ಪ್ರತಿವರ್ಷ ಜೂನ್ 25ರಂದು ಸಂವಿಧಾನದ ಹತ್ಯಾ ದಿನ ಆಚರಣೆ; ಅಮಿತ್ ಶಾ ಘೋಷಣೆ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತುರ್ತು ಪರಿಸ್ಥಿತಿ ಹೇರಿಕೆಯನ್ನು ವಿರೋಧಿಸಿ ಪ್ರತಿವರ್ಷ ಜೂನ್ 25ರಂದು ಸಂವಿಧಾನ್ ಹತ್ಯಾ ದಿವಸ್ ಆಚರಣೆ ಮಾಡಲಾಗುವುದು ಎಂದು ಘೋಷಿಸಿದೆ. 1975ರ ಜೂನ್ 25ರಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವು ತುರ್ತು ಪರಿಸ್ಥಿತಿಯನ್ನು ಹೇರಿತು. ಇದರಿಂದ 2 ವರ್ಷಗಳ ಕಾಲ ಜನರ ನಾಗರಿಕ ಹಕ್ಕುಗಳನ್ನು ಅಮಾನತುಗೊಳಿಸಲಾಯಿತು.

ಪ್ರತಿವರ್ಷ ಜೂನ್ 25ರಂದು ಸಂವಿಧಾನದ ಹತ್ಯಾ ದಿನ ಆಚರಣೆ; ಅಮಿತ್ ಶಾ ಘೋಷಣೆ
ಅಮಿತ್ ಶಾ
Follow us
ಸುಷ್ಮಾ ಚಕ್ರೆ
|

Updated on:Jul 12, 2024 | 6:42 PM

ನವದೆಹಲಿ: ತುರ್ತು ಪರಿಸ್ಥಿತಿ ಹೇರಿಕೆ ವಿರೋಧಿಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕೇಂದ್ರ ಸರ್ಕಾರ, ಜೂನ್ 25ನ್ನು ಪ್ರತಿ ವರ್ಷ ‘ಸಂವಿಧಾನ್ ಹತ್ಯಾ ದಿವಸ್’ ಎಂದು ಆಚರಿಸಲಾಗುವುದು ಎಂದು ಘೋಷಿಸಿದೆ. ಈ ಬಗ್ಗೆ ಎಕ್ಸ್​ನಲ್ಲಿ ಘೋಷಣೆ ಮಾಡಿರುವ ಗೃಹ ಸಚಿವ ಅಮಿತ್ ಶಾ ಗೆಜೆಟ್ ಅಧಿಸೂಚನೆಯನ್ನು ಪೋಸ್ಟ್ ಮಾಡಿದ್ದಾರೆ. “ಜೂನ್ 25, 1975ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಸರ್ವಾಧಿಕಾರಿ ಮನಸ್ಥಿತಿಯಿಂದ ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ನಮ್ಮ ಪ್ರಜಾಪ್ರಭುತ್ವದ ಕತ್ತು ಹಿಸುಕಿದರು. ಇದರಿಂದ ತಮ್ಮ ತಪ್ಪಿಲ್ಲದಿದ್ದರೂ ಲಕ್ಷಾಂತರ ಜನರನ್ನು ಜೈಲಿಗೆ ಹಾಕಲಾಯಿತು ಮತ್ತು ಮಾಧ್ಯಮಗಳ ಧ್ವನಿಯನ್ನು ಹತ್ತಿಕ್ಕಲಾಯಿತು” ಎಂದಿದ್ದಾರೆ.

“ಭಾರತ ಸರ್ಕಾರವು ಪ್ರತಿ ವರ್ಷ ಜೂನ್ 25 ಅನ್ನು ‘ಸಂವಿಧಾನ್ ಹತ್ಯಾ ದಿವಸ್’ ಎಂದು ಆಚರಿಸಲು ಸರ್ಕಾರ ನಿರ್ಧರಿಸಿದೆ. ಈ ದಿನವು 1975 ರ ತುರ್ತು ಪರಿಸ್ಥಿತಿಯ ಅಮಾನವೀಯ ನೋವುಗಳನ್ನು ಸಹಿಸಿಕೊಂಡ ಎಲ್ಲರ ಬೃಹತ್ ಕೊಡುಗೆಗಳನ್ನು ಸ್ಮರಿಸುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಗೌರವ; ಪ್ರಶಸ್ತಿಯನ್ನು ಭಾರತೀಯರಿಗೆ ಅರ್ಪಿಸಿದ ಪಿಎಂ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಶುಕ್ರವಾರ ಅಧಿಕೃತವಾಗಿ ಜೂನ್ 25ರಂದು ‘ಸಂವಿಧಾನ ಹತ್ಯಾ ದಿವಸ್’ ಎಂದು ಆಚರಿಸಲು ನಿರ್ಧರಿಸಿದ್ದು, ಆಗಿನ ಪ್ರಧಾನಿ ಇಂದಿರಾಗಾಂಧಿಯವರ ‘ತುರ್ತು ಪರಿಸ್ಥಿತಿ’ಯಿಂದಾಗಿ ಉಂಟಾದ ಅಮಾನವೀಯ ನೋವನ್ನು ಅನುಭವಿಸಿದ ಎಲ್ಲರ ಕೊಡುಗೆಯನ್ನು ಆಚರಿಸಲು ನಿರ್ಧರಿಸಿದೆ.

ಇಂದಿರಾ ಗಾಂಧಿಯವರ ಸರ್ಕಾರವು ಜೂನ್ 25, 1975ರಂದು ಭಾರತದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿತು. ಸುಮಾರು 2 ವರ್ಷಗಳ ನಂತರ ಮಾರ್ಚ್ 21, 1977ರಂದು ಪ್ರಜಾಪ್ರಭುತ್ವವನ್ನು ಪುನಃಸ್ಥಾಪಿಸಲಾಯಿತು. ಜೂನ್ 25, 2024ರಂದು ತುರ್ತು ಪರಿಸ್ಥಿತಿಯ 50 ವರ್ಷಗಳ ನೆನಪಿಗಾಗಿ ಕರಾಳದಿನವನ್ನು ಆಚರಿಸಲಾಯಿತು.

ಇದನ್ನೂ ಓದಿ: PM Narendra Modi: ಲೋಕಸಭೆಯಲ್ಲಿ ತುರ್ತು ಪರಿಸ್ಥಿತಿ ವಿರುದ್ಧ ಧ್ವನಿಯೆತ್ತಿದ ಸ್ಪೀಕರ್​ಗೆ ಪ್ರಧಾನಿ ಮೋದಿ ಮೆಚ್ಚುಗೆ

ಜೂನ್ 24ರಂದು ಹೊಸ ಲೋಕಸಭೆಯ ಮೊದಲ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ತುರ್ತುಪರಿಸ್ಥಿತಿ ಭಾರತದ ಪ್ರಜಾಪ್ರಭುತ್ವದಲ್ಲಿ “ಕಪ್ಪು ಚುಕ್ಕೆ” ಎಂದು ಕರೆದರು. ಇದಕ್ಕೆ ವಿಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಬಳಿಕ ಜಂಟಿ ಸಂಸತ್ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ತುರ್ತುಪರಿಸ್ಥಿತಿಯ ವಿರುದ್ಧ ಧ್ವನಿಯೆತ್ತಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:54 pm, Fri, 12 July 24

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು