್ರಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಅಧಿಕೃತ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಗಣನೀಯ ಪ್ರಮಾಣದ ನಗದು ವಶಪಡಿಸಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪಗಳ ನಂತರ ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಆಯ್ಕೆಯನ್ನು ಸುಪ್ರೀಂ ಕೋರ್ಟ್ ನೀಡಿದೆ.

ನ್ಯಾಯಮೂರ್ತಿ ಯಶವಂತ್ ವರ್ಮಾ ಮಹಾಭಿಯೋಗಕ್ಕೆ ಸರ್ವಪಕ್ಷಗಳ ಸಹಕಾರ ಕೋರಿದ ಕೇಂದ್ರ
ಯಶವಂತ್ ವರ್ಮಾ
ನಯನಾ ರಾಜೀವ್
|

Updated on: Jul 03, 2025 | 12:46 PM

Share

ನವದೆಹಲಿ, ಜುಲೈ 03: ನವದೆಹಲಿಯಲ್ಲಿರುವ ಅಧಿಕೃತ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾದ ಬಳಿಕ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧ ಮಹಾಭಿಯೋಗ ಪ್ರಕ್ರಿಯೆ ನಡೆಸಲು ಕೇಂದ್ರ ಸರ್ಕಾರವು ಎಲ್ಲಾ ಪಕ್ಷಗಳ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದೆ. ಏಪ್ರಿಲ್ 8 ರ ರಾತ್ರಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಅಧಿಕೃತ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಗಣನೀಯ ಪ್ರಮಾಣದ ನಗದು ವಶಪಡಿಸಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪಗಳ ನಂತರ ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಆಯ್ಕೆಯನ್ನು ಸುಪ್ರೀಂ ಕೋರ್ಟ್ ನೀಡಿದೆ.

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಸಭೆ ನಡೆಸಿದ್ದು, ಈ ಬೆಳವಣಿಗೆ ನ್ಯಾಯಮೂರ್ತಿ ವರ್ಮಾ ವಿರುದ್ಧದ ವಿಚಾರಣೆಯ ಸಂಭಾವ್ಯತೆಯ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿದೆ.

ನ್ಯಾಯಮೂರ್ತಿಗಳ ಪದಚ್ಯುತಿಗೆ ಕೋರಿ ಔಪಚಾರಿಕ ನಿರ್ಣಯ ಮಂಡಿಸಲು ಅಗತ್ಯವಾದ ಬೆಂಬಲವನ್ನು ಪಡೆಯುವ ಪ್ರಯತ್ನದಲ್ಲಿ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯ ಎಲ್ಲಾ ಪ್ರಮುಖ ಪಕ್ಷಗಳನ್ನು ಸಂಪರ್ಕಿಸಿದೆ. ನಗದು ವಸೂಲಿ ಘಟನೆಯ ಬಗ್ಗೆ ಇನ್ನೂ ಎಫ್‌ಐಆರ್ ದಾಖಲಾಗಿಲ್ಲ, ಇದು ಸಂಸತ್ತಿನಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗದೆ. ನ್ಯಾಯಮೂರ್ತಿ ವರ್ಮಾ ವಿರುದ್ಧ ಕ್ರಮ ಕೈಗೊಳ್ಳದಿರುವ ಬಗ್ಗೆ ಹಲವಾರು ಸಂಸದರು ಗಂಭೀರ ಕಳವಳ ವ್ಯಕ್ತಪಡಿಸಿದರು.

ಮತ್ತಷ್ಟು ಓದಿ: ಮನೆಯಲ್ಲಿ ಅಕ್ರಮ ಹಣ ಪತ್ತೆ; ನ್ಯಾಯಮೂರ್ತಿ ಯಶವಂತ್ ವರ್ಮಾ ಪ್ರಕರಣದ ತನಿಖೆಗೆ ಸಿಜೆಐ ಸಂಜೀವ್ ಖನ್ನಾ ಆದೇಶ

ಸುಪ್ರೀಂ ಕೋರ್ಟ್ ಆಂತರಿಕವಾಗಿ ರಚಿಸಲಾದ ಸತ್ಯಶೋಧನಾ ಸಮಿತಿಯು ನ್ಯಾಯಮೂರ್ತಿ ವರ್ಮಾ ಅವರ ಪದಚ್ಯುತಿಯನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಶಿಫಾರಸು ಮಾಡಿದೆ ಎಂದು ವರದಿಯಾಗಿದೆ. ಘಟನೆಯ ಸಮಯದಲ್ಲಿ ದೆಹಲಿ ಹೈಕೋರ್ಟ್‌ಗೆ ಡೆಪ್ಯುಟೇಶನ್‌ನಲ್ಲಿದ್ದ ನ್ಯಾಯಮೂರ್ತಿ ವರ್ಮಾ ಅವರನ್ನು ನಂತರ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು. ಅವರು ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ ಮತ್ತು ವಶಪಡಿಸಿಕೊಂಡ ನಗದು ತಮ್ಮದಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಘಟನೆಯ ಸಮಯದಲ್ಲಿ ದೆಹಲಿ ಹೈಕೋರ್ಟ್‌ಗೆ ಡೆಪ್ಯುಟೇಶನ್‌ನಲ್ಲಿದ್ದ ನ್ಯಾಯಮೂರ್ತಿ ವರ್ಮಾ ಅವರನ್ನು ನಂತರ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು. ಅವರು ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ ಮತ್ತು ವಶಪಡಿಸಿಕೊಂಡ ನಗದು ತಮ್ಮದಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ