ಭಾರತೀಯ ರೈಲ್ವೇಯನ್ನು ಖಾಸಗೀಕರಣಗೊಳಿಸುವ ಯಾವುದೇ ಯೋಜನೆ ಇಲ್ಲ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ರೈಲ್ವೆಯು ಸಾಮಾಜಿಕ ಹೊಣೆಗಾರಿಕೆಗಳನ್ನು ಪೂರೈಸುವುದನ್ನು ಮುಂದುವರಿಸುತ್ತದೆ ಎಂದು ಹೇಳಿದ ಕೇಂದ್ರ ರೈಲ್ವೆ ಸಚಿವ, ಸರಕು ಸಾಗಣೆ ಕಾರಿಡಾರ್‌ಗಳನ್ನು ಖಾಸಗೀಕರಣಗೊಳಿಸುವ ಯಾವುದೇ ಯೋಜನೆ ಇಲ್ಲ ಎಂದು ಹೇಳಿದರು.

ಭಾರತೀಯ ರೈಲ್ವೇಯನ್ನು ಖಾಸಗೀಕರಣಗೊಳಿಸುವ ಯಾವುದೇ ಯೋಜನೆ ಇಲ್ಲ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್
ಭಾರತೀಯ ರೈಲ್ವೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Mar 16, 2022 | 9:45 PM

ದೆಹಲಿ: ಭಾರತೀಯ ರೈಲ್ವೇಯನ್ನು(Indian Railways) ಖಾಸಗೀಕರಣಗೊಳಿಸುವ (privatise) ಯಾವುದೇ ಯೋಜನೆಯನ್ನು ಸರ್ಕಾರ ಹೊಂದಿಲ್ಲ. ಈ ನಿಟ್ಟಿನಲ್ಲಿ ವಿರೋಧ ಪಕ್ಷಗಳ ವಾದ ಕಾಲ್ಪನಿಕವಾಗಿದೆ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಹೇಳಿದ್ದಾರೆ. ರೈಲ್ವೆಯು ಸಾಮಾಜಿಕ ಹೊಣೆಗಾರಿಕೆಗಳನ್ನು ಪೂರೈಸುವುದನ್ನು ಮುಂದುವರಿಸುತ್ತದೆ ಎಂದು ಹೇಳಿದ ಅವರು, ಸರಕು ಸಾಗಣೆ ಕಾರಿಡಾರ್‌ಗಳನ್ನು ಖಾಸಗೀಕರಣಗೊಳಿಸುವ ಯಾವುದೇ ಯೋಜನೆ ಇಲ್ಲ ಎಂದು ಹೇಳಿದರು. ಇದು ಕೇವಲ ಒಂದು ಕಾಲ್ಪನಿಕ ಸಂಗತಿ ಆಗಿದೆ. ಹಳಿಯು ರೈಲ್ವೆಗೆ ಸೇರಿದ್ದು, ನಿಲ್ದಾಣಗಳು ರೈಲ್ವೇಗೆ ಸೇರಿದ್ದು, ಇಂಜಿನ್‌ಗಳು ರೈಲ್ವೇಗೆ ಸೇರಿದ್ದು, ರೈಲುಗಳು ರೈಲ್ವೇಗೆ ಸೇರಿದ್ದು, ಸಿಗ್ನಲಿಂಗ್ ವ್ಯವಸ್ಥೆಗಳು ರೈಲ್ವೇಗೆ ಸೇರಿದ್ದು. ಹೀಗಿರುವಾಗ ಖಾಸಗೀಕರಣದ ಮಾತೇ ಇಲ್ಲ.ರೈಲ್ವೆಯನ್ನು ಖಾಸಗೀಕರಣಗೊಳಿಸುವ ಯಾವುದೇ ಯೋಜನೆ ಇಲ್ಲ ಎಂದಿದ್ದಾರೆ ಸಚಿವರು. ಪ್ರಯಾಣಿಕರ ದರದಲ್ಲಿ 60,000 ಕೋಟಿ ರೂಪಾಯಿ ಸಬ್ಸಿಡಿ ನೀಡಲಾಗುತ್ತದೆ ಎಂದು ವೈಷ್ಣವ್ ಒತ್ತಿ ಹೇಳಿದರು. ಸಾಮಾಜಿಕ ಹೊಣೆಗಾರಿಕೆಯನ್ನು ಹೊರತೆಗೆದರೆ, ಭಾರತೀಯ ರೈಲ್ವೆಯ ಕಾರ್ಯನಿರ್ವಹಣೆಯ ಅನುಪಾತ ಅಂದರೆ ಒಂದು ಘಟಕದ ಕಾರ್ಯಕ್ಷಮತೆಯನ್ನು ಅಳೆಯುವ ಪ್ರಮುಖ ನಿಯತಾಂಕ ಸುಮಾರು ಶೇ 85  ಇರುತ್ತದೆ ಎಂದು ಅವರು ಹೇಳಿದರು. ಆದಾಗ್ಯೂ, ಇದು ಪ್ರಸ್ತುತ 100 ಕ್ಕಿಂತ ಸ್ವಲ್ಪವೇ  ಕಡಿಮೆ ಇದೆ. ಸಂಸತ್ತಿನಲ್ಲಿ ನಡೆದ ಚರ್ಚೆಯಲ್ಲಿ ರೈಲ್ವೆಯನ್ನು ಖಾಸಗೀಕರಣಗೊಳಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಹಲವು ಸಂಸದರು ಆರೋಪಿಸಿದ ಹಿನ್ನೆಲೆಯಲ್ಲಿ ರೈಲ್ವೇ ಸಚಿವರು ಈ ಹೇಳಿಕೆ ನೀಡಿದ್ದಾರೆ.

ಲೋಕಸಭೆಯಲ್ಲಿ 2022-23ನೇ ಸಾಲಿಗೆ ರೈಲ್ವೆ ಸಚಿವಾಲಯಕ್ಕೆ ಅನುದಾನದ ಬೇಡಿಕೆಗಳ ಮೇಲಿನ ಚರ್ಚೆಗೆ ಉತ್ತರಿಸಿದ ಸಚಿವರು, ನೇಮಕಾತಿಗೆ ಸಂಬಂಧಿಸಿದಂತೆ ಇತ್ತೀಚಿನ “ತಪ್ಪು ಗ್ರಹಿಕೆ” ಯನ್ನು ಸಹಾನುಭೂತಿಯ ರೀತಿಯಲ್ಲಿ ರೈಲ್ವೆ ಪರಿಹರಿಸಿದೆ ಎಂದು ಹೇಳಿದರು.

“ನೇಮಕಾತಿಗೆ ಯಾವುದೇ ನಿಷೇಧವಿಲ್ಲ. 1.14 ಲಕ್ಷ ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ” ಎಂದು ಚರ್ಚೆಯ ವೇಳೆ ಸಂಸದರು ಪ್ರಸ್ತಾಪಿಸಿದ ವಿವಿಧ ವಿಷಯಗಳಿಗೆ ಪ್ರತಿಕ್ರಿಯಿಸಿದ ಸಚಿವರು ಹೇಳಿದರು. ಮುಂಬೈ ಮತ್ತು ಅಹಮದಾಬಾದ್ ನಡುವಿನ ಉದ್ದೇಶಿತ ಬುಲೆಟ್ ಟ್ರೈನ್‌ಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಗುಜರಾತ್ ವಿಭಾಗದಲ್ಲಿ 99.7 ರಷ್ಟು ಭೂಸ್ವಾಧೀನ ಪೂರ್ಣಗೊಂಡಿದೆ ಮತ್ತು 750 ಪಿಲ್ಲರ್‌ಗಳನ್ನು ನಿರ್ಮಿಸಲಾಗಿದೆ. ಬುಲೆಟ್ ರೈಲು ಯೋಜನೆ ಕಾಮಗಾರಿಯು ತಿಂಗಳಿಗೆ 8 ಕಿ.ಮೀ.ನಂತೆ ಪ್ರಗತಿಯಲ್ಲಿದ್ದು, ಇದನ್ನು ತಿಂಗಳಿಗೆ 10 ಕಿ.ಮೀ.ಗೆ ಹೆಚ್ಚಿಸಲಾಗುವುದು.

“ಭಾರತದ ಮಣ್ಣಿನಲ್ಲಿ ಬುಲೆಟ್ ರೈಲು ಓಡಲು ಸಾಧ್ಯವಿಲ್ಲ ಎಂದು ಯಾರು ಹೇಳುತ್ತಾರೆ” ಎಂದು ಅವರು ಟಿಎಂಸಿಯ ವಾದವನ್ನು ಪ್ರಶ್ನಿಸಿದರು. ರಾಜ್ಯ ಸರ್ಕಾರದ ಸಹಕಾರದ ಕೊರತೆಯಿಂದಾಗಿ ಪಶ್ಚಿಮ ಬಂಗಾಳದಲ್ಲಿ 18 ರೈಲ್ವೆ ಯೋಜನೆಗಳು ಬಾಕಿ ಉಳಿದಿವೆ ಎಂದು ವೈಷ್ಣವ್ ಹೇಳಿದರು.

ವಂದೇ ಭಾರತ್ ರೈಲುಗಳ ವೇಗವನ್ನು ಪ್ರಸ್ತುತ ಗಂಟೆಗೆ 160 ಕಿಮೀಯಿಂದ ಗಂಟೆಗೆ 200 ಕಿಲೋಮೀಟರ್‌ಗೆ ಏರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಸಚಿವರು ಹೇಳಿದರು. ಮುಂಬರುವ ವರ್ಷಗಳಲ್ಲಿ ಇಂತಹ 400 ರೈಲುಗಳನ್ನು ಪರಿಚಯಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಆಟ ಇನ್ನೂ ಮುಗಿದಿಲ್ಲ: ರಾಷ್ಟ್ರಪತಿ ಚುನಾವಣೆ ಬಗ್ಗೆ ಬಿಜೆಪಿಗೆ ಮಮತಾ ಬ್ಯಾನರ್ಜಿ ಸಂದೇಶ

Published On - 9:28 pm, Wed, 16 March 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ