Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಕೊವಿಡ್​ 19 ಕೇಂದ್ರಗಳಿಗೆ ದಾಖಲಾಗಲು ಕೊರೊನಾ ಪಾಸಿಟಿವ್ ವರದಿ ಕಡ್ಡಾಯವಲ್ಲ;  ನೀತಿ ಪರಿಷ್ಕರಿಸಿದ ಕೇಂದ್ರ  

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮಿತಿಮೀರುತ್ತಿದ್ದು, ಆಸ್ಪತ್ರೆಗಳಲ್ಲಿ ಬೆಡ್​, ಆಕ್ಸಿಜನ್ ವ್ಯವಸ್ಥೆ ಅಗತ್ಯಕ್ಕೆ ತಕ್ಕಂತೆ ಪೂರೈಕೆ ಆಗುತ್ತಿಲ್ಲ. ಇನ್ನು ಕೆಲವು ಕಡೆಗಳಲ್ಲಂತೂ ಕೊರೊನಾ ರೋಗಿಗಳು ಆಸ್ಪತ್ರೆ ಎದುರಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

ಯಾವುದೇ ಕೊವಿಡ್​ 19 ಕೇಂದ್ರಗಳಿಗೆ ದಾಖಲಾಗಲು ಕೊರೊನಾ ಪಾಸಿಟಿವ್ ವರದಿ ಕಡ್ಡಾಯವಲ್ಲ;  ನೀತಿ ಪರಿಷ್ಕರಿಸಿದ ಕೇಂದ್ರ  
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on: May 08, 2021 | 4:24 PM

ನವದೆಹಲಿ: ನಿರಂತರವಾಗಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ ವೈದ್ಯಕೀಯ ವ್ಯವಸ್ಥೆಗೆ ಸವಾಲಾಗಿ ಪರಿಣಮಿಸುತ್ತಿದೆ. ಈ ಹೊತ್ತಲ್ಲಿ ಕೊರೊನಾ ರೋಗಿಗಳು ಕೊವಿಡ್​ ಕೇಂದ್ರಗಳಿಗೆ ದಾಖಲಾಗುವ ಸಂಬಂಧ ಇರುವ ರಾಷ್ಟ್ರೀಯ ನೀತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಪರಿಷ್ಕರಿಸಿದೆ. ಈ ಹೊಸ ನೀತಿಯ ಅನ್ವಯ ಕೊವಿಡ್​-19 ಗೆ ಸಂಬಂಧಪಟ್ಟ ಯಾವುದೇ ಆರೋಗ್ಯ ಕೇಂದ್ರಗಳಿಗೆ ಪ್ರವೇಶ ಪಡೆಯಲು ಕೊರೊನಾ ಪಾಸಿಟಿವ್​ ರಿಪೋರ್ಟ್ ಕಡ್ಡಾಯವಲ್ಲ.

ಇಷ್ಟು ದಿನ ಕೊರೊನಾ ಲಕ್ಷಣಗಳು ಕಂಡುಬಂದ ಮೇಲೆ ತಪಾಸಣೆಗೆ ಒಳಗಾಗಿ, ಅದು ಪಾಸಿಟಿವ್​ ಬಂದ ಮೇಲಷ್ಟೇ ಹೋಗಿ ಕೊವಿಡ್​ 19 ಕಾಳಜಿ ಕೇಂದ್ರ (CCC), ನಿಗದಿತ ಕೊವಿಡ್ ಆರೋಗ್ಯ ಕೇಂದ್ರ (DCHC) ಅಥವಾ ನಿಗದಿತ ಕೊವಿಡ್ 19 ಆಸ್ಪತ್ರೆ(DCH)ಗೆ ಅಡ್ಮಿಟ್ ಆಗಬೇಕಿತ್ತು. ಅದೂ ಕೂಡ ಸೋಂಕಿನ ಗಂಭೀರತೆ ಪರಿಗಣಿಸಿ, ನಿಗದಿ ಪಡಿಸಲಾದ ಕೇಂದ್ರದಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯಬೇಕಿತ್ತು. ಆದರೆ ಇದೀಗ ಪರಿಷ್ಕರಣೆಗೊಂಡ ನೀತಿಯ ಅನ್ವಯ, ಈ ಮೂರರಲ್ಲಿ ಯಾವುದೇ ಕೇಂದ್ರಕ್ಕೆ ಅಡ್ಮಿಟ್ ಆಗಲು ಕೊವಿಡ್ 19 ಪಾಸಿಟಿವ್ ರಿಪೋರ್ಟ್ ಬೇಕೆಂದೇನೂ ಇಲ್ಲ. ಶಂಕಿತ ಕೊರೊನಾ ರೋಗಿಗಳೂ ಸಹ ಈ ಮೂರರಲ್ಲಿ ಯಾವುದೇ ಕೇಂದ್ರಗಳಿಗೆ ಹೋಗಿ ಚಿಕಿತ್ಸೆ ಪಡೆಯಬಹುದಾಗಿದೆ.

ಹಾಗೇ ಸಿಸಿಸಿ, ಡಿಸಿಎಚ್​ಸಿ, ಡಿಸಿಎಚ್​ ಕೇಂದ್ರಗಳು ಶಂಕಿತ ಕೊರೊನಾ ರೋಗಿಗಳು ಅಥವಾ ಸೌಮ್ಯ ಲಕ್ಷಣಗಳು ಇರವವರ ದಾಖಲಾತಿಗೆ ನಿರಾಕರಣೆ ಮಾಡುವಂತಿಲ್ಲ. ಸ್ಥಳೀಯರಿಗೆ ಮಾತ್ರ ಚಿಕಿತ್ಸೆ ಕೊಡುತ್ತೇವೆ. ಬೇರೆ ನಗರ, ಜಿಲ್ಲೆಗಳವರಿಗೆ ಚಿಕಿತ್ಸೆ ಕೊಡುವುದಿಲ್ಲ ಎಂದು ಹೇಳುವಂತಿಲ್ಲ. ಇಷ್ಟು ದಿನ ಆಯಾ ಕೇಂದ್ರಗಳಿಗೆ ನಿಗದಿ ಮಾಡಿದ್ದ ವ್ಯಾಪ್ತಿ ಇನ್ನು ಮುಂದೆ ಅನ್ವಯ ಆಗುವುದಿಲ್ಲ ಎಂದು ಪರಿಷ್ಕರಣ ರಾಷ್ಟ್ರೀಯ ನೀತಿಯಲ್ಲಿ ಉಲ್ಲೇಖವಾಗಿದೆ. ಇದೀಗ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮಿತಿಮೀರುತ್ತಿದ್ದು, ಆಸ್ಪತ್ರೆಗಳಲ್ಲಿ ಬೆಡ್​, ಆಕ್ಸಿಜನ್ ವ್ಯವಸ್ಥೆ ಅಗತ್ಯಕ್ಕೆ ತಕ್ಕಂತೆ ಪೂರೈಕೆ ಆಗುತ್ತಿಲ್ಲ. ಇನ್ನು ಕೆಲವು ಕಡೆಗಳಲ್ಲಂತೂ ಕೊರೊನಾ ರೋಗಿಗಳು ಆಸ್ಪತ್ರೆ ಎದುರಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದು ನಮ್ಮ ವ್ಯಾಪ್ತಿಗೆ ಬರುತ್ತಿಲ್ಲ.. ಕೊವಿಡ್​ ಪಾಸಿಟಿವ್​ ರಿಪೋರ್ಟ್ ತನ್ನಿ ಎಂದು ಹೇಳಿ ಆಸ್ಪತ್ರೆಗಳು ರೋಗಿಗಳನ್ನು ದಾಖಲು ಮಾಡಿಕೊಳ್ಳದೆ ಕಳಿಸುವ ಘಟನೆಯೂ ಆಗಾಗ ವರದಿಯಾಗುತ್ತಿದೆ. ಈ ಬೆನ್ನಲ್ಲೇ ಆರೋಗ್ಯ ಇಲಾಖೆ ರಾಷ್ಟ್ರೀಯ ನೀತಿಯನ್ನು ಪರಿಷ್ಕರಿಸಿದೆ.

ಇದನ್ನೂ ಓದಿ: ಉಚಿತವಾಗಿ 22 ಸಾವಿರ ಊಟ ಹಂಚಿದ ತಾಯಿ-ಮಗನ ಹಿಂದಿದೆ ಕಷ್ಟದ ಕಥೆ

ಲಾಕ್​ಡೌನ್ ಯಶಸ್ವಿಗೊಳಿಸಲು, ಕೊರೊನಾ ಸೋಂಕಿತರಿಗೆ ಸಹಾಯ ಮಾಡಲು ನಾವು ಸಿದ್ಧ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹೇಳಿಕೆ

Government revises National policy for admission of covid patients in Hospital

ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ