ಸಂಸತ್​ನ ಮುಂಗಾರು ಅಧಿವೇಶನದಲ್ಲಿ ಯಾವುದೇ ವಿಷಯದ ಬಗ್ಗೆ ಚರ್ಚೆಗೆ ಸಿದ್ಧ: ನರೇಂದ್ರ ಮೋದಿ

Monsoon Session 2021:ಸಂಸತ್​​ನ ಮುಂಗಾರು ಅಧಿವೇಶನಕ್ಕೆ ಮುನ್ನ ದಿನ ನಡೆದ ಸರ್ವ ಪಕ್ಷ ಸಭೆಯಲ್ಲಿ ಮೋದಿ ಈ ರೀತಿ ಹೇಳಿದ್ದಾರೆ.  ಈ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಮತ್ತು ರಾಜ್ಯಸಭೆಯ ಸದನ ಮುಖಂಡ ಪಿಯೂಷ್ ಗೋಯಲ್ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಉಪಸ್ಥಿತರಿದ್ದರು. 33 ಕ್ಕೂ ಹೆಚ್ಚು ಪಕ್ಷಗಳ ಮುಖಂಡರು ಚರ್ಚೆಯಲ್ಲಿ ಭಾಗವಹಿಸಿದ್ದರು.

ಸಂಸತ್​ನ ಮುಂಗಾರು ಅಧಿವೇಶನದಲ್ಲಿ ಯಾವುದೇ ವಿಷಯದ ಬಗ್ಗೆ ಚರ್ಚೆಗೆ ಸಿದ್ಧ: ನರೇಂದ್ರ ಮೋದಿ
ಸರ್ವಪಕ್ಷ ಸಭೆಗೆ ಆಗಮಿಸುತ್ತಿರುವ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 18, 2021 | 4:16 PM

 ದೆಹಲಿ: ಸಂಸತ್ತಿನಲ್ಲಿ ಸಕಾರಾತ್ಮಕ ಮತ್ತು ರಚನಾತ್ಮಕ ಚರ್ಚೆಗೆ ಒತ್ತು ನೀಡಲಾಗುವುದು ಎಂದು ಹೇಳಿದ  ಪ್ರಧಾನಿ ನರೇಂದ್ರ ಮೋದಿ ನಮ್ಮ ಸರ್ಕಾರವು ನಿಯಮಗಳ ಅಡಿಯಲ್ಲಿ ಯಾವುದೇ ವಿಷಯದ ಕುರಿತು ಚರ್ಚೆಗೆ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ಸಂಸತ್​​ನ ಮುಂಗಾರು ಅಧಿವೇಶನಕ್ಕೆ ಮುನ್ನ ದಿನ ನಡೆದ ಸರ್ವ ಪಕ್ಷ ಸಭೆಯಲ್ಲಿ ಮೋದಿ ಈ ರೀತಿ ಹೇಳಿದ್ದಾರೆ.  ಈ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಮತ್ತು ರಾಜ್ಯಸಭೆಯ ಸದನ ಮುಖಂಡ ಪಿಯೂಷ್ ಗೋಯಲ್ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಉಪಸ್ಥಿತರಿದ್ದರು. 33 ಕ್ಕೂ ಹೆಚ್ಚು ಪಕ್ಷಗಳ ಮುಖಂಡರು ಚರ್ಚೆಯಲ್ಲಿ ಭಾಗವಹಿಸಿದ್ದರು.

ಕಾಂಗ್ರೆಸ್ ನಿಂದ  ರಾಜ್ಯಸಭೆ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಮತ್ತು ಲೋಕಸಭೆಯಲ್ಲಿ ನಾಯಕರಾದ ಅಧೀರ್ ರಂಜನ್ ಚೌಧರಿ ಉಪಸ್ಥಿತರಿದ್ದರು.

ತೃಣಮೂಲ ಮೂಲದ ಡೆರೆಕ್ ಒ ಬ್ರಿಯಾನ್, ಡಿಎಂಕೆ ಪಕ್ಷದ ತಿರುಚಿ ಶಿವ, ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ಮತ್ತು ಬಿಎಸ್ಪಿಯ ಸತೀಶ್ ಮಿಶ್ರಾ ಸೇರಿದಂತೆ ಎಲ್ಲ ಪ್ರಮುಖ ವಿರೋಧ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ಅಪ್ನಾ ದಳದ ಮುಖಂಡ ಮತ್ತು ಎನ್‌ಡಿಎ ಮಿತ್ರ ಅನುಪ್ರಿಯಾ ಪಟೇಲ್ ಮತ್ತು ಎಲ್‌ಜೆಪಿ ಮುಖಂಡ ಪಶುಪತಿ ಪರಾಸ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.

30 ಮಸೂದೆಗಳನ್ನು ತರಲು ಯೋಜಿಸಿರುವ ಸರ್ಕಾರ, ಯಾವುದೇ ಚರ್ಚೆಯಿಂದ ಓಡಿಹೋಗುತ್ತಿಲ್ಲ ಎಂದು ಹೇಳಿದೆ.

ಹಣದುಬ್ಬರ, ಎರಡನೇ ಕೊವಿಡ್ ತರಂಗವನ್ನು ಸರ್ಕಾರ ನಿರ್ವಹಿಸಿರುವ ರೀತಿ ಬಗ್ಗೆ ವಿಪಕ್ಷ ನಾಯಕರು ಮಾನ್ಸೂನ್ ಅಧಿವೇಶನದಲ್ಲಿ ಚರ್ಚೆಗೆಳೆಯುವ ಸಾಧ್ಯತೆ ಇದೆ. ಕಾಂಗ್ರೆಸ್ಸಿನ ರಾಹುಲ್ ಗಾಂಧಿ ಇತರ ನಾಯಕರೊಂದಿಗೆ, ತನ್ನ ಕೊವಿಡ್ ನಿರ್ವಹಣೆಯ ಬಗ್ಗೆ ಸರ್ಕಾರವನ್ನು ಪಟ್ಟುಬಿಡದೆ ಟೀಕಿಸುತ್ತಿದ್ದಾರೆ.

ಸಾಂಕ್ರಾಮಿಕ ರೋಗದ ಮಧ್ಯೆ ಜನರ ಪರವಾಗಿ ನಿಲ್ಲಬೇಕು ಮತ್ತು ನಾಗರಿಕರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಸದನದಲ್ಲಿ ಅದಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಬೇಕು ಎಂದು ಉಪಾಧ್ಯಕ್ಷ ಮತ್ತು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಶನಿವಾರ ಸಂಸತ್ ಸದಸ್ಯರನ್ನು ಒತ್ತಾಯಿಸಿದರು.

ಇದನ್ನೂ ಓದಿ:ನಾಳೆಯಿಂದ ಸಂಸತ್​ ಮುಂಗಾರು ಅಧಿವೇಶನ; ಇಂದು ಸರ್ವಪಕ್ಷಗಳ ಸಭೆ ಕರೆದ ಸಚಿವ ಪ್ರಲ್ಹಾದ್ ಜೋಶಿ, ಪ್ರಧಾನಿ ಮೋದಿ ಭಾಗಿ 

(Government is ready for debate on any topic under the rules PM Narendra Modi At All-Party Meeting)

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್