AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ನಡುವೆ ಲಕ್ಷಾಂತರ ಬಡವರಿಗೆ ಉಚಿತ ಪಡಿತರ ನೆರವಿಗೆ ಬಂದಿದೆ: ನರೇಂದ್ರ ಮೋದಿ

PM-GKAY: ಗುಜರಾತ್‌ನಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PM-GKAY) ಯ ಫಲಾನುಭವಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಮೋದಿ ಈ ಯೋಜನೆಯಡಿ ಲಕ್ಷಾಂತರ ಕುಟುಂಬಗಳಿಗೆ ಉಚಿತ ಪಡಿತರ ವಿತರಿಸಲಾಗುತ್ತಿದೆ. ಇದು ಸಾಂಕ್ರಾಮಿಕ ಸಮಯದಲ್ಲಿ ಬಡವರ ಆತಂಕವನ್ನು ಕಡಿಮೆ ಮಾಡಲು ಸಹಾಯ ಮಾಡಿದೆ ಎಂದು ಹೇಳಿದರು.

ಕೊವಿಡ್ ನಡುವೆ ಲಕ್ಷಾಂತರ ಬಡವರಿಗೆ ಉಚಿತ ಪಡಿತರ ನೆರವಿಗೆ ಬಂದಿದೆ: ನರೇಂದ್ರ ಮೋದಿ
ನರೇಂದ್ರ ಮೋದಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Aug 03, 2021 | 2:51 PM

Share

ದೆಹಲಿ: ಕೊರೊನಾವೈರಸ್ ಸಾಂಕ್ರಾಮಿಕ ಸಮಯದಲ್ಲಿ ನಾಗರಿಕರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.

ಗುಜರಾತ್‌ನಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PM-GKAY) ಯ ಫಲಾನುಭವಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಮೋದಿ ಈ ಯೋಜನೆಯಡಿ ಲಕ್ಷಾಂತರ ಕುಟುಂಬಗಳಿಗೆ ಉಚಿತ ಪಡಿತರ ವಿತರಿಸಲಾಗುತ್ತಿದೆ. ಇದು ಸಾಂಕ್ರಾಮಿಕ ಸಮಯದಲ್ಲಿ ಬಡವರ ಆತಂಕವನ್ನು ಕಡಿಮೆ ಮಾಡಲು ಸಹಾಯ ಮಾಡಿದೆ ಎಂದು ಹೇಳಿದರು. ನಿಮ್ಮ ಕುಟುಂಬದ ಪಡಿತರ ಸಮಸ್ಯೆಯನ್ನು ಈಗ ಪರಿಹರಿಸಲಾಗಿದೆ ಎಂದು ನನಗೆ ತೃಪ್ತಿ ಇದೆ ಎಂದು ಅವರು ಫಲಾನುಭವಿಗಳಿಗೆ ಹೇಳಿದರು.

ಈ ಯೋಜನೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಗುಜರಾತ್‌ನಲ್ಲಿ ಸಾರ್ವಜನಿಕ ಭಾಗವಹಿಸುವಿಕೆ ಕಾರ್ಯಕ್ರಮವನ್ನು ಆರಂಭಿಸಲಾಗುತ್ತಿದೆ ಎಂದು ಪ್ರಧಾನಮಂತ್ರಿ ಕಚೇರಿಯ ಅಧಿಕೃತ ಪ್ರಕಟಣೆ ತಿಳಿಸಿದೆ. ಸ್ವಾತಂತ್ರ್ಯದ ನಂತರ, ಪ್ರತಿಯೊಂದು ಸರ್ಕಾರವೂ ಬಡವರಿಗೆ ಅಗ್ಗದ ಆಹಾರವನ್ನು ಒದಗಿಸುವ ಬಗ್ಗೆ ಮಾತನಾಡಿದೆ ಎಂದು ಪ್ರಧಾನಿ ಹೇಳಿದರು. “ಈ ವರ್ಷಗಳಲ್ಲಿ ಅಗ್ಗದ ಪಡಿತರ ಯೋಜನೆಗಳು ಮತ್ತು ಬಜೆಟ್‌ನ ವ್ಯಾಪ್ತಿಯು ಹೆಚ್ಚಾಯಿತು, ಆದರೆ ಪರಿಣಾಮವು ಸೀಮಿತವಾಗಿತ್ತು. ಆಹಾರ ಸಂಗ್ರಹಣೆ ಹೆಚ್ಚುತ್ತಲೇ ಇತ್ತು, ಆದರೆ ಹಸಿವು ಮತ್ತು ಅಪೌಷ್ಟಿಕತೆಯು ಆ ಅನುಪಾತದಲ್ಲಿ ಕಡಿಮೆಯಾಗಲಿಲ್ಲ” ಎಂದಿದ್ದಾರೆ ಮೋದಿ. ಇದರ ಹಿಂದಿನ ಒಂದು ಪ್ರಮುಖ ಕಾರಣವೆಂದರೆ ಪರಿಣಾಮಕಾರಿ ವಿತರಣಾ ವ್ಯವಸ್ಥೆಯ ಕೊರತೆ.

ಈ ಪರಿಸ್ಥಿತಿಯನ್ನು ಬದಲಾಯಿಸಲು 2014 ರ ನಂತರ ಹೊಸದಾಗಿ ಕೆಲಸ ಆರಂಭಿಸಲಾಯಿತು. ಕೋಟಿಗಟ್ಟಲೆ ನಕಲಿ ಫಲಾನುಭವಿಗಳನ್ನು ವ್ಯವಸ್ಥೆಯಿಂದ ತೆಗೆದುಹಾಕಲಾಯಿತು. ಆಧಾರ್ ಅನ್ನು ಪಡಿತರ ಚೀಟಿಗೆ ಲಿಂಕ್ ಮಾಡಲಾಗಿದೆ ಮತ್ತು ಸರ್ಕಾರಿ ಪಡಿತರ ಅಂಗಡಿಗಳಲ್ಲಿ ಡಿಜಿಟಲ್ ತಂತ್ರಜ್ಞಾನವನ್ನು ಅನುಮೋದಿಸಲಾಗಿದೆ, ಹೊಸ ಯೋಜನೆಯನ್ನು ಸೇರಿಸುವುದರಿಂದ ಸಾಂಕ್ರಾಮಿಕ ಸಮಯದಲ್ಲಿ ಯಾರೂ ಖಾಲಿ ಹೊಟ್ಟೆಯಲ್ಲಿ ಮಲಗುವುದಿಲ್ಲ ಎಂದು ಅವರು ಹೇಳಿದರು.

“ಇಂದು ಹೆಚ್ಚುವರಿಯಾಗಿ ಗೋಧಿ ಕೆಜಿಗೆ ₹2 ಅಕ್ಕಿಗೆ ಕೆಜಿಗೆ ₹ 3ಮತ್ತು ಎಲ್ಲ ಫಲಾನುಭವಿಗಳಿಗೆ 5 ಕೆಜಿ ಗೋಧಿ ಮತ್ತು ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಈ ಯೋಜನೆ ದೀಪಾವಳಿಯವರೆಗೆ ಇರುತ್ತದೆ. ಗುಜರಾತ್‌ನಲ್ಲಿ ಸುಮಾರು 3.5 ಕೋಟಿ ಜನರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ ಎಂದು ಮೋದಿ ಹೇಳಿದರು.

ಪಿಎಂ-ಜಿಕೆಎವೈ ಆಹಾರ ಭದ್ರತಾ ಕಲ್ಯಾಣ ಯೋಜನೆಯಾಗಿದ್ದು, ಕೊವಿಡ್ -19 ರ ಆರ್ಥಿಕ ಪರಿಣಾಮವನ್ನು ತಗ್ಗಿಸಲು ಸಹಾಯ ಮಾಡುತ್ತದೆ. ಈ ಯೋಜನೆಯಡಿ, ರಾಷ್ಟ್ರೀಯ ಆಹಾರ ಭದ್ರತೆ ಕಾಯಿದೆಯಡಿ ಬರುವ ಎಲ್ಲಾ ಫಲಾನುಭವಿಗಳಿಗೆ ಪ್ರತಿ ವ್ಯಕ್ತಿಗೆ 5 ಕೆಜಿ ಹೆಚ್ಚುವರಿ ಆಹಾರ ಧಾನ್ಯವನ್ನು ನೀಡಲಾಗುತ್ತದೆ.

ಪ್ರಧಾನಿ ಅವರೊಂದಿಗೆ ಸಂವಾದ ನಡೆಸುವ ಮುನ್ನ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಫಲಾನುಭವಿಗಳನ್ನು ಉದ್ದೇಶಿಸಿ ಮಾತನಾಡಿದರು. ಉಪಮುಖ್ಯಮಂತ್ರಿ ನಿತಿನ್ ಭಾಯ್ ಪಟೇಲ್ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

ಕಳೆದ ವರ್ಷ ಸರಿಸುಮಾರು 948 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಆಹಾರ ಧಾನ್ಯವನ್ನು ಹಂಚಲಾಯಿತು. ಇದು ಕೊವಿಡ್ ಸಮಯದಲ್ಲಿ ಆಹಾರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸಾಮಾನ್ಯ ವರ್ಷಕ್ಕಿಂತ 50 ಪ್ರತಿಶತ ಹೆಚ್ಚು. 2020-21ರ ಅವಧಿಯಲ್ಲಿ ಸುಮಾರು 8 2.84 ಲಕ್ಷ ಕೋಟಿ ಆಹಾರ ಸಬ್ಸಿಡಿ ಉಂಟಾಗಿದೆ.

ಗುಜರಾತಿನಲ್ಲಿ 3.3 ಕೋಟಿಗೂ ಹೆಚ್ಚು ಅರ್ಹ ಫಲಾನುಭವಿಗಳು 25.5 ಲಕ್ಷ ಮೆಟ್ರಿಕ್ ಟನ್ ಆಹಾರಧಾನ್ಯವನ್ನು ಪಡೆದರು. ಸಬ್ಸಿಡಿ ಮೊತ್ತ ₹ 5000 ಕೋಟಿಗಳಿಗಿಂತ ಹೆಚ್ಚು. ವಲಸೆ ಫಲಾನುಭವಿಗಳಿಗೆ ಆಹಾರ ಭದ್ರತೆಯನ್ನು ಮತ್ತಷ್ಟು ಬಲಪಡಿಸಲು, 33 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಒನ್ ನೇಷನ್ ಒನ್ ಪಡಿತರ ಚೀಟಿಯನ್ನು ಜಾರಿಗೆ ತರಲಾಗಿದೆ.

ಇದನ್ನೂ ಓದಿ:  Rahul gandhi: ರಾಹುಲ್ ಗಾಂಧಿ ದಿಢೀರನೇ ರಾಜಕೀಯವಾಗಿ ಸಕ್ರಿಯ; ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಹೋರಾಡಲು ಸನ್ನದ್ಧ

ಇದನ್ನೂ ಓದಿ: Parliament Monsoon Session: ಅಧಿವೇಶನ ನಡೆಸಲು ವಿಪಕ್ಷಗಳಿಂದ ಅಡ್ಡಿ; ಜನರಿಗೆ ಮಾಡುತ್ತಿರುವ ಅವಮಾನ ಎಂದು ಪ್ರಧಾನಿ ಮೋದಿ ಆಕ್ರೋಶ

(ಉovernment is making all effort to provide all possible help to citizens during the coronavirus says Narendra Modi)

ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ