AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿಗೆ ಪೂರ್ಣ ಮರುಪಾವತಿ, ಊಟ, ವಸತಿ ಸೌಲಭ್ಯ; ವಿಮಾನ ರದ್ದುಗೊಳಿಸಿದ ಇಂಡಿಗೋಗೆ ಸರ್ಕಾರ ಸೂಚನೆ

ಇಂಡಿಗೋ ವಿಮಾನಗಳ ರದ್ದತಿಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಪ್ರಯಾಣಿಕರಿಗೆ ಕೊನೆಗೂ ಕೇಂದ್ರ ಸರ್ಕಾರದಿಂದ ಭರವಸೆ ಸಿಕ್ಕಿದೆ. ವಿಮಾನಯಾನ ಸೇವೆಗಳ ಅಸ್ಥಿರತೆಯನ್ನು ತಕ್ಷಣವೇ ಸರಿಪಡಿಸುವಂತೆ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ. ಇಂಡಿಗೋ ಸೇರಿದಂತೆ ಎಲ್ಲಾ ಏರ್‌ಲೈನ್‌ಗಳಿಗೆ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಆದೇಶ ಹೊರಡಿಸಲಾಗಿದೆ. ಇದರಿಂದಾಗಿ ಇಂದು ಮಧ್ಯರಾತ್ರಿಯಿಂದಲೇ ಎಲ್ಲಾ ವಿಮಾನ ವೇಳಾಪಟ್ಟಿಗಳು ಸ್ಥಿರಗೊಂಡು ಸಾಮಾನ್ಯ ಸ್ಥಿತಿಗೆ ಮರಳುವ ನಿರೀಕ್ಷೆಯಿದೆ.

ಪ್ರಯಾಣಿಕರಿಗೆ ಪೂರ್ಣ ಮರುಪಾವತಿ, ಊಟ, ವಸತಿ ಸೌಲಭ್ಯ; ವಿಮಾನ ರದ್ದುಗೊಳಿಸಿದ ಇಂಡಿಗೋಗೆ ಸರ್ಕಾರ ಸೂಚನೆ
Indigo Passengers In Bengaluru Airport
ಸುಷ್ಮಾ ಚಕ್ರೆ
|

Updated on: Dec 05, 2025 | 5:13 PM

Share

ನವದೆಹಲಿ, ಡಿಸೆಂಬರ್ 5: ಇಂಡಿಗೋ (IndiGo) ಏರ್​​ಲೈನ್ಸ್​​ನ ನೂರಾರು ವಿಮಾನಗಳನ್ನು ರದ್ದುಗೊಳಿಸಿದ್ದರಿಂದ ಸಾವಿರಾರು ಪ್ರಯಾಣಿಕರು ಪರದಾಡುತ್ತಿದ್ದಾರೆ. ಹಲವರು ವಿಮಾನ ನಿಲ್ದಾಣದಲ್ಲಿಯೇ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಪರಿಸ್ಥಿತಿಯನ್ನು ಸುಧಾರಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿದೆ. ಆದಷ್ಟು ಬೇಗ ಸಮಸ್ಯೆಯನ್ನು ಸರಿಪಡಿಸುವ ಕ್ರಮಗಳನ್ನು ಜಾರಿಗೆ ತರುವಂತೆ ವಿಮಾನಯಾನ ಸಂಸ್ಥೆಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ.

ಪರಿಸ್ಥಿತಿಯನ್ನು ನಿಭಾಯಿಸಲು ಮತ್ತು ಸೇವೆಗಳು ಸಾಧ್ಯವಾದಷ್ಟು ಬೇಗ ಸ್ಥಿರ ಸ್ಥಿತಿಗೆ ತರಲು 2 ಔಪಚಾರಿಕ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ. “ಇಂದು ಮಧ್ಯರಾತ್ರಿಯ ವೇಳೆಗೆ ಎಲ್ಲಾ ವಿಮಾನಗಳ ವೇಳಾಪಟ್ಟಿ ಸ್ಥಿರಗೊಂಡು ಸಾಮಾನ್ಯ ಸ್ಥಿತಿಗೆ ಮರಳುವ ನಿರೀಕ್ಷೆಯಿದೆ. ಮುಂದಿನ ಎರಡು ದಿನಗಳಲ್ಲಿ ಪೂರ್ಣ ಸೇವೆಗಳು ಸಹಜ ಸ್ಥಿತಿಗೆ ಬರಲಿದೆ. ವಿಮಾನ ರದ್ದತಿಯಾದ ಪ್ರಯಾಣಿಕರಿಗೆ ಪೂರ್ಣ ಮರುಪಾವತಿ ಮಾಡಲಾಗುವುದು” ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಇಂಡಿಗೋ ವಿಮಾನ ರದ್ದಾಗಿದ್ದರಿಂದ ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ಕಾರ್ಯಾಚರಣೆಯಲ್ಲಿನ ಅಡಚಣೆಗಳಿಂದಾಗಿ ಸಿಲುಕಿರುವವರಿಗೆ ವಿಮಾನಯಾನ ಸಂಸ್ಥೆಗಳು ಹೋಟೆಲ್ ವಸತಿ ವ್ಯವಸ್ಥೆ ಮಾಡುವಂತೆ ಸರ್ಕಾರ ಸೂಚಿಸಿದೆ. ಹಿರಿಯ ನಾಗರಿಕರಿಗೆ ವಿಶ್ರಾಂತಿ ಕೊಠಡಿ ಸೌಲಭ್ಯ ನೀಡುವ ಮೂಲಕ ಮತ್ತು ಅವರಿಗೆ ಯಾವುದೇ ಅನಗತ್ಯ ಅನಾನುಕೂಲತೆ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಹೇಳಿದೆ.

ಇಂಡಿಗೋ ಗುರುವಾರ 550ಕ್ಕೂ ಹೆಚ್ಚು ವಿಮಾನಗಳನ್ನು ಮತ್ತು ಶುಕ್ರವಾರ 400ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿದೆ. ರದ್ದತಿ ಮತ್ತು ವಿಳಂಬಗಳಿಂದ ಉಂಟಾದ ರಾಷ್ಟ್ರವ್ಯಾಪಿ ಅಡಚಣೆಗಳು ಸಾವಿರಾರು ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ಸಿಲುಕಿಸಿದ್ದರಿಂದ ಇಂಡಿಗೋ ಇಂದು ಸಾರ್ವಜನಿಕ ಕ್ಷಮೆಯಾಚನೆಯನ್ನು ಮಾಡಿದೆ.

ಇದನ್ನೂ ಓದಿ: ಮುಂದುವರಿದ ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯ: ಇವತ್ತು ಎಷ್ಟು ಫ್ಲೈಟ್​​ಗಳು ಕ್ಯಾನ್ಸಲ್​?

ವಿಮಾನ ರದ್ದಾದರೆ ಟಿಕೆಟ್ ದರವನ್ನು ಸಂಪೂರ್ಣ ಮರುಪಾವತಿ ನೀಡಬೇಕು. ವಿಳಂಬವಾದರೆ ಏರ್‌ಲೈನ್‌ಗಳು ಬುಕ್ ಮಾಡಿರುವ ಹೋಟೆಲ್‌ಗಳಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಬೇಕು. ಹಿರಿಯ ನಾಗರಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ವಿಶೇಷ ಕ್ರಮ ಕೈಗೊಳ್ಳಬೇಕು. ಹಿರಿಯ ಪ್ರಯಾಣಿಕರಿಗೆ ಲಾಂಜ್ ಪ್ರವೇಶ ಒದಗಿಸಬೇಕು. ವಿಳಂಬವಾದ ವಿಮಾನಗಳ ಪ್ರಯಾಣಿಕರಿಗೆ ಉಪಹಾರ ಮತ್ತು ಇತರ ಅಗತ್ಯ ವಸ್ತುಗಳನ್ನು ಒದಗಿಸಬೇಕು ಎಂದು ಸರ್ಕಾರ ಇಂಡಿಗೋಗೆ ಆದೇಶ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ