AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Subsidy: 2023-24ನೇ ಸಾಲಿಗೂ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಸಬ್ಸಿಡಿ ವಿಸ್ತರಣೆ

ಕೇಂದ್ರ ಸರ್ಕಾರವು ಗೃಹಬಳಕೆಯ ಎಲ್​ಪಿಜಿ ಗ್ಯಾಸ್​ ಸಿಲಿಂಡ್​ ಮೇಲೆ ನೀಡುವ 200 ರೂ. ಸಬ್ಸಿಡಿಯನ್ನು 2023-24ನೇ ಸಾಲಿಗೂ ವಿಸ್ತರಿಸಿದೆ.

LPG Subsidy: 2023-24ನೇ ಸಾಲಿಗೂ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಸಬ್ಸಿಡಿ ವಿಸ್ತರಣೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Mar 25, 2023 | 1:59 PM

Share

ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ​ ಯೋಜನೆಯ (Pradhan Mantri Ujjwala Yojana) ಫಲಾನುಭವಿಗಳಿಗೆ ಕೇಂದ್ರ ಸರ್ಕಾರ (Central Government) ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರವು ಗೃಹಬಳಕೆಯ ಎಲ್​ಪಿಜಿ ಗ್ಯಾಸ್​ ಸಿಲಿಂಡ್ (LPG Gas Cylinder)​ ಮೇಲೆ ನೀಡುವ 200 ರೂ. ಸಬ್ಸಿಡಿಯನ್ನು 2023-24ನೇ ಸಾಲಿಗೂ ವಿಸ್ತರಿಸಿದೆ. ಉಜ್ವಲ ಯೋಜನೆ ಅಡಿ 9.59 ಫಲಾನುಭವಿಗಳು ವರ್ಷಕ್ಕೆ 14.2 ಕೆಜಿ ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ನಲ್ಲಿ 200 ರೂ. ಸಬ್ಸಿಡಿ ಪಡೆಯುತ್ತಾರೆ. ಇನ್ನು ಫಲಾನುಭವಿಗಳಿಗೆ ಸರ್ಕಾರ ವರ್ಷಕ್ಕೆ 12 ಸಿಲಿಂಡರ್​ಗಳನ್ನು ತುಂಬಲು ಅನುಮತಿ ನೀಡಿದೆ. ಅಂದರೆ ಒಂದು ವರ್ಷದಲ್ಲಿ 12 ಅಡುಗೆ ಅನಿಲ ಸಿಲಿಂಡರ್​ಗಳ ಮೇಲೆ ಪ್ರತಿ ಸಿಲಿಂಡರ್​ಗೆ 200 ರೂ. ಸಬ್ಸಿಡಿ ನೀಡಿದಂತಾಗುತ್ತದೆ.

ಕೇಂದ್ರ ಸರ್ಕಾರ ಈ ಯೋಜನೆಗೆ 2022-23ನೇ ಸಾಲಿನಲ್ಲಿ 6,100 ಕೋಟಿ ರೂ. ವ್ಯಯಿಸಿತ್ತು. 2023-24ನೇ ಸಾಲಿನಲ್ಲಿ ಸುಮಾರು 1 ಸಾವಿರ ಕೋಟಿಗಳಷ್ಟು ಹೆಚ್ಚಾಗಲಿದ್ದು, 7,680 ಕೋಟಿ ಈ ಯೋಜನೆಗೆ ಮೀಸಲಿರಿಸಿದೆ. ಇದರಿಂದ ಸರ್ಕಾರಕ್ಕೆ ಸಾವಿರ ಕೋಟಿಗಳಷ್ಟು ಹೊರೆ ಬೀಳಲಿದೆ. ಸಬ್ಸಿಡಿ ನೇರವಾಗಿ ಹಣ ಫಲಾನುಭವಿಗಳ ಖಾತೆಗಳಿಗೆ ಕ್ರೆಡಿಟ್​ ಆಗುತ್ತದೆ.

ಈಗಾಗಲೇ ಸಬ್ಸಿಡಿ ನೀಡುತ್ತಿರುವ ಕಂಪನಿಗಳು

ಎಲ್ಲಾ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL), ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 22 ಮೇ 2022 ರಿಂದ ಈ ಸಬ್ಸಿಡಿಯನ್ನು ನೀಡುತ್ತಿವೆ. ಹಲವು ಕಾರಣಗಳಿಂದ ಎಲ್‌ಪಿಜಿ ಬೆಲೆಯಲ್ಲಿ ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಉಜ್ವಲ ಯೋಜನೆಯ ಫಲಾನುಭವಿಗಳನ್ನು ಇದರಿಂದ ರಕ್ಷಿಸುವ ಅಗತ್ಯವಿದೆ. ಈ ಕಾರಣಕ್ಕಾಗಿ ಸಹಾಯಧನ ಮಂಜೂರಾಗಿದ್ದು, ಇದರಿಂದ ಬಡ ಕುಟುಂಬಗಳಿಗೆ ದೊಡ್ಡ ಪರಿಹಾರ ಸಿಗಲಿದೆ.

ವಿವಿಧ ದೇಶಗಳಲ್ಲಿ ರಾಜಕೀಯ ಕಾರಣದಿಂದ ಎಲ್​ಪಿಜಿ ಬೆಲೆ ಏರಿಕೆಯಾಗಿದೆ. ಇದರಿಂದ ಇತ್ತೀಚಿಗೆ ಭಾರತದಲ್ಲೂ ಗ್ಯಾಸ್​ ಸಿಲಿಂಡರ್​​ ಬೆಲೆ ಏರಿಕೆಯಾಗಿತ್ತು. ಆದರೆ PMUY ಯೋಜನೆಯಿಂದ ಫಲಾನುಭವಿಗಳಿಗೆ 200ರೂ. ಮರಳಿ ಬರುವುದರಿಂದ ಬೆಲೆ ಏರಿಕೆ ಹೊರೆ ಎನಿಸಲಾರದು.

ಎಲ್ಲಾ PMUY ಫಲಾನುಭವಿಗಳು ಈ ಉದ್ದೇಶಿತ ಸಬ್ಸಿಡಿಗೆ ಅರ್ಹರಾಗಿದ್ದಾರೆ. ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ (LPG), ಶುದ್ಧ ಅಡುಗೆ ಇಂಧನವನ್ನು ಗ್ರಾಮೀಣ ಮತ್ತು ಬಡ ಕುಟುಂಬಗಳಿಗೆ ಲಭ್ಯವಾಗುವಂತೆ ಮಾಡಲು, ಬಡ ಕುಟುಂಬಗಳ ಮಹಿಳೆಯರಿಗೆ ಠೇವಣಿ-ಮುಕ್ತ LPG ಸಂಪರ್ಕಗಳನ್ನು ಒದಗಿಸಲು ಸರ್ಕಾರವು ಮೇ 2016 ರಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಪ್ರಾರಂಭಿಸಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ