ನಕ್ಕಿದ್ದಕ್ಕೆ ಸರ್ಕಾರಿ ಅಧಿಕಾರಿಗೆ ಶೋಕಾಸ್ ನೋಟಿಸ್
ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ಸಾರ್ವಜನಿಕ ವಿಚಾರಣೆ ವೇಳೆ ಸರ್ಕಾರಿ ಅಧಿಕಾರಿಯೊಬ್ಬರು ತಮ್ಮ ಹಿರಿಯ ಸಹೋದ್ಯೋಗಿಗಳ ಸಮ್ಮುಖದಲ್ಲಿ ನಕ್ಕಿದ್ದಕ್ಕೆ ಶೋಕಾಸ್ ನೋಟಿಸ್ ಜಾರಿಮಾಡಲಾಗಿದೆ. ಸಾರ್ವಜನಿಕ ವಿಚಾರಣೆ ವೇಳೆ ನಗುತ್ತಿದ್ದ ಇಬ್ಬರು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಅಕ್ಟೋಬರ್ 30 ರಂದು ಈ ನೋಟಿಸ್ ನೀಡಲಾಗಿದ್ದು, ಶನಿವಾರ ಸಂಜೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ಸಾರ್ವಜನಿಕ ವಿಚಾರಣೆ ವೇಳೆ ಸರ್ಕಾರಿ ಅಧಿಕಾರಿಯೊಬ್ಬರು ತಮ್ಮ ಹಿರಿಯ ಸಹೋದ್ಯೋಗಿಗಳ ಎದುರು ನಕ್ಕಿದ್ದಕ್ಕೆ ಶೋಕಾಸ್ ನೋಟಿಸ್ ಜಾರಿಮಾಡಲಾಗಿದೆ. ಸಾರ್ವಜನಿಕ ವಿಚಾರಣೆ ವೇಳೆ ನಗುತ್ತಿದ್ದ ಅಧಿಕಾರಿಗೆ ಜಿಲ್ಲಾಧಿಕಾರಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಅಕ್ಟೋಬರ್ 30 ರಂದು ಈ ನೋಟಿಸ್ ನೀಡಲಾಗಿದ್ದು, ಶನಿವಾರ ಸಂಜೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಜಿಲ್ಲಾಧಿಕಾರಿಗಳು ಹಿರಿಯ ಸಹೋದ್ಯೋಗಿಗಳೊಂದಿಗೆ ಸಾರ್ವಜನಿಕ ವಿಚಾರಣೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. ಜಿಲ್ಲಾಧಿಕಾರಿ ಕಚೇರಿಯ ಇ-ಆಡಳಿತದ ಸಹಾಯಕ ವ್ಯವಸ್ಥಾಪಕ ಕೆ.ಕೆ.ತಿವಾರಿ ಅವರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಮಿಲಿಂದ್ ನಾಗದೇವ್ ಅವರು ನೋಟಿಸ್ ನೀಡಿದ್ದಾರೆ ಎಂದು ವರದಿಯಾಗಿದೆ.
ಅಕ್ಟೋಬರ್ 29 ರಂದು ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ ತಿವಾರಿ ಅವರು ಹಿರಿಯ ಅಧಿಕಾರಿಗಳ ಎದುರು ನಗುತ್ತಿದ್ದರು, ಇದು ಅಶಿಸ್ತು ಮತ್ತು ಕರ್ತವ್ಯಲೋಪವಾಗಿದೆ ಎಂದು ನೋಟಿಸ್ ಹೇಳಿದೆ. ಮಧ್ಯಪ್ರದೇಶ ನಾಗರಿಕ ಸೇವೆಗಳ ನಡವಳಿಕೆ ನಿಯಮಗಳು 1965 ರ ಅಡಿಯಲ್ಲಿ ಇದು ಗಂಭೀರವಾದ ದುರ್ನಡತೆಯಾಗಿದೆ ಮತ್ತು ಮಧ್ಯಪ್ರದೇಶ ನಾಗರಿಕ ಸೇವೆಗಳ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1966 ರ ಅಡಿಯಲ್ಲಿ ಶಿಕ್ಷಾರ್ಹವಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ನೋಟಿಸ್‌ನಲ್ಲಿ ತಿಳಿಸಿದ್ದಾರೆ.
ಮತ್ತಷ್ಟು ಓದಿ: ಎಚ್ಎಂಟಿ ಅರಣ್ಯ ಭೂಮಿ ವಿವಾದ: ನಿವೃತ್ತ ಐಎಎಸ್ ಅಧಿಕಾರಿ, ಹಾಲಿ ಐಎಫ್ಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್
ಮಧ್ಯಪ್ರದೇಶ ಸರ್ಕಾರವು ಹೊಸ ಇಲಾಖೆಯನ್ನು ರಚಿಸಿದೆ, ಇದರಲ್ಲಿ ನಗುವುದು ಮತ್ತು ಚಪ್ಪಾಳೆ ತಟ್ಟುವುದು ದೈಹಿಕ, ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ. ಇದು ಅಧಿಕಾರಿಗಳ ರಕ್ತದೊತ್ತಡವನ್ನು ಸುಧಾರಿಸುತ್ತದೆ, ಕೆಲಸದ ಸಾಮರ್ಥ್ಯವೂ ಹೆಚ್ಚುತ್ತದೆ ಎಂದು ಹೇಳಿದ್ದರೂ ಇದೀಗ ಹಿರಿಯ ಅಧಿಕಾರಿಗಳು ನಡೆದುಕೊಂಡಿರುವ ರೀತಿ ಇದಕ್ಕೆ ತದ್ವಿರುದ್ಧವಾದದ್ದು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ